AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಹದಲ್ಲಿ ಒಂದೇ ಒಂದು ಮಚ್ಚೆ ಇರಬಾರದು, ಬೆತ್ತಲೆ ಪೂಜೆಗೆ 30 ಲಕ್ಷ ರೂ. : ಯುವತಿಗೆ ಕಾಲ್‌ ಮಾಡಿ ಟಾರ್ಚರ್ ನೀಡುತ್ತಿದ್ದ ಕಿರಣ್

ರಾಮನಗರದಲ್ಲಿ ಮಾಟಮಂತ್ರದ ಹೆಸರಿನಲ್ಲಿ ಯುವತಿಗೆ ₹30 ಲಕ್ಷ ಆಮಿಷವೊಡ್ಡಿ, ಬೆತ್ತಲೆ ಪೂಜೆಗೆ ಒತ್ತಾಯಿಸಿದ ಘಟನೆ ಬೆಳಕಿಗೆ ಬಂದಿದೆ. ಇದೇ ರೀತಿಯಲ್ಲಿ ಬೆಂಗಳೂರಿನಲ್ಲಿ ಜ್ಯೋತಿಷಿಯೊಬ್ಬ ಬ್ಯೂಟಿಷಿಯನ್ ಮೇಲೆ ಅತ್ಯಾಚಾರ ಎಸಗಿದ್ದಾನೆ. ಮಹಿಳೆಯರನ್ನು ದುರ್ಬಳಕೆ ಮಾಡಿಕೊಳ್ಳುವ ಜಾಲದ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತೀವ್ರ ತನಿಖೆ ಕೈಗೊಂಡಿದ್ದಾರೆ. ಇಂತಹ ವಂಚನೆಗಳಿಂದ ಸಮಾಜ ಜಾಗೃತಿ ವಹಿಸುವುದು ಅನಿವಾರ್ಯ.

ದೇಹದಲ್ಲಿ ಒಂದೇ ಒಂದು ಮಚ್ಚೆ ಇರಬಾರದು, ಬೆತ್ತಲೆ ಪೂಜೆಗೆ 30 ಲಕ್ಷ ರೂ. : ಯುವತಿಗೆ ಕಾಲ್‌ ಮಾಡಿ ಟಾರ್ಚರ್ ನೀಡುತ್ತಿದ್ದ ಕಿರಣ್
ಯುವತಿಗೆ ಕಾಲ್‌ ಮಾಡಿ ಟಾರ್ಚರ್ ನೀಡುತ್ತಿದ್ದ ಕಿರಣ್
ಪ್ರಶಾಂತ್​ ಬಿ.
| Edited By: |

Updated on: May 03, 2026 | 10:48 AM

Share

ರಾಮನಗರ, ಮೇ.3: ಜಿಲ್ಲೆಯಲ್ಲಿ ಮಾಟ-ಮಂತ್ರ ಮತ್ತು ವಾಮಾಚಾರದ ಹೆಸರಿನಲ್ಲಿ ಯುವತಿಯೊಬ್ಬರಿಗೆ ಬರೋಬ್ಬರಿ 30 ಲಕ್ಷ ರೂಪಾಯಿ ಆಮಿಷವೊಡ್ಡಿ, ಬೆತ್ತಲೆ ಪೂಜೆಗೆ ಕುಳಿತುಕೊಳ್ಳುವಂತೆ ಒತ್ತಾಯಿಸಿ ಕಿರುಕುಳ ನೀಡಿದ ಘಟನೆ ನಡೆದಿದೆ. ಈ ಸಂಬಂಧ ಕಿರಣ್ ಎಂಬಾತನ ವಿರುದ್ಧ ರಾಮನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇಂತಹದೇ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಪೂಜೆ ಮತ್ತು ದೀಕ್ಷೆಯ ನೆಪದಲ್ಲಿ ಬ್ಯೂಟಿಷಿಯನ್ ಒಬ್ಬರ ಮೇಲೆ ಜ್ಯೋತಿಷಿಯೊಬ್ಬ ನಿರಂತರವಾಗಿ ಅತ್ಯಾಚಾರ ಎಸಗಿರುವ ಘನಘೋರ ಘಟನೆ ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದೀಗ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.

“ದೇಹದಲ್ಲಿ ಒಂದೇ ಒಂದು ಮಚ್ಚೆ ಇರಬಾರದು, ಮಚ್ಚೆ ಇದ್ದರೆ ಪೂಜೆಗೆ ಕುಳಿತುಕೊಳ್ಳಲು ಆಗುವುದಿಲ್ಲ” ಎಂದು ಹೇಳಿ ಆಕೆಗೆ ಫೋಟೋ ಕಳುಹಿಸುವಂತೆ ಪೀಡಿಸಿದ್ದಾನೆ. ಅಷ್ಟೇ ಅಲ್ಲದೆ, ಇತರ ಕೆಲವು ಯುವತಿಯರ ಫೋಟೋಗಳನ್ನು ವಾಟ್ಸಾಪ್ ಮೂಲಕ ಕಳುಹಿಸಿ ನಂಬಿಸಲು ಯತ್ನಿಸಿದ್ದಾನೆ.

ಇದನ್ನೂ ಓದಿ; ಯಾರಿಗಾದರೂ ಹೇಳಿದ್ರೆ ಗಂಡ-ಮಗ ರಕ್ತ ಕಾರಿ ಸಾಯ್ತಾರೆ: ಮಾಟ-ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ!

