ರಾಮನಗರ: ವಿದ್ಯಾರ್ಥಿನಿಯರಿಗೆ ಬಿಯರ್​ ಕುಡಿಸಿ ಉಪನ್ಯಾಸಕರಿಂದ ಕಿರುಕುಳ

ರಾಮನಗರ ಜಿಲ್ಲೆಯ ಕನಕಪುರ ಪಟ್ಟಣದ ರೂರಲ್‌ ಪದವಿ ಪೂರ್ವ ಕಾಲೇಜಿನ ಮೂವರು ಉಪನ್ಯಾಸಕರು ತಮ್ಮ ಜವಾಬ್ದಾರಿ ಮರೆತು, ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಪ್ರವಾಸಕ್ಕೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ವಿದ್ಯರ್ಥಿನಿಯರಿಗೆ ಬಿಯರ್​ ಕುಡಿಸಿದ್ದಾರೆ. ಮುಂದೇನಾಯ್ತು? ಈ ಸ್ಟೋರಿ ಓದಿ.

ರಾಮನಗರ: ವಿದ್ಯಾರ್ಥಿನಿಯರಿಗೆ ಬಿಯರ್​ ಕುಡಿಸಿ ಉಪನ್ಯಾಸಕರಿಂದ ಕಿರುಕುಳ
ಉಪನ್ಯಾಸಕ ಬಿಯರ್​​ ಸೇವನೆ, ವಿದ್ಯಾರ್ಥಿನಿಯರಿಗೆ ಕಿರುಕುಳ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ Edited By: ವಿವೇಕ ಬಿರಾದಾರ

Updated on: Oct 18, 2024 | 10:18 AM

ರಾಮನಗರ, ಅಕ್ಟೋಬರ್​ 18: ವಿದ್ಯಾರ್ಥಿನಿಯರಿಗೆ (Students) ಬಿಯರ್ ಕುಡಿಸಿ, ಡ್ಯಾನ್ಸ್ ಮಾಡುವಂತೆ ಕಿರುಕುಳ ನೀಡಿದ ಆರೋಪದ ಮೇಲೆ ಕನಕಪುರ (Kanakapura) ಪಟ್ಟಣದ ರೂರಲ್‌ ಪದವಿ ಪೂರ್ವ ಕಾಲೇಜಿನ ಮೂವರು ಉಪನ್ಯಾಸಕರ (Lecturer) ವಿರುದ್ಧ ಕ್ರಮ ಕೈಗೊಳ್ಳುವಂತೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಆದೇಶಿಸಿದೆ. ಉಪನ್ಯಾಸಕರಾದ ವಿಶ್ವನಾಥ್​, ಲಕ್ಷ್ಮೀಶ್​, ನಾಗೇಶ್ ವಿರುದ್ಧ ದಾಖಲಾಗಿದೆ. ಅಕ್ಟೋಬರ್​​​ 09 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಕನಕಪುರ ಪಟ್ಟಣದ ರೂರಲ್‌ ಪದವಿ ಪೂರ್ವ ಕಾಲೇಜಿನಿಂದ ಅಕ್ಟೋಬರ್​​​ 5 ರಿಂದ 10ರವರೆಗೆ ಮಡಿಕೇರಿ ಪ್ರವಾಸ ಆಯೋಜಿಸಲಾಗಿತ್ತು. ಪ್ರವಾಸದಲ್ಲಿ ಪ್ರಾಂಶುಪಾಲರು ಬಿಯರ್​ ಕುಡಿದಿದ್ದಾರೆ. ಬಳಿಕ ಮೂವರು ವಿದ್ಯಾರ್ಥಿನಿಯರನ್ನು ಕೋಣೆಯಲ್ಲಿ ಕೂಡಿಹಾಕಿ ಬಲವಂತವಾಗಿ ಬಿಯರ್​ ಕುಡಿಸಿದ್ದಾರೆ. ಅಲ್ಲದೇ, ತಮ್ಮ ಜೊತೆ ಡ್ಯಾನ್ಸ್​ ಮಾಡುವಂತೆ ಬಲವಂತ ಮಾಡಿದ್ದಾರೆ.

ಇದನ್ನೂ ಓದಿ: ಸ್ವೀಟಿಯ ಅಕ್ರಮ ಸಂಬಂಧಕ್ಕೆ ಅಡ್ಡಿ, ಮಕ್ಕಳು ಬಲಿ

ಪ್ರವಾಸದಿಂದ ಕಾಲೇಜಿಗೆ ಬಂದ ಬಳಿಕ ವಿದ್ಯಾರ್ಥಿನಿಯರು ನಡೆದ ಘಟನೆ ಬಗ್ಗೆ ಮಹಿಳಾ ಉಪನ್ಯಾಸಕರಿಗೆ ಹೇಳಿದ್ದಾರೆ. ಅದಕ್ಕೆ ಮಹಿಳಾ ಉಪನ್ಯಾಸಕಿಯರು “ಕಾಲೇಜು ಅಂದಮೇಲೆ ಇದು ಕಾಮನ್” ಎಂದಿದ್ದಾರೆ. ಆದರೆ, ಈ ವಿಚಾರ ಮಕ್ಕಳಾ ಹಕ್ಕುಗಳ ರಕ್ಷಣಾ ಆಯೋಗಕ್ಕೆ ತಿಳಿದಿದೆ.

ವಿಚಾರ ತಿಳಿದ ಕೂಡಲೇ ಮಕ್ಕಳಾ ಹಕ್ಕುಗಳ ರಕ್ಷಣಾ ಆಯೋಗ, ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಪತ್ರ ಬರೆದು ಉಪನ್ಯಾಸಕರ ವಿರುದ್ಧ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದೆ. ಅಲ್ಲದೇ ಪ್ರಕರಣದ ತನಿಖೆ ನಡೆಸಿ ಏಳು ದಿನದೊಳಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸೈಯ್ಯದ್​ ನಿಜಾಮುದ್ದೀನ್​, ರಾಮನಗರ

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Loading...
Unable to load recommendations.
Follow Us