AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನಪಟ್ಟಣ: ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​ ವೇನಲ್ಲಿ ಭೀಕರ ಅಪಘಾತ; ಐವರ ಸಾವು

ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಲಂಬಾಣಿ ತಾಂಡಾ ಬಳಿ ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​ ವೇನಲ್ಲಿ ಶನಿವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.

ಚನ್ನಪಟ್ಟಣ: ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​ ವೇನಲ್ಲಿ ಭೀಕರ ಅಪಘಾತ; ಐವರ ಸಾವು
ಸಾಂದರ್ಭಿಕ ಚಿತ್ರ
Ganapathi Sharma
|

Updated on:Apr 22, 2023 | 7:05 PM

Share

ಚನ್ನಪಟ್ಟಣ: ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಲಂಬಾಣಿ ತಾಂಡಾ ಬಳಿ ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​ ವೇನಲ್ಲಿ (Bengaluru Mysuru Expressway) ಶನಿವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) ಐವರು ಮೃತಪಟ್ಟಿದ್ದಾರೆ. ಈ ಪೈಕಿ ಮೂವರು ಸ್ಥಳದಲ್ಲೇ ಮೃತಪಟ್ಟರೆ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ನೂತನ ಬೆಂಗಳೂರು ಮೈಸೂರು ದಶಪಥ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಆಲ್ಟೊ ಕಾರು ಟೈರ್​ ಸ್ಫೋಟಗೊಂಡು ನಿಯಂತ್ರಣತಪ್ಪಿ ಡಿವೈಡರ್ ದಾಟಿ ಪಕ್ಕದ ರಸ್ತೆಯಲ್ಲಿ ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಆಲ್ಟೋ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಆಲ್ಟೊ ಕಾರಿನ ಟೈರ್​ ಸ್ಫೋಟವಾಗಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ರವಿ ಪೂಜಾರ್​ (45), ಲಕ್ಷ್ಮೀ ಪೂಜಾರ್(40)​, ಇಂಚರಾ ಪೂಜಾರ್ (15), ಶಾಂತಲಾ ಪೂಜಾರ್​(10), ಸಿರಿ ಪೂಜಾರ್ (3) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಕೆಂಗೇರಿಯಲ್ಲಿ ನೆಲೆಸಿದ್ದ ರವಿ ಪೂಜಾರ್​ ಕುಟುಂಬಸ್ಥರು ಬೆಂಗಳೂರಿನಿಂದ ಟಿ.ನರಸೀಪುರಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ರವಿ ಪೂಜಾರ್ ಅವರು ರಾಜೀವ್ ಗಾಂಧಿ ಆರೋಗ್ಯ ವಿವಿಯಲ್ಲಿ ಕ್ಲರ್ಕ್​ ಆಗಿದ್ದರು. ಸ್ಥಳಕ್ಕೆ ಚನ್ನಪಟ್ಟಣ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಮತ್ತೊಂದು ಅಪಘಾತ; ಟೋಲ್ ತಪ್ಪಿಸಲು ಹೋಗಿ ಬೈಕ್ ಸವಾರನ ಬಲಿ ಪಡೆದ KSRTC ಬಸ್

ಕೆಎಸ್‌ಆರ್‌ಟಿಸಿ ಬಸ್ ಕಣಿಮಿಣಿಕೆ ಬಳಿ ಟೋಲ್ ಕಟ್ಟುವುದನ್ನು ತಪ್ಪಿಸಲು ಹೋಗಿ ಬೈಕ್​ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಕಳೆದ ತಿಂಗಳು ಸಂಭವಿಸಿತ್ತು. ಹಿಂಬದಿ ಸವಾರ ಗಾಯಗೊಂಡಿದ್ದರು. ಈ ಕಹಿ ಘಟನೆಯ ನೆನಪು ಮಾಸುವ ಮುನ್ನವೇ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ.

ಕುರಿಗಳನ್ನು ತೊಳೆಯಲು ಹೋಗಿದ್ದವರು ಕೆರೆ ಪಾಲು

ಕುರಿಗಳ ಮೈತೊಳೆಯಲು ಹೋಗಿದ್ದ ಒಂದೇ ಕುಟುಂಬದ ಮೂವರು ದುರ್ಮರಣಕ್ಕೀಡಾದ ಘಟನೆ ಮಾಗಡಿ ತಾಲೂಕಿನ ಮುತ್ತಸಾಗರ ಬಳಿ ಕೆರೆಯಲ್ಲಿ ಶನಿವಾರ ಸಂಭವಿಸಿದೆ. ಮೃತರನ್ನು ನಾಗರಾಜು (30), ಜ್ಯೋತಿ (35) ಮತ್ತು ಲಕ್ಷ್ಮೀ (22)  ಎಂದು ಗುರುತಿಸಲಾಗಿದೆ. ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:52 pm, Sat, 22 April 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್