ಚನ್ನಪಟ್ಟಣ JDS​ ಘಟಕದಲ್ಲಿ ಭಿನ್ನಮತ: JDS ತೊರೆದು BJP ಸೇರಲು ಮುಂದಾದ ಹಿರಿಯ ಮುಖಂಡರು

ಚನ್ನಪಟ್ಟಣ JDS​ ಘಟಕದಲ್ಲಿ ಭಿನ್ನಮತ ಉಂಟಾಗಿದೆ. ಜೆಡಿಎಸ್ ಹಿರಿಯ ಮುಖಂಡರು ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ದೇವೇಗೌಡರಿಗೆ ಇಂತಹ ಮಗ ಯಾಕಾದ್ರೂ ಹುಟ್ಟಿದ್ರೋ ಎಂದು ಸಿಂಗರಾಜಿಪುರ ರಾಜಣ್ಣ ಆಕ್ರೋಶ ಹೊರ ಹಾಕಿದ್ದಾರೆ.

ಚನ್ನಪಟ್ಟಣ JDS​ ಘಟಕದಲ್ಲಿ ಭಿನ್ನಮತ: JDS ತೊರೆದು BJP ಸೇರಲು ಮುಂದಾದ ಹಿರಿಯ ಮುಖಂಡರು
ಹೆಚ್ ಡಿ ಕುಮಾರಸ್ವಾಮಿ
Follow us
TV9 Web
| Updated By: ಆಯೇಷಾ ಬಾನು

Updated on:Sep 21, 2022 | 7:59 PM

ರಾಮನಗರ: ಹೆಚ್​ಡಿ ಕುಮಾರಸ್ವಾಮಿ(HD Kumaraswamy) ಸ್ವಕ್ಷೇತ್ರ ಚನ್ನಪಟ್ಟಣ JDS​ ಘಟಕದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಹಿರಿಯ ಮುಖಂಡರು(JDS Senior Leaders) ಜೆಡಿಎಸ್ ಪಕ್ಷವನ್ನು ತ್ಯಜಿಸಲು ಮುಂದಾಗಿದ್ದಾರೆ. ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ JDS ಮುಖಂಡರ ಆಕ್ರೋಶ ಭುಗಿಲೆದ್ದಿದೆ.

ದೇವೇಗೌಡರಿಗೆ ಇಂತಹ ಮಗ ಯಾಕಾದ್ರೂ ಹುಟ್ಟಿದ್ರೋ

ಚನ್ನಪಟ್ಟಣ JDS​ ಘಟಕದಲ್ಲಿ ಭಿನ್ನಮತ ಉಂಟಾಗಿದೆ. ಜೆಡಿಎಸ್ ಹಿರಿಯ ಮುಖಂಡರು ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಹೆಚ್​ಡಿ ದೇವೇಗೌಡರು ಇದ್ದಾಗ ನಮಗೆ ಎಲ್ಲಾ ರೀತಿಯ ಸ್ಪಂದನೆ ಸಿಗುತ್ತಿತ್ತು. ಆದ್ರೆ ಹೆಚ್​ಡಿ ಕುಮಾರಸ್ವಾಮಿ ನಮಗೆ ಉತ್ತಮ ರೀತಿಯಲ್ಲಿ ನಡೆದುಕೊಳ್ಳುತ್ತಿಲ್ಲ. ಯಾವ ರಾಮನಗರ ಜಿಲ್ಲೆ ಚನ್ನಪಟ್ಟಣ JDS ಘಟಕದಲ್ಲಿ ಗುಂಪುಗಾರಿಕೆ ನಡೆಯುತ್ತಿದೆ ಎಂದು ಹಿರಿಯ ಮುಖಂಡರು ಆಕ್ರೋಶ ಹೊರ ಹಾಕಿದ್ದಾರೆ. ಇದನ್ನೂ ಓದಿ: ಆನೆ ಹಾವಳಿ ಬಗ್ಗೆ ಅರಿವಿದೆ, ಆನೆ ಹೋದಮೇಲೆ ನಮ್ಮ ಬೀಗರೂ ಫೋನ್ ಮಾಡಿ ಅದರ ಹಾವಳಿ ಬಗ್ಗೆ ಹೇಳ್ತಾರೆ: ಸಿಎಂ ಬೊಮ್ಮಾಯಿ

