ರಾಮನಗರ, ಫೆ.02: ನೇಣು ಬಿಗಿದ ಸ್ಥಿತಿಯಲ್ಲಿ ಚುನಾವಣಾ ಶಾಖಾ ಸಿಬ್ಬಂದಿ ಮೃತದೇಹ ರಾಮನಗರ (Ramanagara) ಜಿಲ್ಲೆಯ ಕನಕಪುರ ತಾಲೂಕು ಕಚೇರಿಯ ಚುನಾವಣಾ ಶಾಖೆ ಕೊಠಡಿಯಲ್ಲಿ ಪತ್ತೆಯಾಗಿದೆ. ಶಿರಸ್ತೇದಾರ್ ಸುರೇಶ್(45) ಮೃತ ರ್ದುದೈವಿ. ಘಟನಾ ಸ್ಥಳಕ್ಕೆ ರಾಮನಗರ ಎಸ್ ಪಿ ಕಾರ್ತಿಕ್ ರೆಡ್ಡಿ ಹಾಗೂ ಕನಕಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಡೆತ್ ನೋಟ್ ಸಿಕ್ಕಿದ್ದು, ಅದನ್ನು ಕೂಡ ಪರಿಶೀಲನೆ ನಡೆಸಲಾಗುತ್ತಿದೆ.
ತುಮಕೂರು: ತಾಲೂಕಿನ ಊರುಕೆರೆ ಬಳಿ ಸುಮಾರು 40 ವರ್ಷದ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು, ಕಳೆದ ಎರಡು ದಿನಗಳ ಹಿಂದೆ ತಂದು ಬಿಸಾಡಲಾಗಿದೆ. ಬೇರೆಡೆ ಕೊಲೆಗೈದು ಇಲ್ಲಿಗೆ ತಂದು ಹಾಕಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಚಾಮರಾಜನಗರ: 2 ಹುಲಿಗಳ ಮೃತದೇಹ ಪತ್ತೆ ಪ್ರಕರಣ; ವಿಷವಿಕ್ಕಿ ಕೊಂದ್ರ ಅಕ್ಕ-ಪಕ್ಕದ ಜಮೀನಿನ ಮಾಲೀಕರು?
ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ವಡ್ರೇವು ಗ್ರಾಮದ ಜಮೀನುವೊಂದರಲ್ಲಿ ವಿಷಕಾರಿ ಸೊಪ್ಪು ತಿಂದು ಮೂವರು ರೈತರಿಗೆ ಸೇರಿದ 42 ಕುರಿಗಳು ಸಾವನ್ನಪ್ಪಿದ ಘಟನೆ ನಡೆದಿದೆ. ಕುರಿ ಮೇಯಿಸಲು ಹೋದಾಗ ಕುರಿಗಳು ಯಾವುದೋ ವಿಷವಿರುವ ಸೊಪ್ಪು ತಿಂದು ಕೊನೆಯುಸಿರೆಳೆದಿದೆ. ಇದೀಗ ಕುರಿಗಳ ಸಾವು ಹಿನ್ನೆಲೆ ರೈತರು ಕಂಗಾಲಾಗಿದ್ದು, ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:13 pm, Fri, 2 February 24