ಇವಿಎಂ ಅಕ್ರಮದಲ್ಲಿ ಬಿಜೆಪಿ ಶಾಮೀಲು, ಇವಿಎಂ ಇರುವವರೆಗೆ ಇವರಿಗೆ ಸಮಸ್ಯೆಯಿಲ್ಲ: ಎಚ್​ಡಿ ಕುಮಾರಸ್ವಾಮಿ

ಎವಿಎಂ ಯಂತ್ರಗಳನ್ನು ತಯಾರು ಮಾಡಿದ ಕಂಪನಿಯಲ್ಲಿ ಇವರೆಲ್ಲರೂ ಕೆಲಸ ಮಾಡಿದ್ದಾರೆ. ಅವರನ್ನೇ ಡೆಟಾ ಕಲೆಕ್ಷನ್ ಮಾಡಲು ಬಿಟ್ಟಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಇವಿಎಂ ಅಕ್ರಮದಲ್ಲಿ ಬಿಜೆಪಿ ಶಾಮೀಲು, ಇವಿಎಂ ಇರುವವರೆಗೆ ಇವರಿಗೆ ಸಮಸ್ಯೆಯಿಲ್ಲ: ಎಚ್​ಡಿ ಕುಮಾರಸ್ವಾಮಿ
ಹೆಚ್ ಡಿ ಕುಮಾರಸ್ವಾಮಿ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Nov 17, 2022 | 2:28 PM

ರಾಮನಗರ: ಬೆಂಗಳೂರಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ನಡೆದಿರುವ ಅಕ್ರಮಗಳ ಕುರಿತು ಜೆಡಿಎಸ್ ನಾಯಕ ಎಚ್​.ಡಿ.ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಪ್ರತಿಕ್ರಿಯಿಸಿದರು. ‘ಹಿಂದೆ ಕಾಂಗ್ರೆಸ್ಸಿಗರು ಮಾಡಿದ ಕೆಲಸವನ್ನು ಇಂದು ಬಿಜೆಪಿಯವರು ಮಾಡುತ್ತಿದ್ದಾರೆ. ಚುನಾವಣೆಯಲ್ಲಿ ಅಕ್ರಮ ಮಾಡಲು ಖಾಸಗಿ ಸಂಸ್ಥೆಗೆ ಗುತ್ತಿಗೆ ಕೊಟ್ಟಿದ್ದಾರೆ. ಇದು ಮಂತ್ರಿಗಳ ಬೇನಾಮಿ ಹೆಸರಿನಲ್ಲಿ ಇರುವ ಕಂಪನಿ’ ಎಂದು ಪರೋಕ್ಷವಾಗಿ ಅಶ್ವತ್ಥ ನಾರಾಯಣ ವಿರುದ್ಧ ಅವರು ಹರಿಹಾಯ್ದರು. ಪ್ರಭಾವಿಯೊಬ್ಬರ ಬೇನಾಮಿ ಹೆಸರಿನಲ್ಲಿ ಮಲ್ಲೇಶ್ವರದಲ್ಲಿ ಇರುವ ಕಂಪನಿ ಅದು. ಹಿಂದೆ ಬಿಬಿಎಂಪಿಯಲ್ಲಿ ಅಕ್ರಮ ನಡೆದಿತ್ತು. ಅದಕ್ಕೆ ಸಂಬಂಧಿಸಿದ ಕಡತಗಳಿಗೆ ಇದೇ ಕಂಪನಿ ರಾತ್ರೋರಾತ್ರಿ ಬೆಂಕಿ ಇಟ್ಟಿತ್ತು. ಹಿಂದೆ ಕಾಂಗ್ರೆಸ್​ನವರು ಇಂಥ ಹಲವು ಚಟುವಟಿಕೆಗಳಲ್ಲಿ ಶಾಮೀಲಾಗಿದ್ದಾರೆ. ಈಗ ದೊಡ್ಡದಾಗಿ ಮಾತನಾಡುತ್ತಿದ್ದಾರೆ’ ಎಂದು ಟೀಕಿಸಿದರು.

