Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ ಎಸಿ ಕೋರ್ಟ್ ಸ್ಥಳಾಂತರ: ಜಿಲ್ಲಾಡಳಿತ ವಿರುದ್ಧ ವಕೀಲರ ಪ್ರತಿಭಟನೆ, ಕುಮಾರಸ್ವಾಮಿ ಸಾಥ್​​

ರಾಮನಗರ ಜಿಲ್ಲಾಡಳಿತದ ವಿರುದ್ಧದ ವಕೀಲರ ಪ್ರತಿಭಟನೆಗೆ ಮಾಜಿ ಮುಖ್ಯಮಂತ್ರಿ ಹೆಚ್​​ಡಿ ಕುಮಾರಸ್ವಾಮಿ ಬೆಂಬಲ ವ್ಯಕ್ತಪಡಿಸಿದ್ದಾರೆ. ರಾಮನಗರ ನ್ಯಾಯಾಲಯಕ್ಕೆ ಭೇಟಿ ನೀಡಿ ವಕೀಲರೊಂದಿಗೆ ಕೆಲಕಾಲ ಚರ್ಚಿಸಿದರು. ಈ ವೇಳೆ ಉಪ ವಿಭಾಗಾಧಿಕಾರಿ ನ್ಯಾಯಾಲಯವನ್ನು ಜಿಲ್ಲಾ ಕೇಂದ್ರದಿಂದ ಸ್ಥಳಾಂತಿರಿಸುವ ಸರ್ಕಾರದ ಆದೇಶದ ವಿರುದ್ಧ ಸದನದಲ್ಲಿ ಧ್ವನಿ ಎತ್ತುವುದಾಗಿ ವಕೀಲರಿಗೆ ಭರವಸೆ ನೀಡಿದರು.

ರಾಮನಗರ ಎಸಿ ಕೋರ್ಟ್ ಸ್ಥಳಾಂತರ: ಜಿಲ್ಲಾಡಳಿತ ವಿರುದ್ಧ ವಕೀಲರ ಪ್ರತಿಭಟನೆ, ಕುಮಾರಸ್ವಾಮಿ ಸಾಥ್​​
ವಕೀಲರೊಂದಿಗೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ವಿವೇಕ ಬಿರಾದಾರ

Updated on:Nov 24, 2023 | 12:46 PM

ರಾಮನಗರ ನ.24: ಕಂದಾಯಕ್ಕೆ ಸಂಬಂಧಿಸಿದ ಮೇಲ್ಮನವಿ ಪ್ರಕರಣಗಳ ಉಪ ವಿಭಾಗಾಧಿಕಾರಿ ನ್ಯಾಯಾಲಯವನ್ನು ಜಿಲ್ಲಾ ಕೇಂದ್ರ ರಾಮನಗರ (Ramnagar) ದಿಂದ ಕನಕಪುರ ತಾಲೂಕು ಕೇಂದ್ರಕ್ಕೆ ಸ್ಥಳಾಂತರಿಸಿರುವುದನ್ನು ಖಂಡಿಸಿ, ಜಿಲ್ಲಾಡಳಿತದ ವಿರುದ್ಧ ರಾಮನಗರ ವಕೀಲರ ಸಂಘ ಪ್ರತಿಭಟನೆ ನಡೆಸಿತು. ವಕೀಲರ (Lawyers) ಪ್ರತಿಭಟನೆಗೆ ಮಾಜಿ ಮುಖ್ಯಮಂತ್ರಿ ಹೆಚ್​​ಡಿ ಕುಮಾರಸ್ವಾಮಿ (HD Kumaraswamy) ಬೆಂಬಲ ವ್ಯಕ್ತಪಡಿಸಿದ್ದಾರೆ. ರಾಮನಗರ ನ್ಯಾಯಾಲಯಕ್ಕೆ ಭೇಟಿ ನೀಡಿ ವಕೀಲರೊಂದಿಗೆ ಕೆಲಕಾಲ ಚರ್ಚಿಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಹೆಚ್​ಡಿ ಕುಮಾರಸ್ವಾಮಿ, ಉಪವಿಭಾಗಧಿಕಾರಿ ನ್ಯಾಯಾಲಯವನ್ನು ಒಂದು ತಾಲೂಕಿನಲ್ಲಿ ನಡೆಸಲು ತೀರ್ಮಾನ ಮಾಡಿದ್ದಾರೆ. ಇಂತಹ ತೀರ್ಮಾನ ರಾಜ್ಯದ ಯಾವುದೇ ಕ್ಷೇತ್ರದಲ್ಲಿ ಇಲ್ಲ. ಈ ರೀತಿಯ ತೀರ್ಮಾನ ಎಲ್ಲರಿಗೂ ಅಚ್ಚರಿ ತಂದಿದೆ ಎಂದು ಹೇಳಿದರು.

ಈ ನಿರ್ಣಯದ ಬಗ್ಗೆ ವಕೀಲರು ಪ್ರತಿಭಟನೆ ಮಾಡಿದ್ದಾರೆ. ಅವೈಜ್ಞಾನಿಕ ನಿರ್ಧಾರ ಸರಿಯಲ್ಲ. ಇದು ಸರ್ಕಾರದ ಆದೇಶವೋ, ಜಿಲಾಧಿಕಾರಿ ಆದೇಶವೋ ಅಥವಾ ಎಸಿಯವರ ಸ್ವಂತ ತೀರ್ಮಾನವೇ? ಹಾಗೆ ಮಾಡುವುದಿದ್ದರೇ ನಮ್ಮ ತಾಲೂಕಿನಲ್ಲೂ ಬಂದು ಉಪ ವಿಭಾಗಾಧಿಕಾರಿ ನ್ಯಾಯಾಲಯ ನಡೆಸಿ ಎಂದು ಒತ್ತಾಯಿಸಿದರು.