ಚುನಾವಣೆ ವೇಳೆ ಹೆಚ್​ಡಿಕೆ ನೀಡಿದ್ದ ಯಾವುದೇ ಭರವಸೆ ಈಡೇರಿಸಿಲ್ಲ. ಜನರಿಗೆ ಅನ್ಯಾಯವಾಗುತ್ತಿದೆ. ಹೆಚ್.ಡಿ.ದೇವೇಗೌಡರಂತವರು ಮತ್ತೊಮ್ಮೆ ಹುಟ್ಟಲು ಸಾಧ್ಯವೇ ಇಲ್ಲ. ದೇವೇಗೌಡರಿಗೆ ಇಂತಹ ಮಗ ಯಾಕಾದ್ರೂ ಹುಟ್ಟಿದ್ರೋ ಎಂದು ಸಿಂಗರಾಜಿಪುರ ರಾಜಣ್ಣ ಆಕ್ರೋಶ ಹೊರ ಹಾಕಿದ್ದಾರೆ. ಜೆಡಿಎಸ್​ ಪಕ್ಷ ತೊರೆದು ಬಿಜೆಪಿ ಸೇರಲು ಮುಖಂಡರು ಮುಂದಾಗಿದ್ದಾರೆ.

ದೇವೇಗೌಡರ ಯೋಗಕ್ಷೇಮ ವಿಚಾರಿಸಿದ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದ ಹಿರಿಯ ನಾಯಕ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಯೋಗಕ್ಷೇಮ ವಿಚಾರಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಂಪುಟದ ಸಹೋದ್ಯೋಗಿಗಳು ಪದ್ಮನಾಭನಗರದಲ್ಲಿರುವ ಅವರ ನಿವಾಸಕ್ಕೆ ಇದೀಗತಾನೆ ಭೇಟಿ ನೀಡಿದ್ದಾರೆ. ಸಿಎಂ ಬೊಮ್ಮಾಯಿ ಜೊತೆಗೆ ಸಚಿವರಾದ ಆರ್. ಅಶೋಕ್, ಸೋಮಣ್ಣ, ಕೆ. ಗೋಪಾಲಯ್ಯ, ಭೈರತಿ ಬಸವರಾಜ, ಮುನಿರತ್ನ, ಮಾಧುಸ್ವಾಮಿ ಹಾಗೂ ಆನಂದ್ ಸಿಂಗ್ ಸೇರಿ ಹಲವು ಸಚಿವರು ಆಗಮಿಸಿದ್ದಾರೆ. ಪ್ರಸ್ತುತ ರಾಜ್ಯ ವಿಧಾನಮಂಡಲದ ಅಧಿವೇಶನ ನಡೆಯುತ್ತಿದ್ದು, ಅಧಿವೇಶನದ ಮಧ್ಯೆ ಹಿರಿಯರಾದ ದೇವೇಗೌಡರ ಯೋಗಕ್ಷೇಮ ವಿಚಾರಿಸಲು ಸಚಿವರೆಲ್ಲ ಬಂದಿದ್ದಾರೆ.

ದೇವೇಗೌಡರ ಆರೋಗ್ಯ ವಿಚಾರಿಸುತ್ತಿರುವ ಸಿಎಂ ಬೊಮ್ಮಾಯಿ

ಆದರೆ ಸದನ ನಡೆಯುತ್ತಿರುವ ಕಾರಣ ಎಲ್ಲರೂ ತೆರಳುವುದು ಬೇಡ ಎಂಬ ಸಿಎಂ ಸೂಚನೆ ಹಿನ್ನೆಲೆಯಲ್ಲಿ ಕೆಲ ಸಚಿವರು ಸದನಕ್ಕೆ ವಾಪಾಸಾದರು. ಇದೆ ವೇಳೆ, ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸದ ಎರಡನೇ ಮಹಡಿಯಲ್ಲಿ ಸಿಎಂ ಬೊಮ್ಮಾಯಿ ಆರೋಗ್ಯ ವಿಚಾರಿಸುತ್ತಿದ್ದಾರೆ. ದೇವೇಗೌಡರ ಪಕ್ಕದಲ್ಲಿಯೇ ಕುಳಿತು, ಗೌಡರ ಕೈ ಹಿಡಿದು ಅವರ ಆರೋಗ್ಯದ ಬಗ್ಗೆ ಸಿಎಂ ಬೊಮ್ಮಾಯಿ ಮಾಹಿತಿ ಪಡೆದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:53 pm, Wed, 21 September 22

‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