ಪುನೀತ್ ಕೆರೆಹಳ್ಳಿ ಸೇರಿದಂತೆ ಇತರೆ ಆರೋಪಿಗಳನ್ನ 7 ದಿನ ಪೋಲಿಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

ಜಾನುವಾರು ಸಾಗಾಟ ವೇಳೆ ವ್ಯಕ್ತಿ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿ ಸೇರಿ ಐವರನ್ನು ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.

ಪುನೀತ್ ಕೆರೆಹಳ್ಳಿ ಸೇರಿದಂತೆ ಇತರೆ ಆರೋಪಿಗಳನ್ನ 7 ದಿನ ಪೋಲಿಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ
ಆರೋಪಿಗಳು
Follow us
ರಮೇಶ್ ಬಿ. ಜವಳಗೇರಾ
|

Updated on:Apr 09, 2023 | 5:07 PM

ರಾಮನಗರ: ಜಾನುವಾರು ಸಾಗಾಟ ವೇಳೆ ಇದ್ರೀಶ್ ಪಾಷಾ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿ ಪುನೀತ್ ಕೆರೆಹಳ್ಳಿ(Puneeth Kerehalli) ಸೇರಿದಂತೆ ಇತರೆ ನಾಲ್ಕು ಆರೋಪಿಗಳಿಗೆ 7 ದಿನಗಳ‌ ಕಾಲ ಪೋಲಿಸ್ ಕಸ್ಟಡಿಗೆ ನೀಡಿ ಕನಕಪುರ JMFC ನ್ಯಾಯಾಲಯ ಆದೇಶ ಹೊರಡಿಸಿದೆ. ಇದ್ರೀಶ್ ಪಾಷಾ ಅನುಮಾನಾಸ್ಪದ ಸಾವು ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಹಿಂದೂಪರ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಮತ್ತು ನಾಲ್ವರು ಸಹಚರರನ್ನು ಇಂದು ಬೆಳಗ್ಗೆ ರಾಜಸ್ಥಾನದಿಂದ ರಾಮನಗರಕ್ಕೆ ಕರೆತಂದಿದ್ದು, ಬಳಿಕ ಪೊಲೀಸರು ಆರೋಪಿಗಳನ್ನು ಕನಕಪುರ ಜೆಎಂಎಫ್​ಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ಹೆಚ್ಚಿನ‌ ವಿಚಾರಣೆಗೆ ಆರೋಪಿಗಳನ್ನು 7 ದಿನಗಳ‌ ಕಾಲ ಪೋಲಿಸ್ ಕಸ್ಟಡಿಗೆ ನೀಡಿ ನ್ಯಾಯಾಧೀಶರು ಆದೇಶಿಸಿದ್ದಾರೆ.

ಇದನ್ನೂ ಒದಿ: ಗೋ ಸಾಗಾಟ ವೇಳೆ ವ್ಯಕ್ತಿ ಅನುಮಾನಸ್ಪದ ಸಾವು: ರಾಜಸ್ಥಾನದಲ್ಲಿ ಪುನೀತ್ ‌ಕೆರೆಹಳ್ಳಿ ಬಂಧನ 

ಈ ಪ್ರಕರಣದ ಬಗ್ಗೆ ಇನ್ನಷ್ಟು ವಿಚಾರಣೆ ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ತಮ್ಮ ಕಸ್ಟಡಿಗೆ ನೀಡಬೇಕೆಂದು ನ್ಯಾಯಾಲಕ್ಕೆ ಪೊಲೀಸರು ಮನವಿ ಮಾಡಿದ್ದರು. ಪೊಲೀಸ್ ಮನವಿ ಪುರಸ್ಕರಿಸಿದ ಕೋರ್ಟ್, ಆರೋಪಿಗಳನ್ನು ಏಳು ದಿನ ಪೊಲೀಸ್​ ಕಸ್ಟಡಿಗೆ ನೀಡಿ ಆದೇಶಿಸಿದೆ. ಇನ್ನು ಪುನೀತ್ ಕೆರಹಳ್ಳಿ ಪರವಾಗಿ ಬೆಂಗಳೂರು ಮೂಲದ ಇಬ್ಬರು ವಕೀಲರು ವಕಾಲತ್ತು ವಹಿಸಿದ್ದರು.

