ಅಧಿಕಾರಿಗಳ ವರ್ಗಾವಣೆಗೂ ನನಗೂ ಯಾವುದೇ ಸಂಬಂಧ ಇಲ್ಲ: ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಸ್ಪಷ್ಟನೆ

ಇನ್ಸ್​​ಪೆಕ್ಟರ್​ಗಳ ವರ್ಗಾವಣೆಯಲ್ಲಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಹಸ್ತಕ್ಷೇಪ ಆರೋಪ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಧಿಕಾರಿಗಳ ವರ್ಗಾವಣೆಗೂ ನನಗೂ ಯಾವುದೇ ಸಂಬಂಧ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಅಧಿಕಾರಿಗಳ ವರ್ಗಾವಣೆಗೂ ನನಗೂ ಯಾವುದೇ ಸಂಬಂಧ ಇಲ್ಲ: ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಸ್ಪಷ್ಟನೆ
ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ಗಂಗಾಧರ​ ಬ. ಸಾಬೋಜಿ

Updated on:Aug 05, 2023 | 7:28 PM

ರಾಮನಗರ, ಆಗಸ್ಟ್​ 05: ಅಧಿಕಾರಿಗಳ ವರ್ಗಾವಣೆಗೂ ನನಗೂ ಯಾವುದೇ ಸಂಬಂಧ ಇಲ್ಲ ಎಂದು ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ (DK Suresh) ಸ್ಪಷ್ಟನೆ ನೀಡಿದ್ದಾರೆ. ಇನ್ಸ್​​ಪೆಕ್ಟರ್​ಗಳ ವರ್ಗಾವಣೆಯಲ್ಲಿ ಡಿ.ಕೆ.ಸುರೇಶ್ ಹಸ್ತಕ್ಷೇಪ ಆರೋಪ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರ ಉತ್ತಮ ಆಡಳಿತ ಕೊಡಲಿ ಅಂತಾ ಬೆಂಬಲ ಕೊಟ್ಟಿದ್ದೇನೆ ಎಂದು ಹೇಳಿದರು.

ಪಕ್ಷದಲ್ಲಿ ಬೇರೆ ಬೇರೆ ವಿಚಾರಕ್ಕೆ ಸಲಹೆ ನೀಡಿದ್ದೇನೆ. ಸರ್ಕಾರದ ಯಾವ ವಿಚಾರದಲ್ಲೂ ನಾನು ಮಧ್ಯಪ್ರವೇಶ ಮಾಡಲ್ಲ. ಆಡಳಿತ ವ್ಯವಸ್ಥೆಯಲ್ಲಿ ಮಧ್ಯಪ್ರವೇಶ ಮಾಡಲು ನಾನು ಮಂತ್ರಿಯಲ್ಲ ಎಂದಿದ್ದಾರೆ.

ಇದನ್ನೂ ಓದಿ: ಕುಮಾರಸ್ವಾಮಿಗೆ ನಾವು ಉತ್ತರ ಕೊಡುವುದನ್ನು ಬಿಡಬೇಕು -ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಲೇವಡಿ

ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಆರೋಪ ವಿಚಾರವಾಗಿ ಮಾತನಾಡಿದ ಅವರು, ಆ ಬಗ್ಗೆ ನನಗೆ ಗೊತ್ತಿಲ್ಲ.​ ಅವರ ಸರ್ಕಾರದಲ್ಲಿನ ವರ್ಗಾವಣೆ ರೇಟ್ ಕಾರ್ಡ್ ಬಗ್ಗೆ ಗೊತ್ತಿದೆ ಎಂದು ಹೇಳಿದ್ದಾರೆ.

ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ವಿರುದ್ಧ ಪರಮೇಶ್ವರ್ ಗರಂ

ತುಮಕೂರಿನಲ್ಲಿ ಗೃಹ ಇಲಾಖೆ ಸಚಿವ ಡಾ.ಪರಮೇಶ್ವರ್​ ಮಾತನಾಡಿದ್ದು, ಪೊಲೀಸ್ ವರ್ಗಾವಣೆ ವಿಚಾರದಲ್ಲಿ ಯಾವುದೇ ಗಲಾಟೆ ಆಗಿಲ್ಲ. ಹೆಚ್​ಡಿ ಕುಮಾರಸ್ವಾಮಿ ಆರೋಪಕ್ಕೆ ನಾನು ಉತ್ತರ ಕೊಡುವ ಅಗತ್ಯವಿಲ್ಲ ಎಂದು ಗರಂ ಆದರು.

ಇದನ್ನೂ ಓದಿ: ಗೃಹಜ್ಯೋತಿ ಯೋಜನೆ ಕಾರ್ಯಕ್ರಮಕ್ಕೆ ಅಜಯ್ ಸಿಂಗ್ ಗೈರು, ರೆಬಲ್ ಪಟ್ಟಿಗೆ ಮತ್ತೊಬ್ಬ ಕೈ ಶಾಸಕ?

ರಾಜ್ಯದ ಜನತೆಗೆ ಉತ್ತರ ಕೊಡುತ್ತೇನೆ. ಅವರಿಗೇನು ಉತ್ತರ ಕೊಡಬೇಕು. ಅವರು ಪಾಸಿಟಿವ್ ಸಲಹೆ ಕೊಡಲಿ, ನಾವು ಸ್ವೀಕಾರ ಮಾಡುತ್ತೇವೆ ಎಂದು ಹೇಳಿದ್ದಾರೆ.

ಹೊಸ ಸರ್ಕಾರ ಬಂದಾಗ ವರ್ಗಾವಣೆ ಆಗುತ್ತೆ: ಸಚಿವ ಕೆ.ವೆಂಕಟೇಶ್

ಸರ್ಕಾರದ ವಿರುದ್ಧ ಹೆಚ್​ಡಿಕೆ ವರ್ಗಾವಣೆ ದಂಧೆ ಆರೋಪ ವಿಚಾರವಾಗಿ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಪ್ರತಿಕ್ರಿಯೆ ನೀಡಿದ್ದು, ವರ್ಗಾವಣೆ ಸಾಮಾನ್ಯ, ಹೊಸ ಸರ್ಕಾರ ಬಂದಾಗ ವರ್ಗಾವಣೆ ಆಗುತ್ತೆ. ಶಾಸಕರು ಕೇಳಿದಾಗ ಅಧಿಕಾರಿಗಳ ವರ್ಗಾವಣೆ ಆಗುವುದು ಸಾಮಾನ್ಯ. ಮಾಜಿ ಸಿಎಂ ಕುಮಾರಸ್ವಾಮಿ ಆರೋಪದಲ್ಲಿ ಯಾವುದೇ ಸತ್ಯವಿಲ್ಲ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:21 pm, Sat, 5 August 23