ರೆಸಾರ್ಟ್​​ನಲ್ಲಿ ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ದುರ್ಮರಣ

| Updated By: ಕಿರಣ್ ಹನುಮಂತ್​ ಮಾದಾರ್

Updated on: May 19, 2024 | 9:16 PM

ಇಂದು ಭಾನುವಾರವಾದ ಹಿನ್ನಲೆ 18 ಜನ ಸ್ನೇಹಿತರ ಜೊತೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ಗೆ ಬಂದಿದ್ದರು. ಈ ವೇಳೆ ರೆಸಾರ್ಟ್​​ನಲ್ಲಿ ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆ ಮ್ಯಾನೇಜರ್​​ನನ್ನು ವಶಕ್ಕೆ ಪಡೆಯಲಾಗಿದ್ದು, ಈ ಕುರಿತು ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರೆಸಾರ್ಟ್​​ನಲ್ಲಿ ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ದುರ್ಮರಣ
ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ದುರ್ಮರಣ
Follow us on

ರಾಮನಗರ, ಮೇ.19: ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್  ರೆಸಾರ್ಟ್(Jungle Trails Resort)​​ನಲ್ಲಿ ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಅತ್ತಿಬೆಲೆ ಮೂಲದ ರಂಜನಿ(35)‌ ಮೃತ ದುರ್ದೈವಿ. ಇಂದು ಭಾನುವಾರವಾದ ಹಿನ್ನಲೆ 18 ಜನ ಸ್ನೇಹಿತರ ಜೊತೆ ಜಂಗಲ್ ಟ್ರಯಲ್ಸ್ ರೆಸಾರ್ಟ್​ಗೆ ಬಂದಿದ್ದರು. ಬೆಳಿಗ್ಗೆ 11‌ಗಂಟೆಗೆ ತಂತಿಯ ಜಿಪ್ ನಲ್ಲಿ ಕೂತಿದ್ದ‌ ರಂಜನಿ, ಈ ವೇಳೆ ಜಿಪ್​ ಲೈನ್​ ತುಂಡಾಗಿ ನೆಲಕ್ಕೆ ಬಿದ್ದು ಕೊನೆಯುಸಿರೆಳೆದಿದ್ದಾರೆ.

ಜಿಪ್ ಲೈನ್ ಬಗ್ಗೆ ಹಲವು ಬಾರಿ ದೂರು ನೀಡಿದ್ರೂ ಡೋಂಟ್​​ಕೇರ್​

ಇನ್ನು ಮಹಿಳೆಯ ಮೃತದೇಹವನ್ನ ಮರಣೋತ್ತರ ಪರೀಕ್ಷೆ ನಡೆಸಿ ಹಸ್ತಾಂತರ ಮಾಡಲಾಗುತ್ತದೆ. ಘಟನೆ ಸಂಬಂಧ ರೆಸಾರ್ಟ್​ ಮ್ಯಾನೇಜರ್ ಪುಟ್ಟಮಾದು ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಜಿಪ್ ಲೈನ್ ಬಗ್ಗೆ ಹಲವು ಬಾರಿ ದೂರು ನೀಡಿದ್ರೂ ರೆಸಾರ್ಟ್ ಮಾಲಿಕ ಮಾತ್ರ ನಿರ್ಲಕ್ಷ್ಯ ತೋರಿದ್ದು, ಈ ಹಿನ್ನೆಲೆ ಮ್ಯಾನೇಜರ್​​ನನ್ನು ವಶಕ್ಕೆ ಪಡೆಯಲಾಗಿದ್ದು, ಈ ಕುರಿತು ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:ಕಾಸರಗೋಡು: ಆ್ಯಂಬುಲೆನ್ಸ್ ಡಿಕ್ಕಿ: ಕಾರಿನಲ್ಲಿ ತೆರಳುತ್ತಿದ್ದ ಮೂವರ ದುರ್ಮರಣ

ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ನೀರುಪಾಲು

ಉಡುಪಿ: ಜಿಲ್ಲೆಯ ಕಾರ್ಕಳ ತಾಲೂಕಿನ ಶಿರ್ಲಾಲುವಿನ ಉಬ್ಬರಬೈಲು ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ನೀರುಪಾಲಾದ ಘಟನೆ ನಡೆದಿದೆ. ಮುಡ್ಡಾಯಿಗುಡ್ಡೆ ನಿವಾಸಿಗಳಾದ ಹರೀಶ್(48) ಮತ್ತು ಹೃತೇಶ್(18) ಸಾವನ್ನಪ್ಪಿದ್ದಾರೆ. ಮೀನಿಗೆ ಬಲೆ‌ ಹಾಕುವಾಗ ಆಯತಪ್ಪಿ ಕೆರೆಗೆ ಬಿದ್ದು ಈ ದುರ್ಘಟನೆ ನಡೆದಿದೆ. ಈ ಕುರಿತು ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