ಏಪ್ರಿಲ್ 12ರಂದು ಈ ಕರೆ ಬಂದಿದ್ದು, ಇದರಿಂದ ರೋಸಿಹೋದ ಚೈತ್ರಾ ಮತ್ತು ಅವರ ಕುಟುಂಬಸ್ಥರು ರಾಮನಗರ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗುತ್ತಿದ್ದಂತೆ ಬೆಂಗಳೂರಿನಲ್ಲಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ ಕಿರಣ್ ಎಂಬಾತ ಪರಾರಿಯಾಗಿದ್ದಾನೆ.ಮಾಟ-ಮಂತ್ರದ ಹೆಸರಿನಲ್ಲಿ ಯುವತಿಯರನ್ನು ದುರ್ಬಳಕೆ ಮಾಡಿಕೊಳ್ಳುವ ಜಾಲದ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತೀವ್ರ ತನಿಖೆ ಕೈಗೊಂಡಿದ್ದಾರೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
ಬಕ್ರೀದ್ ಸ್ಪೆಷಲ್: ಪೆರೆಸಂದ್ರ ಸಂತೆಯಲ್ಲಿ ಕುರಿಗಳಿಗೆ ಭಾರೀ ಬೇಡಿಕೆ!
ಬಕ್ರೀದ್ ಸ್ಪೆಷಲ್: ಪೆರೆಸಂದ್ರ ಸಂತೆಯಲ್ಲಿ ಕುರಿಗಳಿಗೆ ಭಾರೀ ಬೇಡಿಕೆ!
ಅಭಿಮಾನಿಗಳ ಬಳಿ ವಿಶೇಷ ಮನವಿ ಇಟ್ಟ ಅಶ್ವಿನಿ ಗೌಡ
ಅಭಿಮಾನಿಗಳ ಬಳಿ ವಿಶೇಷ ಮನವಿ ಇಟ್ಟ ಅಶ್ವಿನಿ ಗೌಡ
ಕಳ್ಳನಾಯಿ: ಬೈಕ್​ನಿಂದ 1 ಲಕ್ಷ ರೂ.ಇದ್ದ ಹಣದ ಬ್ಯಾಗ್ ಕದ್ದೊಯ್ದ ನಾಯಿ
ಕಳ್ಳನಾಯಿ: ಬೈಕ್​ನಿಂದ 1 ಲಕ್ಷ ರೂ.ಇದ್ದ ಹಣದ ಬ್ಯಾಗ್ ಕದ್ದೊಯ್ದ ನಾಯಿ
ಭಟ್ಕಳ ಮೂರಿನ್ ಕಟ್ಟೆ ವಿವಾದ: ಅಸಲಿಗೆ ಆಗಿದ್ದೇನೆಂಬ ಮಾಹಿತಿ ಕೊಟ್ಟ ಎಸ್ಪಿ
ಭಟ್ಕಳ ಮೂರಿನ್ ಕಟ್ಟೆ ವಿವಾದ: ಅಸಲಿಗೆ ಆಗಿದ್ದೇನೆಂಬ ಮಾಹಿತಿ ಕೊಟ್ಟ ಎಸ್ಪಿ
ವಿದೇಶಿ ಪ್ರವಾಸ ಕೈಬಿಟ್ಟು ಸ್ವದೇಶಿ ಪ್ರವಾಸಕ್ಕೆ ಆದ್ಯತೆ ನೀಡಿ!
ವಿದೇಶಿ ಪ್ರವಾಸ ಕೈಬಿಟ್ಟು ಸ್ವದೇಶಿ ಪ್ರವಾಸಕ್ಕೆ ಆದ್ಯತೆ ನೀಡಿ!
ಭಟ್ಕಳ ದುರಂತ: ಮನಕಲಕುವಂತಿದೆ ಜಲಸಮಾಧಿಯಾದ 11 ಮಂದಿಯ ಕುಟುಂಬದ ಕಥೆಗಳು
ಭಟ್ಕಳ ದುರಂತ: ಮನಕಲಕುವಂತಿದೆ ಜಲಸಮಾಧಿಯಾದ 11 ಮಂದಿಯ ಕುಟುಂಬದ ಕಥೆಗಳು
ಕಾಂಗ್ರೆಸ್ ನಾಯಕರಿಂದ ಜಂಟಿ ಸುದ್ದಿಗೋಷ್ಠಿ ನೇರಪ್ರಸಾರ
ಕಾಂಗ್ರೆಸ್ ನಾಯಕರಿಂದ ಜಂಟಿ ಸುದ್ದಿಗೋಷ್ಠಿ ನೇರಪ್ರಸಾರ
ಬೈಕ್ ತಡೆದಿದ್ದಕ್ಕೆ ಪೊಲೀಸ್ ಕಾನ್‌ಸ್ಟೆಬಲ್ ತಲೆಗೆ ಹೊಡೆದು ಪರಾರಿ
ಬೈಕ್ ತಡೆದಿದ್ದಕ್ಕೆ ಪೊಲೀಸ್ ಕಾನ್‌ಸ್ಟೆಬಲ್ ತಲೆಗೆ ಹೊಡೆದು ಪರಾರಿ
ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ, ಬೆಂಗಳೂರಿನಲ್ಲಿ ಇಂಧನ ದರದ ಚಾರ್ಟ್ ಇಲ್ಲಿದೆ
ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ, ಬೆಂಗಳೂರಿನಲ್ಲಿ ಇಂಧನ ದರದ ಚಾರ್ಟ್ ಇಲ್ಲಿದೆ
ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್ ಬಗ್ಗೆ ಡಿಸಿಎಂ ಡಿಕೆಶಿ ಏನಂದ್ರು?
ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್ ಬಗ್ಗೆ ಡಿಸಿಎಂ ಡಿಕೆಶಿ ಏನಂದ್ರು?