‘ಮುಂದೆ ಕಾಂಗ್ರೆಸ್​​ನವರು ಅಧಿಕಾರಕ್ಕೆ ಬಂದರೂ ಇಂಥದ್ದೇ ಕೆಲಸಗಳನ್ನು ಮುಂದುವರಿಸುತ್ತಾರೆ. ಇವಿಎಂ ಇರುವವರೆಗೆ ಬಿಜೆಪಿಗೆ ಯಾವುದೇ ಸಮಸ್ಯೆ ಇಲ್ಲ. ಅಕ್ರಮದ ರೀತಿಯಲ್ಲೇ ಮತ್ತೆ ಅಧಿಕಾರಕ್ಕೆ ಬರಲು ಬಿಜೆಪಿ ಪ್ರಯತ್ನಿಸುತ್ತಿದೆ. ಇದರ ಬಗ್ಗೆ ನಾನು ಹೆಚ್ಚಾಗಿ ತಲೆ ಕೆಡಿಸಿಕೊಳ್ಳುವುದಿಲ್ಲ. ಎರಡೂ ರಾಷ್ಟ್ರೀಯ ಪಕ್ಷಗಳ ಬಗ್ಗೆ ಜನರು ಎಚ್ಚೆತ್ತುಕೊಳ್ಳಬೇಕು. ಸಚಿವ ಅಶ್ವತ್ಥ್ ನಾರಾಯಣ ವಿರುದ್ಧ ನಾನು ಸಾಫ್ಟ್ ಆಗಿಲ್ಲ. ಬಿಜೆಪಿ ಎಷ್ಟೇ ಕುತಂತ್ರ ಮಾಡಿದರೂ ಅಧಿಕಾರಕ್ಕೆ ಬರಲು ಆಗುವುದಿಲ್ಲ. ಮುಂದೆ ರಾಜ್ಯದಲ್ಲಿ ಜೆಡಿಎಸ್​​ ಅಧಿಕಾರಕ್ಕೆ ಬರಲಿದೆ. ಆಗ ಅಕ್ರಮ ಎಸಗಿರುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಚನ್ನಪಟ್ಟಣ ತಾಲೂಕಿಗೆ ಮನೆಗಳ ಮಂಜೂರಾತಿ ವಿಚಾರದಲ್ಲಿ ಆಗಿರುವ ಸಮಸ್ಯೆಗಳ ಕುರಿತು ಪ್ರತಿಕ್ರಿಯಿಸಿದ ಅವರು, ನಾನು ಹಲವು ಪತ್ರಗಳನ್ನು ಬರೆದೆ. ನನ್ನ ಪತ್ರಗಳಿಗೆ ಸೋಮಣ್ಣ ಹೇಗೆ ಸ್ಪಂದಿಸಿದರು ಎನ್ನುವುದು ಎಲ್ಲರಿಗೂ ಗೊತ್ತಿದೆ. ಅವರನ್ನು ಸುಳ್ಳಿನ ಸೋಮಣ್ಣ ಎಂದು ತಾನೆ ಎಲ್ಲರೂ ಕರೆಯುವುದು. ಮೂರು ಸಾವಿರ ಮನೆಗಳಿಗೆ ₹ 60 ಕೋಟಿ ಬೇಕಿತ್ತು. ಆದರೆ ಚುನಾವಣೆಗಾಗಿ ಮನೆಗಳು ಮಂಜೂರಾಗಿದೆ ಎಂದು ಆದೇಶ ಮಾಡಿಕೊಂಡಿದ್ದಾರೆ. ಹಣ ಕೊಡುತ್ತಾರೋ ಇಲ್ಲವೋ ನೋಡಬೇಕು. ಮನೆಗಳಿಗೆ ಒಪ್ಪಿಗೆ ಕೊಡಲು ನನ್ನ ಮುಂದೇಯೇ ಬರಬೇಕು. ತಾಲೂಕಿನಲ್ಲಿ ಜೆಡಿಎಸ್​ನ ಪಂಚಾಯತಿಗಳೇ ಹೆಚ್ಚಿವೆ’ ಎಂದು ಹೇಳಿದರು.

