ರಾಮನಗರ: 13 ವರ್ಷಗಳ ನಂತರ ಚನ್ನಪಟ್ಟಣ ನಗರಸಭೆ ಜೆಡಿಎಸ್ನ ಅಧಿಕಾರದ ತೆಕ್ಕೆಗೆ ಬಂದಿದೆ. ಚನ್ನಪಟ್ಟಣ ನಗರಸಭೆ ಅಧ್ಯಕ್ಷರಾಗಿ 26ನೇ ವಾರ್ಡ್ನ ಜೆಡಿಎಸ್ ಸದಸ್ಯ ಪ್ರಶಾಂತ್ ಆಯ್ಕೆಯಾಗಿದ್ದಾರೆ. ಇನ್ನು ಉಪಾಧ್ಯಕ್ಷರಾಗಿ 19 ನೇ ವಾರ್ಡ್ನ ಜೆಡಿಎಸ್ ಸದಸ್ಯೆ ಹಸೀನ ಫರ್ಹಿನ್ ಆಯ್ಕೆಯಾಗಿದ್ದಾರೆ. ಒಟ್ಟು 31 ಸ್ಥಾನಗಳಲ್ಲಿ ಜೆಡಿಎಸ್ 16 ಸ್ಥಾನ, ಬಿಜೆಪಿ 7, ಕಾಂಗ್ರೆಸ್ 7 ಹಾಗೂ ಒಬ್ಬರು ಪಕ್ಷೇತರ ಸದಸ್ಯ ಮತಗಳನ್ನು ಪಡೆದುಕೊಂಡಿದ್ದಾರೆ.
ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. ಜೆಡಿಎಸ್ ಸರಳ ಬಹುಮತ ಪಡೆದಿತ್ತು. ಬಿಜೆಪಿ ಹಾಗೂ ಕಾಂಗ್ರೆಸ್ನಿಂದ ಯಾರು ನಾಮಪತ್ರ ಸಲ್ಲಿಸಿದ ಹಿನ್ನೆಲೆ ಅವಿರೋಧವಾಗಿ ಜೆಡಿಎಸ್ ಆಯ್ಕೆಯಾಗಿದೆ. ಜೆಡಿಎಸ್ ತೆಕ್ಕೆಗೆ ಚನ್ನಪಟ್ಟಣ ನಗರಸಭೆ ಬಂದ ಹಿನ್ನೆಲೆ ಪಟಾಕಿ ಸಿಡಿಸಿ ಕಾರ್ಯಕರ್ತರು ಸಂಭ್ರಮಿಸಿದ್ದಾರೆ.
ಇದನ್ನೂ ಓದಿ:
ಅಹಿಂದ ನಾಯಕನೆಂದು ಅಧಿಕಾರಕ್ಕೆ ಬಂದಮೇಲೆ ದಲಿತರ ಪರ ಕೆಲಸ ಮಾಡುವುದು ಕರ್ತವ್ಯ: ಬಿಜೆಪಿ ಟ್ವೀಟ್
ಹಾನಗಲ್, ಸಿಂದಗಿ ಉಪಚುನಾವಣೆ ಅಂತಿಮ ಫಲಿತಾಂಶ: ಯಾರಿಗೆ ಎಷ್ಟು ಅಂತರದ ಗೆಲುವು? ಇಲ್ಲಿದೆ ವಿವರ
Published On - 1:39 pm, Mon, 8 November 21