ಚುನಾವಣೆ ಹೊಸ್ತಿಲಲ್ಲಿ ರಾಜಕೀಯ ಕಿಚ್ಚು, ರಾಮನಗರ ಜಿಲ್ಲಾಸ್ಪತ್ರೆ ಉದ್ಘಾಟನೆ ವೇಳೆ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ, ಗುಡುಗಿದ ಡಿಕೆ ಸುರೇಶ್

ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜಕೀಯ ಕಿಚ್ಚು ಹೆಚ್ಚುತ್ತಲೇ ಇದೆ. ಸದ್ಯ ರಾಮನಗರ ಜಿಲ್ಲೆ ಕೇಂದ್ರ ಬಿಂದುವಾಗಿದೆ.

ಚುನಾವಣೆ ಹೊಸ್ತಿಲಲ್ಲಿ ರಾಜಕೀಯ ಕಿಚ್ಚು, ರಾಮನಗರ ಜಿಲ್ಲಾಸ್ಪತ್ರೆ ಉದ್ಘಾಟನೆ ವೇಳೆ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ, ಗುಡುಗಿದ ಡಿಕೆ ಸುರೇಶ್
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Mar 02, 2023 | 12:17 PM

ರಾಮನಗರ:  ಚನ್ನಪಟ್ಟಣದಲ್ಲಿ ಇತ್ತೀಚೆಗೆ ವಿವಿಧ ಕಾಮಗಾರಿಗೆ ಚಾಲನೆ ನೀಡುವ ಸಂಬಂಧ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ದೊಡ್ಡ ಗಲಾಟೆಯಾಗಿತ್ತು. ಇದರ ಬೆನ್ನಲ್ಲೇ ಇದೀಗ ಇಂದು(ಮಾ.02) ರಾಮನಗರ(Ramanagara) ಜಿಲ್ಲಾ ಆಸ್ಪತ್ರೆ ಉದ್ಘಾಟನೆ ವಿಚಾರವಾಗಿ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ  ಮಧ್ಯೆ ಗಲಾಟೆ ನಡೆದಿದೆ. ಕುಮಾರಸ್ವಾಮಿ ಆಗಮಿಸುವುದಕ್ಕೂ ಮುನ್ನ ಆಸ್ಪತ್ರೆ ಉದ್ಘಾಟನೆ ಸರಿ ಅಲ್ಲ ಎಂದು ಜೆಡಿಎಸ್​ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ವೇಳೆ ಬಿಜೆಪಿ ಕಾರ್ಯಕರ್ತರು ಸಹ ಘೋಷಣೆಗಳನ್ನು ಕೂಗಿದ್ದಾರೆ. ಹೀಗೆ ಪರಸ್ಪರ ಘೋಷಣೆ ಕೂಗುತ್ತಿದ್ದ ಎರಡೂ ಪಕ್ಷದ ಕಾರ್ಯಕರ್ತರ ನಡುವೆ  ನೂಕಾಟ ತಳ್ಳಾಟ ನಡೆಯಿತು. ಇದರ ಮಧ್ಯೆ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ (DK Suresh) ಜಿ್ಲ್ಲಾಡಳಿ ಹಾಗೂ ಸಚಿವ ಅಶ್ವತ್ಥ್ ನಾರಾಯಣ ವಿರುದ್ಧ ಗುಡುಗಿದ್ದಾರೆ.

ಇದನ್ನೂ ಓದಿ: ರಾಮನಗರ: ಯೋಗೇಶ್ವರ್ ಕಾರಿಗೆ ಜೆಡಿ (ಎಸ್) ಕಾರ್ಯಕರ್ತರ ಮುತ್ತಿಗೆ, ಮೊಟ್ಟೆ ಎಸೆತ

ಸುಮಾರು‌ ನೂರು ಕೋಟಿ ರೂ ವೆಚ್ಚದಲ್ಲಿ ‌ನಿರ್ಮಾಣ ಮಾಡಲಾಗಿರುವ 374 ಹಾಸಿಗೆ ಸಾಮರ್ಥ್ಯದ ನೂತನ ಜಿಲ್ಲಾಸ್ಪತ್ರೆಯನ್ನು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿಎನ್. ಅಶ್ವತ್ಥ್ ನಾರಾಯಣ ಉದ್ಘಾಟನೆಗೆ ಮುಂದಾದರು. ಈ ವೇಳೆ ಜೆಡಿಎಸ್​ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದು, ಕುಮಾರಸ್ವಾಮಿ ಬರುವವರೆಗೆ ಉದ್ಘಾಟನೆ ಮಾಡಬಾರದು ಎಂದು ಆಗ್ರಹಿಸಿದರು. ವಿರೋಧದ ನಡುವೆಯೂ ಅನಿತಾ ಕುಮಾರಸ್ವಾಮಿ, ಹೆಚ್​ಡಿ ಕುಮಾರಸ್ವಾಮಿ ಬರುವ ಮೊದಲೇ ರಾಮನಗರ ಜಿಲ್ಲಾಸ್ಪತ್ರೆಯನ್ನು ಉದ್ಘಾಟನೆ ಮಾಡಲಾಯ್ತು.