ಇದನ್ನೂ ಓದಿ: ರಾಮನಗರ: ಕೋರ್ಟ್​​ ಆವರಣದಲ್ಲೇ ಶಾಸಕ ಇಕ್ಬಾಲ್ ಹುಸೇನ್ ತರಾಟೆಗೆ ತೆಗೆದುಕೊಂಡ ವಕೀಲರು

ಇದು ತುಘಲಕ್ ಸಂಸ್ಕೃತಿ. ಈ ರೀತಿಯ ತೀರ್ಮಾನ ಮಾಡಲು ಅವಕಾಶವಿಲ್ಲ. ಮಾಡಿದರೇ ಇಡೀ ರಾಜ್ಯಕ್ಕೆ ಅನ್ವಯವಾಗುವ ಹಾಗೆ ಮಾಡಿ. ಕೇವಲ ಕನಕಪುರಕ್ಕೆ ಮಾತ್ರ ಏಕೆ. ಜಿಲ್ಲಾ ಕೇಂದ್ರದಿಂದ ಎಸಿ‌ ಕೋರ್ಟ್​ನ್ನು ತಾಲೂಕಿಗೆ ಸ್ಥಳಾಂತರ ಮಾಡೋದು ಎಷ್ಟು ಸರಿ ? ನಿಮ್ಮ (ವಕೀಲರ) ಪರವಾಗಿ ನಾನು ಸದನದಲ್ಲಿ ಪ್ರಸ್ತಾಪ ಮಾಡುತ್ತೇವೆ. ಸರ್ಕಾರದ ಹುಡುಗಾಟಿಕೆಯ ನಿರ್ಧಾರದ ಬಗ್ಗೆ ಧ್ವನಿ ಎತ್ತಬೇಕು. ಸಮಸ್ಯೆಗಳನ್ನು ಇವರೇ ಉದ್ಭವ ಮಾಡುತ್ತಾರೆ. ನಾನು ನಿಮ್ಮ ಜೊತೆ ಇರುತ್ತೇನೆ, ಸದನದಲ್ಲಿ ಇದನ್ನ ಚರ್ಚೆ ಮಾಡುತ್ತೇನೆ ಎಂದು ವಕೀಲರಿಗೆ ಭರವಸೆ ನೀಡಿದರು.

ಏನಿದು ಪ್ರಕರಣ

ಕಂದಾಯಕ್ಕೆ ಸಂಬಂಧಿಸಿದ ಮೇಲ್ಮನವಿ ಪ್ರಕರಣಗಳ ಉಪ ವಿಭಾಗಾಧಿಕಾರಿ ನ್ಯಾಯಾಲಯವನ್ನು ಜಿಲ್ಲಾ ಕೇಂದ್ರ ರಾಮನಗರದಿಂದ ಕನಕಪುರ ತಾಲೂಕು ಕೇಂದ್ರಕ್ಕೆ ಸ್ಥಳಾಂತರಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಇದರ ವಿರುದ್ಧ ವಕೀಲರು ಪ್ರತಿಭಟನೆ ಮಾಡುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:38 pm, Fri, 24 November 23

VIDEO: ಹಾರುವ ಹಾರಿಸ್... ಅದ್ಭುತ ಕ್ಯಾಚ್ ಹಿಡಿದ ರೌಫ್
VIDEO: ಹಾರುವ ಹಾರಿಸ್... ಅದ್ಭುತ ಕ್ಯಾಚ್ ಹಿಡಿದ ರೌಫ್
ಬೆಂಗಳೂರಲ್ಲಿ ಕರ್ನಾಟಕ ಬಂದ್​ಗೆ ಮಿಶ್ರ ಪ್ರತಿಕ್ರಿಯೆ
ಬೆಂಗಳೂರಲ್ಲಿ ಕರ್ನಾಟಕ ಬಂದ್​ಗೆ ಮಿಶ್ರ ಪ್ರತಿಕ್ರಿಯೆ
ಪ್ರತಿಭಟನೆಗೆ ಬಂದ್ ಬಿಟ್ಟು ಪರ್ಯಾಯ ದಾರಿ ಹುಡುಕಬೇಕು: ಆಟೋರಿಕ್ಷಾ ಚಾಲಕರು
ಪ್ರತಿಭಟನೆಗೆ ಬಂದ್ ಬಿಟ್ಟು ಪರ್ಯಾಯ ದಾರಿ ಹುಡುಕಬೇಕು: ಆಟೋರಿಕ್ಷಾ ಚಾಲಕರು
ಕಮೆಂಟೇಟರ್ ಜಾನಿ ನಿಜವಾದ ಹೆಸರೇನು? ಈ ಹೆಸರು ಬಂದಿದ್ದು ಹೇಗೆ?
ಕಮೆಂಟೇಟರ್ ಜಾನಿ ನಿಜವಾದ ಹೆಸರೇನು? ಈ ಹೆಸರು ಬಂದಿದ್ದು ಹೇಗೆ?
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್