ರಾಮನಗರ: ರಾಮನಗರ ಜಿಲ್ಲೆಯ ಅಭಿವೃದ್ಧಿ ಬಗ್ಗೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವಣ ಗಲಾಟೆಯ ಸಮ್ಮುಖದಲ್ಲಿ ಡಿಕೆ ಬ್ರದರ್ಸ್ ಗೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಟ್ವಿಟರ್ ನಲ್ಲಿ ಕುಟುಕಿದ್ದಾರೆ. ಕಲ್ಲು ಬಂಡೆಗಳನ್ನು ನುಂಗಿ, ಕೋಟೆ ಕಟ್ಟಿಕೊಂಡು ಮೆರೆಯುತ್ತಿರುವ ‘ಡಿಸೈನ್ ವೀರರಿಗೆʼ ನಮ್ಮ ನೆಲ, ನಮ್ಮ ಜಲ ಎನ್ನುವುದು ಈಗ ನೆನಪಿಗೆ ಬಂದಿದೆ. ಆಭದ್ರತೆ ಅಡಿಪಾಯವನ್ನೇ ಅಲ್ಲಾಡಿಸುತ್ತಿದೆ! ಅಲ್ಲವೇ? ಕನಕಪುರ, ರಾಮನಗರ ಯಾರೊಬ್ಬರ ಸ್ವತ್ತಲ್ಲ. ಈ ನೆಲದ ಮಕ್ಕಳು ಎಂದು ಬಡಾಯಿ ಬಿಡುವ ಸಹೋದರರು ಇದೇ ನೆಲವನ್ನು ಹೇಗೆಲ್ಲಾ ನುಂಗಿ ನೀರು ಕುಡಿಯುತ್ತಿದ್ದಾರೆ. ಆಟ ಎಂದ ಮೇಲೆ ಅಂತ್ಯವೂ ಇರಬೇಕಲ್ಲವೇ? ಆ ಕ್ಷಣ ಹತ್ತಿರ ಬಂದಿದೆಯೇನೋ. ಹರದನಹಳ್ಳಿ ಜನ್ಮಸ್ಥಳ, ಬಿಡದಿ ಕರ್ಮಸ್ಥಳ, ಇದುವೇ ನನ್ನಗೆ ಧರ್ಮಸ್ಥಳ ಎಂದು ಗುಡುಗಿದ್ದಾರೆ.
ಕಲ್ಲು ಬಂಡೆಗಳನ್ನು ನುಂಗಿದ ಡಿಸೈನ್ ವೀರರಿಗೆ ಈಗ ನೆನಪಿಗೆ ಬಂದಿದೆ. ಇದು ನಮ್ಮ ನೆಲ, ನಮ್ಮ ಜಲ ಎನ್ನುವುದು ಈಗ ನೆನಪಿಗೆ ಬಂದಿದೆ ಎಂದು ಡಿಕೆ ಸಹೋದರರ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿದ್ದಾರೆ. ಕನಕಪುರ, ರಾಮನಗರ ಯಾರೋಬ್ಬರ ಸ್ವತ್ತಲ್ಲ. ಇದೇ ನೆಲವನ್ನ ಸಹೋದರರು ಹೇಗೆಲ್ಲಾ ನುಂಗಿದ್ದಾರೆಂದು ಗೊತ್ತು. ರಾಮನಗರಕ್ಕೆ ರಿಯಲ್ ಎಸ್ಟೇಟ್ ಮಾಡಲಿಕ್ಕೆ ನಾನು ಬಂದವನಲ್ಲ ಎಂದು ಡಿಕೆ ಸಹೋದರರ ವಿರುದ್ಧ ಕುಮಾರಸ್ವಾಮಿ ಟ್ವೀಟ್ ವಾರ್ ಮಾಡಿದ್ದಾರೆ. ಹಾದಿ ತಪ್ಪಿದ ರಾಜಕಾರಣ ಬಹಳ ದಿನ ನಡೆಯಲ್ಲ. ಹಣ, ದರ್ಪ, ಧಮ್ಕಿ, ಧಿಮಾಕು ಸಾಕು. ಜನ ಕೊಟ್ಟು ನೋಡ್ತಾರೆ. ಕೆಲವೊಮ್ಮೆ ಬಿಟ್ಟೂ ನೋಡುತ್ತಾರೆ. ಅನುಭವದಿಂದ ಪಾಠ ಕಲಿತರೆ ಒಳ್ಳೆಯದು ಎಂದು ಸರಣಿ ಟ್ವೀಟ್ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ಎಚ್ಚರಿಸಿದ್ದಾರೆ.
ಮಾಜಿ ಸಿಎಂ ಕುಮಾರಸ್ವಾಮಿ ಸರಣಿ ಟ್ವೀಟ್
ಕಲ್ಲು ಬಂಡೆಗಳನ್ನು ನುಂಗಿ, ಮಣ್ಣು ಬಗೆದು ಪರರಿಗೆ ಬಿಕರಿ ಮಾಡಿಕೊಂಡು ಕೋಟೆ ಕೊತ್ತಲಗಳನ್ನು ಕಟ್ಟಿಕೊಂಡು ಮೆರೆಯುತ್ತಿರುವ ʼಡಿಸೈನ್ ವೀರರಿಗೆʼ ನಮ್ಮ ನೆಲ, ನಮ್ಮ ಜಲ ಎನ್ನುವುದು ಈಗ ನೆನಪಿಗೆ ಬಂದಿದೆ. ಆಭದ್ರತೆ ಅಡಿಪಾಯವನ್ನೇ ಅಲ್ಲಾಡಿಸುತ್ತಿದೆ! ಅಲ್ಲವೇ? 1/5
— H D Kumaraswamy (@hd_kumaraswamy) January 4, 2022
Published On - 10:31 am, Tue, 4 January 22