AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆಶಿ ತವರು ಜಿಲ್ಲೆಯಲ್ಲಿ ಫಾರಿನ್ ಮಾದರಿಯ ಪಾರ್ಕ್: ಏನೇನು ವಿಶೇಷತೆ? ಎಷ್ಟು ಖರ್ಚು? ಇಲ್ಲಿದೆ ವಿವರ

ಇತ್ತೀಚಿಗಷ್ಟೇ ರಾಜ್ಯ ಸರ್ಕಾರ ರಾಮನಗರವನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಿತ್ತು. ಈ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಾಮನಗರ ಜನರಿಗೆ ಸಿಹಿ ಸುದ್ದಿ ನೀಡಿದ್ದಾರೆ. ತವರು ಜಿಲ್ಲೆ ರಾಮನಗರ ಅಭಿವೃದ್ಧಿ ಟೊಂಕ ಕಟ್ಟಿ ನಿಂತಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಮ್ಮ ಜಿಲ್ಲೆಯ ಜನರಿಗೆ ಭರ್ಜರಿ ಗಿಫ್ಟ್​ ಕೊಟ್ಟಿದ್ದಾರೆ. ಇಲ್ಲಿದೆ ವಿವರ

ಡಿಕೆಶಿ ತವರು ಜಿಲ್ಲೆಯಲ್ಲಿ ಫಾರಿನ್ ಮಾದರಿಯ ಪಾರ್ಕ್: ಏನೇನು ವಿಶೇಷತೆ? ಎಷ್ಟು ಖರ್ಚು? ಇಲ್ಲಿದೆ ವಿವರ
ರಾಮನಗರದಲ್ಲಿ ಹೈಟೆಕ್ ಥೀಮ್ ಪಾರ್ಕ್ ನಿರ್ಮಾಣ ಕಾಮಗಾರಿ
ಪ್ರಶಾಂತ್​ ಬಿ.
| Edited By: |

Updated on:Jun 23, 2025 | 8:40 PM

Share

ರಾಮನಗರ, ಜೂನ್​ 23: ರಾಜ್ಯ ಕಾಂಗ್ರೆಸ್ ಸರ್ಕಾರ (Congress Government) ರೇಷ್ಮೆನಗರಿ ರಾಮನಗರಕ್ಕೆ (Ramanagara) ಭರ್ಜರಿ ಗಿಫ್ಟ್ ಕೊಟ್ಟಿದೆ. ರಾಮನಗರದ ಅರ್ಕಾವತಿ ನದಿ ದಡದಲ್ಲಿ ಸರಿಸುಮಾರು 3.75 ಕಿಮೀ ಉದ್ದದಲ್ಲಿ ಹೈಟೆಕ್ ಥೀಮ್ ಪಾರ್ಕ್ (Hi-tech theme park) ನಿರ್ಮಾಣಕ್ಕೆ ಮುಂದಾಗಿದೆ. ನಗರದಲ್ಲಿ ಈ ಕಾಮಗಾರಿ ಪ್ರಾರಂಭ ಆಗಿದ್ದು ನಗರದ ಜನರಿಗಾಗಿ ಈ ಯೋಜನೆಯನ್ನು ಸರ್ಕಾರ ಕೈಗೆತ್ತಿಕೊಂಡಿದೆ. ನಗರದಲ್ಲಿ ಜನರು ವಾಕ್ ಮಾಡಲು ಅನುಕೂಲವಾಗಲೆಂದು ಶಾಸಕ ಇಕ್ಬಾಲ್ ಹುಸೇನ್ ಈ ಮಹತ್ವಾಕಾಂಕ್ಷೆಯ ಯೋಜನೆಗೆ ಬ್ಲೂ ಪ್ರಿಂಟ್ ಸಿದ್ಧಪಡಿಸಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಂಸದ ಡಿ.ಕೆ.ಸುರೇಶ್ ಮಾರ್ಗದರ್ಶನದಲ್ಲಿ ಈ ಯೋಜನೆ ಸಿದ್ಧವಾಗಿದೆ. ಈಗಾಗಲೇ ಸರ್ಕಾರದಿಂದ 157 ಕೋಟಿ ಹಣ ಬಿಡುಗಡೆಯಾಗಿದ್ದು, ರಾಮನಗರದ ಅರ್ಕಾವತಿ ನದಿಯ ದಡದಲ್ಲಿ ಸ್ವಚ್ಛತಾ ಕಾರ್ಯ ಪ್ರಾರಂಭ ಆಗಿದೆ. ಈ ಯೋಜನೆಯಲ್ಲಿ ಪಾರ್ಕ್ ಜೊತೆಗೆ ವಾಕಿಂಕ್ ಪಾಥ್, ಡಿಜಿಟಲ್ ಲೈಬ್ರರಿ ಸೇರಿದಂತೆ ಅತ್ಯಾಧುನಿಕ ಆಡಿಟೋರಿಯಂ ಸಹ ನಿರ್ಮಾಣ ಆಗಲಿದ್ದು ಸಾರ್ವಜನಿಕರಿಗೆ ಉಪಯುಕ್ತವಾಗಲಿದೆ.

