AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ ಕೊಂದು ಪತಿ ಆತ್ಮಹತ್ಯೆಗೆ ಶರಣು: ಗಂಡ ಹೆಂಡ್ತಿ ಜಗಳದಲ್ಲಿ ಮಗು ಅನಾಥ!

ಸಂಸಾರ ಅಂದ ಮೇಲೆ ಮನೆಯಲ್ಲಿ ಸಣ್ಣಪುಟ್ಟ ಗಲಾಟೆ ಇರುತ್ತೆ. ಅದು ಅತ್ತೆ ಸೊಸೆ ನಡುವೆ ಆಗಿರಹುದು. ಇಲ್ಲ ಗಂಡ ಹೆಂಡತಿ ನಡುವೆ ಇರಬಹುದು. ಕುಟುಂಬದಲ್ಲಿ ಜಗಳಗಳು ಮಾಮೂಲಿ. ಆದ್ರೆ, ಈ ದಂಪತಿಯ ಗಲಾಟೆಯಲ್ಲಿ ಕೂಸು ಅನಾಥವಾಗಿದೆ. ಹೌದು...ಪತಿ ಪತ್ನಿಯನ್ನು ಕೊಂದು ಬಳಿಕ ತಾನು ಸಹ ಆತ್ಮಗತ್ಯೆಗೆ ಶರಣಾಗಿದ್ದಾನೆ.

ಪತ್ನಿ ಕೊಂದು ಪತಿ ಆತ್ಮಹತ್ಯೆಗೆ ಶರಣು: ಗಂಡ ಹೆಂಡ್ತಿ ಜಗಳದಲ್ಲಿ ಮಗು ಅನಾಥ!
ವತ್ಸಲ, ನವೀನ್
ರಮೇಶ್ ಬಿ. ಜವಳಗೇರಾ
|

Updated on: Dec 15, 2025 | 10:38 PM

Share

ರಾಮನಗರ, (ಡಿಸೆಂಬರ್ 15): ಕೌಟುಂಬಿಕ ಕಲಹ ಹಿನ್ನೆಲೆ ಪತ್ನಿಯನ್ನ (Wife) ಕೊಂದು ಪತಿ (Husband) ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ದಕ್ಷಿಣ (Bengaluru South) ಜಿಲ್ಲೆ ರಾಮನಗರ (Ramanagara) ತಾಲೂಕಿನ ಹಾಗಲಹಳ್ಳಿ ಗ್ರಾಮದಲ್ಲಿ ನಡೆದಿದೆ. ನವೀನ್ ಕುಮಾರ್ (35) ಎನ್ನುವಾತ ತನ್ನ ಪತ್ನಿ ವತ್ಸಲಳನ್ನು(30) ಕೊಂದು ಬಳಿ ತಾನು ಸಹ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದರಿಂದ ತಂದೆ-ತಾಯಿಯನ್ನು ಕಳೆದುಕೊಂಡ 7 ವರ್ಷದ ಹೆಣ್ಣು ಮಗು ಅನಾಥವಾಗಿದೆ.

ನವೀನ್ ಹಾಗೂ ವತ್ಸಲ ಕಳೆದ 8 ವರ್ಷಗಳ ಹಿಂದೆ ಮದುವೆಯಾಗಿದ್ದು, ಈ ದಂಪತಿಗೆ 7 ವರ್ಷದ ಹೆಣ್ಣುಮಗು ಇದೆ. ಸಣ್ಣಪುಟ್ಟ ವಿಚಾರಕ್ಕೆ ಪತಿ, ಪತ್ನಿ ಜಗಳವಾಡುತ್ತಿದ್ದರು. ಕಳೆದ ವಾರ ದಂಪತಿ ಗಲಾಟೆ ಮಾಡಿಕೊಂಡು ಮಹಿಳಾ ಠಾಣೆ ಮೆಟ್ಟಿಲೇರಿದ್ದರು. ಇಂದು (ಡಿಸೆಂಬರ್ 15) ಗಲಾಟೆ ವಿಕೋಪಕ್ಕೆ ತಿರುಗಿದ್ದು, ನವೀನ್​​, ವಾತ್ಸಲಳನ್ನು ಕತ್ತುಹಿಸುಕಿ ಕೊಂದಿದ್ದಾನೆ. ಬಳಿಕ ನವೀನ್ ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇದನ್ನೂ ಓದಿ: ಡೆತ್ ನೋಟ್ ಬರೆದಿಟ್ಟು MBA ವಿದ್ಯಾರ್ಥಿ ಆತ್ಮಹತ್ಯೆ: ಯುವಕನ ಬಲಿಪಡೆದ ಬೆತ್ತಲೆ ‌ಫೋಟೋ

ಹೆಂಡ್ತಿಯನ್ನು ಮಂಚದ ಮೇಲೆಯೇ ಕೊಂದು ಬಳಿಕ ಮೇಲೆ ಇದ್ದ ಫ್ಯಾನ್​​ಗೆ ನೇಣುಬಿಗಿದುಕೊಂಡು ಆತ್ಯೆಹತ್ಯೆ ಮಾಡಿಕೊಂಡಿದ್ದು, ನವೀನ್ ಮೃತದೇಹ ಪತ್ನಿ ವಾತ್ಸಲ ಮೃತದೇಹದ ಮೇಲೆ ನೇತಾಡುತ್ತಿರುವ ದೃಶ್ಯ ಕರುಳು ಹಿಂಡುವಂತಿದೆ. ಇನ್ನು ಗಂಡ ಹೆಂಡತಿ ಜಗಳದಲ್ಲಿ ಪುಟ್ಟ ಮಗು ಮಾತ್ರ ಅನಾಥವಾಗಿದೆ.

ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ರಾಮನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