ಹೆಚ್ಡಿ ಕುಮಾರಸ್ವಾಮಿ ಹೊರಗಿಟ್ಟು ಸಿ.ಪಿ.ಯೋಗೇಶ್ವರ್ರಿಂದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ: ಜೆಡಿಎಸ್ ಕಾರ್ಯಕರ್ತರಿಂದ ಪ್ರತಿಭಟನೆ
ಮಾಜಿ ಸಿಎಂ ಹಾಗೂ ಚನ್ನಪಟ್ಟಣ ಶಾಸಕ ಹೆಚ್ಡಿ ಕುಮಾರಸ್ವಾಮಿ ಸ್ವಕ್ಷೇತ್ರದಲ್ಲಿ ಶಂಕುಸ್ಥಾಪನೆ ಆಗಿದ್ದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಕುಮಾರಸ್ವಾಮಿ ದೂರವಿಟ್ಟು ಶಂಕುಸ್ಥಾಪನೆ ನೆರವೇರಿಸಿದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ರಾಮನಗರ: ಚನ್ನಪಟ್ಟಣ ತಾಲೂಕಿನಲ್ಲಿ ಇಂದು ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿದೆ. ರಾಂಪುರ ಗ್ರಾಮದಲ್ಲಿ ರಸ್ತೆ ಕಾಮಗಾರಿಗಳಿಗೆ ಸಿ.ಪಿ.ಯೋಗೇಶ್ವರ್(CP Yogeeshwar) ಚಾಲನೆ ನೀಡಿದ್ದಾರೆ. ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ಥ್ ನಾರಾಯಣ್(Ashwath Narayan) ಶಂಕುಸ್ಥಾಪನೆ ನೆರವೇರಿಸಬೇಕಿತ್ತು. ಆದ್ರೆ ಅವರು ಗೈರಾದ ಹಿನ್ನೆಲೆ MLC ಯೋಗೇಶ್ವರ್ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ.
ಮತ್ತೊಂದು ಕಡೆ ಮಾಜಿ ಸಿಎಂ ಹಾಗೂ ಚನ್ನಪಟ್ಟಣ ಶಾಸಕ ಹೆಚ್ಡಿ ಕುಮಾರಸ್ವಾಮಿ ಸ್ವಕ್ಷೇತ್ರದಲ್ಲಿ ಶಂಕುಸ್ಥಾಪನೆ ಆಗಿದ್ದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಕುಮಾರಸ್ವಾಮಿ ದೂರವಿಟ್ಟು ಶಂಕುಸ್ಥಾಪನೆ ನೆರವೇರಿಸಿದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. 40% ಸರ್ಕಾರ, ಯಾರಪ್ಪ ಗಂಡಸು ಎಂದು ಘೋಷಣೆ ಕೂಗಿದ್ದಾರೆ. ಜೆಡಿಎಸ್ ಕಾರ್ಯಕರ್ತರು ಯೋಗೇಶ್ವರ್, ಅಶ್ವತ್ಥ್ ನಾರಾಯಣ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ. ಈ ವೇಳೆ ಕೆಲ ಜೆಡಿಎಸ್ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದ್ರು.
ಇನ್ನು ತಮ್ಮನ್ನು ಕಡೆಗಣಿಸಿರುವ ಬಗ್ಗೆ ಹೆಚ್ಡಿ ಕುಮಾರಸ್ವಾಮಿಗೆ ಸಿಎಂ ಬಸವರಾಜ ಬೊಮ್ಮಾಯಿ ಬಳಿ ಅಸಮಾಧಾನ ವ್ಯಕ್ತಪಡಿಸಿದ್ದು ಸಿಎಂ ಬೊಮ್ಮಾಯಿ ಸೂಚನೆ ಮೇರೆಗೆ ಸಚಿವ ಅಶ್ವತ್ಥ್ ನಾರಾಯಣ್ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ ಎನ್ನಲಾಗಿದೆ. ಆದ್ರೆ ಇವರಿಬ್ಬರ ಜಗಳದ ನಡುವೆ ಸಧ್ಯ MLC ಯೋಗೇಶ್ವರ್ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ.
ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಮತ್ತು ಕೆಆರ್ಡಿಐಎಲ್ನ ವತಿಯಿಂದ ಗ್ರಾಮೀಣ ರಸ್ತೆಗಳ ಭೂಮಿಪೂಜೆ ಕಾರ್ಯಕ್ರಮ ನಡೆದಿದ್ದು ಚನ್ನಪಟ್ಟಣ ತಾಲ್ಲೂಕಿನ ರಸ್ತೆಗಳ ಅಭಿವೃದ್ಧಿಗಾಗಿ ಸಿಎಂ ಬೊಮ್ಮಾಯಿ 50 ಕೋಟಿ ರೂ ವಿಶೇಷ ಅನುದಾನ ಬಿಡುಗಡೆ ಮಾಡಿದ್ದರು. ಅಶ್ವತ್ಥ್ ನಾರಾಯಣ್ ವಿರುದ್ಧ ಹೆಚ್ಡಿ ಕುಮಾರಸ್ವಾಮಿ ಸದನದಲ್ಲಿ ಗುಡುಗಿದ ಬೆನ್ನಲ್ಲಿ ಸಚಿವ ಅಶ್ವತ್ಥ್ ನಾರಾಯಣ್ ಶಂಕುಸ್ಥಾಪನೆಗೆ ಮುಂದಾಗಿದ್ರು. ಆದ್ರೆ ಈಗ ಅವರೇ ಗೈರಾಗಿದ್ದಾರೆ. ಹಾಘೂ ಹೆಚ್ಡಿ ಕುಮಾರಸ್ವಾಮಿ ಅವರನ್ನ ಭೂಮಿಪೂಜೆಯಿಂದ ಹೊರಗಿಟ್ಟಿದ್ದಾರೆ. ಈ ಬಗ್ಗೆ ಹೆಚ್ಡಿಕೆ ಸಿಎಂ ಬೊಮ್ಮಾಯಿ ಮುಂದೆ ಅಸಮಾಧಾನ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: Mallikarjuna Kharge: ರಾಜ್ಯಸಭಾ ವಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಲ್ಲಿಕಾರ್ಜುನ ಖರ್ಗೆ
ಧರಣಿ ನಡುವೆಯೇ 5 ಕಡೆ ಶಂಕುಸ್ಥಾಪನೆ ಮಾಡಿದ ಯೋಗೇಶ್ವರ್
ಚನ್ನಪಟ್ಟಣದಲ್ಲಿ JDS, ಬಿಜೆಪಿ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿದ್ದು ಧರಣಿ ನಡುವೆಯೇ ಯೋಗೇಶ್ವರ್ 5 ಕಡೆ ಶಂಕುಸ್ಥಾಪನೆ ಮಾಡಿದ್ದಾರೆ. ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಕೋಡಂಬಳ್ಳಿಯಲ್ಲಿ ವಾಗ್ವಾದ ನಡೆದಿದೆ. ಪರಸ್ಪರ ಘೋಷಣೆ ಕೂಗಿ ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ. ಮತ್ತೊಂದೆಡೆ ಪೊಲೀಸರ ಜೊತೆ ಜೆಡಿಎಸ್ ಕಾರ್ಯಕರ್ತರು ವಾಗ್ವಾದ ನಡೆಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 11:34 am, Sat, 1 October 22