ಮುಂದಿನ ಆರು ತಿಂಗಳು ಪತ್ರದ ಮೂಲದ ಮತ್ತಷ್ಟು ಆದೇಶಗಳು ಬರುತ್ತಿರುತ್ತವೆ. ಚುನಾವಣೆಗಾಗಿ ಇಂಥ ಕಸರತ್ತುಗಳು ಸಾಕಷ್ಟು ನಡೆಯಬಹುದು. ಇವು ಕೇವಲ ಕಾಗದದಲ್ಲಿ ಮಾತ್ರವೇ ಉಳಿಯುವ ಆದೇಶಗಳು. ಎಷ್ಟರಮಟ್ಟಿಗೆ ಅನುಷ್ಠಾನಕ್ಕೆ ಬರುತ್ತವೆಯೋ ನೋಡಬೇಕು ಎಂದು ಅನುಮಾನ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಅವರ ಹೇಳಿಕೆಗಳ ಕುರಿತು ಪ್ರತಿಕ್ರಿಯಿಸಿದ ಅವರು, ನಾನೇಕೆ ಅವರನ್ನು ಟಾರ್ಗೆಟ್ ಮಾಡಬೇಕು. ನನ್ನಿಂದಲೇ ಐದು ಬಾರಿ ಗೆದ್ದಿದ್ದಾರೆ ಎಂದು ಹೇಳಿದ್ದೇನೆ. ನಾನು ಎರಡು ಬಾರಿ ತೆಗೆದುಕೊಂಡ ರಾಜಕೀಯದ ನಿರ್ಣಯದಲ್ಲಿ ತಪ್ಪಾಗಿದೆ ಎಂದು ಹೇಳಿದ್ದೇನೆ. ನಾನು ಗೆಲ್ಲಿಸಿದ್ದೇನೆ, ರಾಜಕೀಯ ಜನ್ಮ ಕೊಟ್ಟಿದ್ದೇನೆ ಎಂದು ಕೆಲವು ಚಾನಲ್​ಗಳಲ್ಲಿ ಬಂದಿದೆ. ನಾನು ಹೇಳಿದ್ದು ಒಂದು, ಮಾಧ್ಯಮದಲ್ಲಿ ಬಂದಿದ್ದು ಮತ್ತೊಂದು. ಅವರು ಮುಖ್ಯಮಂತ್ರಿ ಆದವರು, ಎರಡು ಬಾರಿ ಉಪಮುಖ್ಯಮಂತ್ರಿ ಆದವರು, ಬೇಕಾದಷ್ಟು ಸ್ಥಳ ಇವೆ ಚುನಾವಣೆಗೆ ನಿಲ್ಲಲು. ಗೊಂದಲ ಯಾಕೆ ಮಾಡಿಕೊಂಡಿದ್ದಾರೆ. ಒಂದು ಕ್ಷೇತ್ರ ಘೋಷಣೆ ಮಾಡಿಕೊಳ್ಳಲಿ ಎಂದು ಹೇಳಿದ್ದೇನೆ. ತಪ್ಪೇನಿದೆ ಅದರಲ್ಲಿ ಎಂದು ಪ್ರಶ್ನಿಸಿದರು. ‘ಅವರನ್ನು ನಾನು ಗೆಲ್ಲಿಸಿದೆ’ ಎಂದು ಎಲ್ಲಿಯೂ ಹೇಳಿಲ್ಲ ಎಂದರು.

ಕೋಲಾರದಲ್ಲಿ ನಮ್ಮ ಅಭ್ಯರ್ಥಿ ಯಾರು ಎಂಬುದನ್ನು ಈಗಾಗಲೇ ಘೋಷಿಸಿದ್ದೇವೆ. ಶ್ರೀನಾಥ್ ಅಲ್ಲಿ ನಿಲ್ಲುತ್ತಾರೆ. ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ. ನಾಳೆ‌ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುತ್ತೇವೆ ಎಂದು ಘೋಷಿಸಿದರು. ಮತಯಂತ್ರಗಳ ಬಗ್ಗೆ ಮತ್ತೊಮ್ಮೆ ಆಕ್ಷೇಪ ಹೊರಹಾಕಿದ ಅವರು, ಈಗಿನ ಸರ್ಕಾರವು ಯಾವುದೇ ಜನಪರ ಕಾರ್ಯಕ್ರಮ ಮಾಡದೆ ಆಕ್ರಮ ರೀತಿಯಲ್ಲಿ ‌ಮತ್ತೆ ಅಧಿಕಾರಕ್ಕೆ ತರಲು ಪ್ರಯತ್ನ ನಡೆಯುತ್ತಿದೆ. ಇದರಲ್ಲಿ ಆಶ್ಚರ್ಯ ಪಡುವಂಥದ್ದು ಏನೂ ಇಲ್ಲ. ನಾನು ಇದರ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವುದಿಲ್ಲ. ಎವಿಎಂ ಯಂತ್ರಗಳನ್ನು ತಯಾರು ಮಾಡಿದ ಕಂಪನಿಯಲ್ಲಿ ಇವರೆಲ್ಲರೂ ಕೆಲಸ ಮಾಡಿದ್ದಾರೆ. ಅವರನ್ನೇ ಡೆಟಾ ಕಲೆಕ್ಷನ್ ಮಾಡಲು ಬಿಟ್ಟಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

Published On - 1:53 pm, Thu, 17 November 22

ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್