ವಿಧಾನಸಭೆ ಚುನಾವಣೆಗೆ ಜೆಡಿಎಸ್ ತಯಾರಿ; 4 ದಿನ ಕಾರ್ಯಾಗಾರ; ಹೆಚ್​ಡಿ ಕುಮಾರಸ್ವಾಮಿ

ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಪಕ್ಷ ಸಂಘಟನೆಗೆ ಚಾಲನೆ ನೀಡುತ್ತಾರೆ. ದೇವೇಗೌಡರು ತಮ್ಮ ರಾಜಕೀಯ ಅನುಭವವನ್ನ ಹಂಚಿಕೊಳ್ಳಲಿದ್ದಾರೆ.

ವಿಧಾನಸಭೆ ಚುನಾವಣೆಗೆ ಜೆಡಿಎಸ್ ತಯಾರಿ; 4 ದಿನ ಕಾರ್ಯಾಗಾರ; ಹೆಚ್​ಡಿ ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಪಕ್ಷದ ಚಿಹ್ನೆ

ರಾಮನಗರ: ಸೆಪ್ಟೆಂಬರ್ 27ರಿಂದ 4 ದಿನ ಕಾಲ ಜೆಡಿಎಸ್​ನಿಂದ ಕಾರ್ಯಾಗಾರ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಜೆಡಿಎಸ್ ಪಕ್ಷ ಸಂಘಟನೆ ದೃಷ್ಟಿಯಿಂದ ಕಾರ್ಯಾಗಾರ ಆಯೋಜನೆ ಮಾಡಲಾಗಿದೆ. ಮೊದಲ 2 ದಿನ ಶಾಸಕ ಸ್ಥಾನದ ಆಕಾಂಕ್ಷಿಗಳು, ಜೆಡಿಎಸ್ ಶಾಸಕರಿಗೆ ಕಾರ್ಯಾಗಾರ ನಡೆಯುತ್ತದೆ. ಮೂರನೇ ದಿನ ಮಹಿಳೆಯರಿಗೆ ತರಬೇತಿ ನೀಡಲಾಗುತ್ತದೆ. ಬೂತ್ ಮಟ್ಟದಲ್ಲಿ ಮಹಿಳಾ ಸಂಘಟನೆ ಮಾಡುವ ಬಗ್ಗೆ ತರಬೇತಿ ನೀಡಲಾಗುತ್ತದೆ ಎಂದು ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ.

ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಪಕ್ಷ ಸಂಘಟನೆಗೆ ಚಾಲನೆ ನೀಡುತ್ತಾರೆ. ದೇವೇಗೌಡರು ತಮ್ಮ ರಾಜಕೀಯ ಅನುಭವವನ್ನ ಹಂಚಿಕೊಳ್ಳಲಿದ್ದಾರೆ. 7 ಸೆಷನ್​ನಲ್ಲಿ ಕಾರ್ಯಾಗಾರ ನಡೆಯುತ್ತದೆ ಎಂದು ಹೇಳಿಕೆ ನೀಡಿದ ಕುಮಾರಸ್ವಾಮಿ, ಯಾವುದೇ ಪಕ್ಷದ ಜೊತೆ ಜೆಡಿಎಸ್ ಹೊಂದಾಣಿಕೆ ಇಲ್ಲ. ಸ್ವತಂತ್ರವಾಗಿ ಅಧಿಕಾರ ಪಡೆಯುವುದೇ ಜೆಡಿಎಸ್ ಪಕ್ಷದ ಗುರಿ ಅಂತ ರಾಮನಗರ ತಾಲೂಕಿನ ಕೇತಗಾನಹಳ್ಳಿಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಪಕ್ಷದ ವತಿಯಿಂದ ಪ್ರಥಮ ಬಾರಿಗೆ ಹಮ್ಮಿಕೊಳ್ಳಲಾಗುತ್ತಿದೆ. ಯಾವುದೇ ಹೋಟೆಲ್ಗಳು ಬೇಡ ಎಂದು ತೋಟದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮುಂದಿನ ಚುನಾವಣೆಗೆ ಜನತೆಯ ಪರ್ವ ಪ್ರಾರಂಭವಾಗಬೇಕು ಎಂದು ಪಕ್ಷದ ಸಂಘಟನೆಗೆ ಚಾಲನೆ ನೀಡಲಾಗುತ್ತದೆ. ನುರಿತ ತರಬೇತುದಾರರಿಂದ ಕಾರ್ಯಾಗಾರ ನಡೆಯುತ್ತದೆ. ತೋಟದ ಕೆಲಸದ ಜೊತೆಗೆ ಪಕ್ಷವನ್ನ ಸದೃಢಗೊಳಿಸುತ್ತಿದ್ದೇವೆ. ಮಿಷನ್ 123 ಗುರಿ ಮುಟ್ಟಲು ತರಬೇತಿ ನಡೆಯುತ್ತಿದೆ. ಯಾವುದೇ ಪಕ್ಷದ ಜೊತೆ ಹೊಂದಾಣಿಕೆ ಇಲ್ಲ. ಸ್ವತಂತ್ರವಾಗಿ ಅಧಿಕಾರ ಪಡೆಯುವುದೇ ನಮ್ಮ ಗುರಿಯಾಗಿದೆ. ಹೀಗಾಗಿ ಒಂದೂವರೆ ವರ್ಷದ ಮೊದಲೇ ಅಖಾಡಕ್ಕೆ ಇಳಿಯುತ್ತಿದ್ದೇವೆ ಅಂತ ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ.

ರಾಮನಗರ ತಾಲೂಕಿನ ಕೇತಗಾನಹಳ್ಳಿ ಗ್ರಾಮದ ಬಳಿ ಇರುವ ತೋಟದಲ್ಲಿ ಕಾರ್ಯಾಗಾರ ನಡೆಯಲಿದೆ. ಜೆಡಿಎಸ್ ಶಾಸಕರು, ಮಾಜಿ ಶಾಸಕರು, ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳು, ಮಹಿಳಾ ಮುಖಂಡರು, ಜೆಡಿಎಸ್ ವಿದ್ಯಾರ್ಥಿ ಘಟಕದ ಪದಾಧಿಕಾರಿಗಳಿಗೆ ತರಬೇತಿ ನೀಡಲಾಗುವುದು.

ಇದನ್ನೂ ಓದಿ

ಕಲಬುರಗಿ ಜಿಲ್ಲಾಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಆರೋಪ; ಹೆರಿಗೆ ವೇಳೆ ಮಗು ಸಾವು, ಹೆರಿಗೆ ನಂತರ ತಾಯಿ ಸಾವು

ನಿಮ್ಮ ದುಃಖಕ್ಕೆ ಆರು ಕಾರಣಗಳು ಯಾವುವು ಗೊತ್ತಾ? ಗರುಡ ಪುರಾಣದಲ್ಲಿ ಅದರ ವಿವರಣೆ ಹೀಗಿದೆ

(JDS is preparing for assembly elections A fourday workshop is being held from September 27 in Ramanagara)

Read Full Article

Click on your DTH Provider to Add TV9 Kannada