ಎಸ್ಐಗಳೇ ಮುಂದೆ ನಿಂತು ಹೊಟೆಲ್ ಬಂದ್ ಮಾಡಿಸಬೇಕು: ಕನಕಪುರ ಪೊಲೀಸ್ ಠಾಣೆಗಳಿಗೆ ಸರ್ಕಾರದ ಸುತ್ತೋಲೆ
ಲಾಕ್ಡೌನ್ನಲ್ಲಿ ವಿನಾಯಿತಿ ಇರುವವರು ದಾಖಲೆ ಇಟ್ಟುಕೊಂಡು ಸಂಚರಿಸಬೇಕು. ವೀಕೆಂಡ್ ಲಾಕ್ಡೌನ್ ವೇಳೆ ನಗರ ಸಂಪೂರ್ಣ ಬಂದ್ ಆಗಲಿದೆ ಎಂದು ಸಿಪಿಐ ತಿಳಿಸಿದ್ದಾರೆ.
ರಾಮನಗರ: ಕನಕಪುರ ವೃತ್ತ ಎಲ್ಲ ಪೊಲೀಸ್ ಠಾಣೆಗಳ ಸಬ್ ಇನ್ಸ್ಪೆಕ್ಟರ್ಗಳು ಸ್ವತಃ ಮುಂದೆ ನಿಂತು ಹೊಟೆಲ್, ಬಾರ್, ರೆಸ್ಟೊರೆಂಟ್ಗಳನ್ನು ಶುಕ್ರವಾರ ರಾತ್ರಿ ಬಂದ್ ಮಾಡಿಸಬೇಕು ಎಂದು ಕರ್ನಾಟಕ ಸರ್ಕಾರವು ಪಿಎಸ್ಐಗಳಿಗೆ ಸೂಚನೆ ನೀಡಿದೆ. ಈ ಸಂಬಂಧ ಇನ್ಸ್ಪೆಕ್ಟರ್ಗಳಿಗೆ ಸರ್ಕಾರವು ಜ್ಞಾಪನಾ ಸುತ್ತೋಲೆ ಹೊರಡಿಸಿದೆ. ಸರ್ಕಾರದ ಆದೇಶ ಹಿನ್ನೆಲೆ ಎಲ್ಲ ಪಿಎಸ್ಐಗಳಿಗೂ ಸರ್ಕಲ್ ಇನ್ಸ್ಪೆಕ್ಟರ್ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿಯಿಂದ ಸೋಮವಾರದವರೆಗೆ ಬಾರ್, ಪಬ್, ಹೋಟೆಲ್, ರೆಸ್ಟೋರೆಂಟ್, ರೆಸಾರ್ಟ್ಗಳ ಬಾಗಿಲು ಹಾಕಿಸಬೇಕೆಂದು ಸರ್ಕಲ್ ಇನ್ಸ್ಪೆಕ್ಟರ್ ಸೂಚನೆ ನೀಡಿದ್ದಾರೆ. ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರುವವರ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ. ಮೇಕೆದಾಟು ಯೋಜನೆಯ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಮಾಡಿದ್ದ ಡಿ.ಕೆ.ಶಿವಕುಮಾರ್ ಸರ್ಕಾರದ ಆದೇಶವನ್ನು ಪ್ರಶ್ನಿಸಿದ್ದರು.
ವೀಕೆಂಡ್ ಕರ್ಫ್ಯೂ: ಯಾರಿಗೂ ಪಾಸ್ ಇಲ್ಲ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಆದೇಶಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಸರ್ಕಾರ ಹೊರಡಿಸಿರುವ ಎಲ್ಲ ನಿಯಮಗಳ ಜಾರಿಗೆ ಸಿದ್ಧತೆ ಮಾಡಿಕೊಂಡಿದ್ದು, ಯಾರಿಗೂ ಪೊಲೀಸ್ ಇಲಾಖೆಯಿಂದ ಯಾವುದೇ ಪಾಸ್ ನೀಡುವುದಿಲ್ಲ. ಅನಗತ್ಯವಾಗಿ ರಸ್ತೆಗೆ ಇಳಿಯುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.
ಲಾಕ್ಡೌನ್ನಲ್ಲಿ ವಿನಾಯಿತಿ ಇರುವವರು ದಾಖಲೆ ಇಟ್ಟುಕೊಂಡು ಸಂಚರಿಸಬೇಕು. ವೀಕೆಂಡ್ ಲಾಕ್ಡೌನ್ ವೇಳೆ ನಗರ ಸಂಪೂರ್ಣ ಬಂದ್ ಆಗಲಿದೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ವೀಕೆಂಡ್ ಕರ್ಫ್ಯೂನಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಕೊಡದಿದ್ದರೆ ದಿನಕ್ಕೆ 75 ಕೋಟಿ ನಷ್ಟ; ಸಚಿವ ಗೋಪಾಲಯ್ಯ ಪ್ರಸ್ತಾಪ ಇದನ್ನೂ ಓದಿ: ಬಿಕೋ ಎನ್ನುತ್ತಿವೆ ಚಿತ್ರಮಂದಿರಗಳು; ವೀಕೆಂಡ್ ಕರ್ಫ್ಯೂಗೂ ಮುನ್ನವೇ ಚಿತ್ರರಂಗ ಸೈಲೆಂಟ್