ಒಟ್ಟಾರೆ ರಾಮನಗರ ಕ್ಷೇತ್ರದ ಜನರಿಗೆ ಕಾಂಗ್ರೆಸ್ ಸರ್ಕಾರ ಬಂಪರ್ ಕೊಡುಗೆ ನೀಡಿದೆ. ನಗರದ ಸೌಂದರ್ಯ ಹಾಗೂ ಜನರ ಉಪಯೋಗಕ್ಕಾಗಿ ಹೈಟೆಕ್ ಥೀಮ್ ಪಾರ್ಕ್ ನಿರ್ಮಾಣ ಆಗುತ್ತಿದ್ದು ಮುಂದಿನ ಎರಡ್ಮೂರು ವರ್ಷದಲ್ಲಿ ಕಾಮಗಾರಿ ಪೂರ್ಣವಾಗಲಿದೆ.

ಇದನ್ನೂ ಓದಿ
Image
ರಾಮನಗರದಲ್ಲಿ ಹಸುವಿನ ಕೆಚ್ಚಲು ಕೊಯ್ದ ದುಷ್ಕರ್ಮಿಗಳು
Image
ಬಮೂಲ್​ ನೂತನ ಅಧ್ಯಕ್ಷರಾಗಿ ಡಿಕೆ ಸುರೇಶ್​ ಆಯ್ಕೆ
Image
ರಾಮನಗರದಲ್ಲಿ ನಕಲಿ ಖಾಸಗಿ ಶಾಲೆಗಳ ಹಾವಳಿ: ಮಕ್ಕಳ ಭವಿಷ್ಯದೊಂದಿಗೆ ಚೆಲ್ಲಾಟ
Image
ನಕಲಿ ಕ್ಲಿನಿಕ್​ಗಳ ಹಾವಳಿ: ನಕಲಿ ವೈದ್ಯನ ಚಿಕಿತ್ಸೆಯಿಂದ 6 ತಿಂಗಳ ಮಗು ಸಾವು

ರಾಮನಗರಕ್ಕೆ ಮರುನಾಮಕರಣ

ಮೇ 22 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ತೀರ್ಮಾನಿಸಲಾಗಿತ್ತು. ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಿದರು. ಈ ಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಪಾತ್ರ ಹೆಚ್ಚಿತ್ತು.

ಇದನ್ನೂ ಓದಿ: ಶೋಲೆಯ ರಾಮಗಢ ಇನ್ನಿಲ್ಲ, ಶುರುವಾಯ್ತು ಹೆಸರು ಬದಲಾವಣೆ

ರಾಮನಗರ ಮೊದಲು ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯಲ್ಲಿತ್ತು. ನಂತರ ಹೆಚ್​ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ 2007ರ ಆಗಸ್ಟ್ 23 ರಂದು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಲಾಗಿತ್ತು. ಜೆಡಿಎಸ್ ಹಾಗೂ ಬಿಜೆಪಿ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದ್ದಾಗ, ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಈ ನಿರ್ಧಾರ ಕೈಗೊಳ್ಳಲಾಗಿತ್ತು. ಇದೀಗ ಕಾಂಗ್ರೆಸ್ ಅಧಿಕಾರದಲ್ಲಿದ್ದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರಬಲ ಆಕಾಂಕ್ಷೆಯ ಮೇರೆಗೆ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:38 pm, Mon, 23 June 25

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್