ಮಾರ್ಚ್ 31 ರಂದು ಮಂಡ್ಯದಿಂದ ಬರ್ತಿದ್ದ ವಾಹನವನ್ನ ಅಡ್ಡಗಟ್ಟಿ ಅದರಲ್ಲಿದ್ದ ಗೋವುಗಳನ್ನ ರಕ್ಷಣೆ ಮಾಡಿ ಇದೇ ಪುನೀತ್ ಕೇರೆಹಳ್ಳಿ ಆ್ಯಂಡ್ ಗ್ಯಾಂಗ್ ಅವತ್ತು ಫೇಸ್ಬುಕ್ನಲ್ಲಿ ಲೈವ್ ಮಾಡಿ ಬಿಲ್ಡ್ ಅಪ್ ಕೊಟ್ಟಿತ್ತು. ಸಾತನೂರು ಪೊಲೀಸರು ಇವರಿಗೆ ಶಹಬಾಸ್ ಅಂತ ಹೇಳಿ ಅವನ ಕೈನಲ್ಲೇ ಒಂದು ಕಂಪ್ಲೆಂಟ್ ದಾಖಲಸಿಕೊಂಡು ಅವರನ್ನ ಕಳಹುಹಿಸಿದ್ದರು. ಆದ್ರೆ ಕಹಾನಿ ಮೇ ಟ್ವಿಸ್ಟ್ ಎಂಬಂತೆ ಅವತ್ತು ರಾತ್ರಿ ಕಳೆದು ಬೆಳಗಾಗುವಷ್ಟರಲ್ಲೇ ಇದೇ ಕ್ಯಾಂಟರ್​ನಲ್ಲಿದ್ದ ಇದ್ರೀಷ್ ಪಾಷ(35) ಶವವಾಗಿ ಪತ್ತೆಯಾಗಿದ್ದರು.

ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಸಾತನೂರು ಗ್ರಾಮದ ಬಳಿ ಮಂಡ್ಯದ ಗುತ್ತಲು ನಿವಾಸಿ ಇದ್ರೀಷ್ ಪಾಷ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಮೃತನ ಸಹೋದರ ಸಾತನೂರು ‌ಠಾಣೆಗೆ ಪುನೀತ್ ಕೆರೆಹಳ್ಳಿ ಸೇರಿದಂತೆ ಇತರರರ ವಿರುದ್ಧ ದೂರು ನೀಡಿದ್ದರು.  ರಾಷ್ಟ್ರೀಯ ರಕ್ಷಣಾ ಪಡೆಯ ಪುನಿತ್ ಕೆರೆಹಳ್ಳಿ, ಗೋಪಿ, ಪವನ್ ಕುಮಾರ್, ಪಿಲ್ಲಿಂಗ್ ಅಂಬಿಗಾರ್, ಸುರೇಶ್ ಎನ್ನುವವರ ವಿರುದ್ಧ  ಐಪಿಸಿ ಸೆಕ್ಷನ್ 341, 504, 506, 324, 302, 34 ರ ಅಡಿ ಕೇಸ್ ದಾಖಲಾಗಿತ್ತು. ದೂರು ದಾಖಲಾಗುತ್ತಿದ್ದಂತೆಯೇ ಕಳೆದ ಐದು ದಿನದಿಂದ ಪುನೀತ್ ಅಂಡ್ ಟೀಂ ತಲೆ ಮರೆಸಿಕೊಂಡಿತ್ತು. ಇನ್ನು ಆರೋಪಿಗಳನ್ನು ಬಂಧಿಸಲು ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ನಾಲ್ಕು ತಂಡಗಳನ್ನು ರಚಿಸಿದ್ದರು. ಕೊನೆಗೆ ಏಪ್ರಿಲ್ 5 ರಂದು ಆರೋಪಿಗಳು ರಾಜಸ್ಥಾನದಲ್ಲಿ  ಸಿಕ್ಕಿಬಿಬಿದ್ದಿದ್ದರು. ಬಳಿಕ ರಾಜಸ್ಥಾನದ ಸ್ಥಳೀಯ ನ್ಯಾಯಾಲಕ್ಕೆ ಹಾಜರು ಪಡಿಸಿ ಇಂದು ಬೆಳಗ್ಗೆ ಆರೋಪಿಗಳನ್ನು ರಾಮನಗರಕ್ಕೆ ಕರೆತರಲಾಗಿತ್ತು.

Published On - 4:43 pm, Sun, 9 April 23