ಉದ್ಘಾಟನೆಯಾದ ಬಳಿಕ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ತಡವಾಗಿ ಆಗಮಿಸಿದರು. ಬಳಿಕ ಕಾರ್ಯಕರ್ತರು ಪರಸ್ಪರ ಘೋಷಣೆ ಕೂಗುವುದನ್ನು ನಿಲ್ಲಿಸಿದರು. ಇದರಿಂದ ಗಲಾಟೆ ಅಲ್ಲಿಗೆ ಕೊನೆಗೊಂಡಿದೆ. ಇನ್ನು ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ಕುಮಾರಸ್ವಾಮಿ, ಆಸ್ಪತ್ರೆಯನ್ನು ಉದ್ಘಾಟನೆ ಮಾಡಲು ನಾನೇ ಸಚಿವರಿಗೆ ಹೇಳಿದ್ದೆ. ಹೀಗಾಗಿ ಕಾರ್ಯಕರ್ತರ ನಡುವೆ ಗೊಂದಲ ಆಗಿದೆ. ಆಸ್ಪತ್ರೆ ಉದ್ಘಾಟನೆ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಈ ವಿಚಾರದಲ್ಲಿ ಯಾರೂ ರಾಜಕೀಯ ಮಾಡುವುದು ಬೇಡ. ಆಸ್ಪತ್ರೆ ಉದ್ಘಾಟನೆ ಒಳ್ಳೆಯ ಕಾರ್ಯಕ್ರಮ. ಎಲ್ಲರೂ ಶಾಂತಿಯಿಂದ ಸಹಕಾರ ನೀಡಬೇಕು ಎಂದು ಹೆಚ್​​.ಡಿ.ಕುಮಾರಸ್ವಾಮಿ ಮನವಿ ಮಾಡಿದರು.

ಇದನ್ನೂ ಓದಿ: ಚನ್ನಪಟ್ಟಣ ಜಟಾಪಟಿ: 14 ಜೆಡಿಎಸ್ ಕಾರ್ಯಕರ್ತರ ವಿರುದ್ಧ ಎಫ್​ಐಆರ್, ಡಿವೈಎಸ್​ಪಿ ಕಚೇರಿಗೆ ಧಾವಿಸಿದ ನಿಖಿಲ್ ಕುಮಾರಸ್ವಾಮಿ 

ಗುಡುಗಿದ ಡಿಕೆ ಸುರೇಶ್

ಇದರ ಮಧ್ಯೆ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಜಿಲ್ಲಾಡಳಿತಕ್ಕೆ ತರಾಟೆಗೆ ತೆಗೆದುಕೊಂಡಿರುವ ಪ್ರಸಂಗ ನಡೆಯಿತು. ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ ಎಂದು ಆಕ್ರೋಶಗೊಂಡಿರುವ ಸುರೇಶ್, ಹೇ ಮಂತ್ರಿಗಳೇ ನಿಂತ್ಕೊಳ್ರೀ, ಏನ್ರೀ ಪ್ರೋಟಾಕಾಲ್​ ಇಲ್ವಾ? ನಾನು ಈ ಕ್ಷೇತ್ರದ ಸಂಸದ, ನನಗೆ ಪ್ರೋಟಾಕಾಲ್​ ಇಲ್ವಾ? ಯಾರೀ ಸಿಇಒ, ಡಿಸಿ?, ಅವರಿಗೆ ಪ್ರೋಟಾಕಾಲ್​ ಗೊತ್ತಿಲ್ವಾ? ನೀವೊಬ್ಬ ಜಿಲ್ಲಾ ಉಸ್ತುವಾರಿ ಸಚಿವರಾಗಿ ಪ್ರೋಟಾಕಾಲ್​ ಗೊತ್ತಿಲ್ವಾ? ರಾತ್ರಿ ಆಹ್ವಾನ ಪತ್ರಿಕೆ ಕಳುಹಿಸಿ, ಬೆಳಗ್ಗೆ ಉದ್ಘಾಟನೆ ಮಾಡುವುದಲ್ಲ. ಈ ಜಿಲ್ಲಾಸ್ಪತ್ರೆ ನೀವು ಮಾಡಿದ್ದಲ್ಲ, ನಾವು ಮಾಡಿರುವುದು ಎಂದು ಸಚಿವ ಅಶ್ವತ್ಥ್ ನಾರಾಯಣ ವಿರುದ್ಧ ಗುಡುಗಿದರು.

ಇನ್ನು ಈ ಕಾರ್ಯಕ್ರಮಲ್ಲಿ ಜೆಡಿಎಸ್, ಕಾಂಗ್ರೆಸ್ ಹಾಗೂ ಬಿಜೆಪಿಯ ಘಟಾನುಘಟಿ ನಾಯಕರು ಭಾಗಿದ್ದಾರೆ. ಸಚಿವರಾದ ಅಶ್ವತ್ಥ್ ನಾರಾಯಣ, ಡಾ. ಕೆ. ಸುಧಾಕರ್​, ಹೆಚ್​ಡಿ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ಸಂಸದ ಡಿಕೆ ಸುರೇಶ್ ಉಪಸ್ಥಿತರಿದ್ದರು.

Published On - 12:14 pm, Thu, 2 March 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