ರಾಮನಗರ: ಜಮೀನು ವಿಚಾರಕ್ಕೆ ಗಲಾಟೆ, ಒಡಹುಟ್ಟಿದ ತಂಗಿಯ ಮೇಲೆಯೇ ದೊಣ್ಣೆಯಿಂದ ಹೊಡೆದು ದರ್ಪ

ಜಮೀನು ಹಂಚಿಕೆ ವಿಚಾರಕ್ಕೆ ಕುಟುಂಬದಲ್ಲಿ ಕುಟುಂಬದ ನಡುವೆ ಗಲಾಟೆ ಶುರುವಾಗಿತ್ತು. ಈ ವೇಳೆ ಗಲಾಟೆ ವಿಕೋಪಕ್ಕೆ ತಿರುಗಿ ರಾಜಣ್ಣ ಎಂಬುವವರು ತಮ್ಮ ತಂಗಿ ಜಯಮ್ಮ ಎಂಬ ಮಹಿಳೆ ಮೇಲೆ ಕಾಲಿನಿಂದ ಒದ್ದು, ದೊಣ್ಣೆಯಿಂದ ಹೊಡೆದು ದರ್ಪ ತೋರಿದ್ದಾರೆ.

ರಾಮನಗರ: ಜಮೀನು ವಿಚಾರಕ್ಕೆ ಗಲಾಟೆ, ಒಡಹುಟ್ಟಿದ ತಂಗಿಯ ಮೇಲೆಯೇ ದೊಣ್ಣೆಯಿಂದ ಹೊಡೆದು ದರ್ಪ
ಚನ್ನಪಟ್ಟಣದಲ್ಲಿ ಅಣ್ಣನಿಂದ ತಂಗಿಯ ಮೇಲೆ ಹಲ್ಲೆ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ Edited By: ಕಿರಣ್ ಹನುಮಂತ್​ ಮಾದಾರ್

Updated on: Sep 12, 2023 | 4:21 PM

ರಾಮನಗರ, ಸೆ.12: ಜಮೀನು ವಿಚಾರಕ್ಕೆ ಗಲಾಟೆಯಾಗಿ ಒಡಹುಟ್ಟಿದ ತಂಗಿಗೆ ಅಣ್ಣನೊಬ್ಬ ಮನಬಂದಂತೆ ಥಳಿಸಿರುವ ಘಟನೆ ರಾಮನಗರ (Ramanagara) ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕುರಿದೊಡ್ಡಿ ಗ್ರಾಮದಲ್ಲಿ ನಡೆದಿದೆ. ಹೌದು, ಜಮೀನು ಹಂಚಿಕೆ ವಿಚಾರಕ್ಕೆ (Land issue) ಕುಟುಂಬದಲ್ಲಿ ಗಲಾಟೆ ಮಾಡಿಕೊಳ್ಳುತ್ತಿದ್ದರು. ಈ ವೇಳೆ ಗಲಾಟೆ ವಿಕೋಪಕ್ಕೆ ತಿರುಗಿ ರಾಜಣ್ಣ ಎಂಬುವವರು ತಮ್ಮ ತಂಗಿ ಜಯಮ್ಮ ಎಂಬ ಮಹಿಳೆ ಮೇಲೆ ಕಾಲಿನಿಂದ ಒದ್ದು, ದೊಣ್ಣೆಯಿಂದ ಹೊಡೆದು ದರ್ಪ ತೋರಿದ್ದಾರೆ. ಗಾಯಾಳು ಜಯಮ್ಮಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಕರಣ ಸಂಬಂಧ ಇದೀಗ ಚನ್ನಪಟ್ಟಣ ತಾಲೂಕಿನ ಎಂ.ಕೆ.ದೊಡ್ಡಿ ಪೋಲಿಸ್ ಠಾಣೆಯಲ್ಲಿ 7 ಜನರ ಮೇಲೆ ಎಫ್​ಐಆರ್ ದಾಖಲಾಗಿದೆ.

ಪೌರ ಕಾರ್ಮಿಕನ ಮೇಲೆ ಹಲ್ಲೆ

ಕಾರವಾರ: ಬಿದಿಯಲ್ಲಿ ಕಸ ಎಸೆಯಬೇಡಿ ಎಂದಿದ್ದಕ್ಕೆ ಪೌರ ಕಾರ್ಮಿಕನ ಮೇಲೆ ಹಲ್ಲೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಬಸ್ ನಿಲ್ದಾಣದ ಸಮೀಪ ನಡೆದಿದೆ. ಪುರುಷೋತ್ತಮ ಕೋರಾರ ಮತ್ತು ಚೇತನಕುಮಾರ ಕೋರರ ಎಂಬುವವರು ಹಲ್ಲೆಗೊಳಗಾದವರು. ನಿತಿನ್ ಕುಮಾರ್ ಮತ್ತು ನಿತೇಶ್ ಎಂಬ ಯುವಕರು ಮನಬಂದಂತೆ ಥಳಿಸಿ ಹೋಗಿದ್ದರು. ಈ ಕುರಿತು ಅವರನ್ನು ಬಂಧಿಸುವಂತೆ ನಗರಸಭೆ ಆಯುಕ್ತರಿಗೆ, ಪೊಲೀಸ್ ವರಿಷ್ಠಾಧಿಕಾರಿಗೆ ಪೌರ ಕಾರ್ಮಿಕರು ದೂರು ನೀಡಿದ್ದು, ಕಾರವಾರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಬಿಜೆಪಿಯಿಂದ ಸರ್ಕಾರಿ ಜಮೀನು ಆರ್​ಎಸ್​ಎಸ್​ಗೆ ಹಂಚಿಕೆ: ವಿವಾದಿತ ಭೂಮಿ ಪಟ್ಟಿ ಮಾಡಲು ಮುಂದಾದ ಕಾಂಗ್ರೆಸ್ ಸರ್ಕಾರ

ಪೆಟ್ರೋಲ್ ಹಾಕಿಸಿಕೊಳ್ಳಲು ಬಂದಿದ್ದ ಕಾರಿನಲ್ಲಿ ಬೆಂಕಿ; ಸಿಬ್ಬಂದಿ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

ಬೆಳಗಾವಿ: ಪೆಟ್ರೋಲ್ ಹಾಕಿಸಿಕೊಳ್ಳಲು ಬಂದಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಬೆಳಗಾವಿ ನಗರದ ಕೊಲ್ಲಾಪುರ ವೃತ್ತದಲ್ಲಿರುವ ಬಿ.ಬಿ‌ ಹೊಸಮನಿ ಪೆಟ್ರೋಲ್ ಪಂಪ್​ನಲ್ಲಿ ನಡೆದಿದೆ. ಸ್ವಿಫ್ಟ್ ಕಾರಿನ ಎಂಜಿನಲ್ಲಿ ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ಆಗಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಸಿಬ್ಬಂದಿ ಓರ್ವರು ಪಂಪ್​ನಲ್ಲಿದ್ದ ಅಗ್ನಿ ನಂದಕ ಗಳಿಂದ ಬೆಂಕಿ ನಂದಿಸಿದ್ದಾರೆ. ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಅನಾಹುತವೊಂದು ತಪ್ಪಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಇಬ್ಬರು ಮಕ್ಕಳು, ಮಹಿಳೆ, ಡ್ರೈವರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೈಯ್ಯದ್​ ನಿಜಾಮುದ್ದೀನ್​, ರಾಮನಗರ

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Loading...
Unable to load recommendations.
Follow Us