AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬಿಣ ತುಂಬಿದ್ದ ಟ್ರ್ಯಾಕ್ಟರ್ ಪಲ್ಟಿ: ಹೊಟ್ಟೆ ಪಾಡಿಗೆಗೆ ಕೋಲ್ಕತ್ತಾದಿಂದ ಬಂದಿದ್ದ ಇಬ್ಬರು ದುರಂತ ಅಂತ್ಯ

ಕಬ್ಬಿಣ ತುಂಬಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ಹೊಟ್ಟೆ ಪಾಡಿಗೆ ದುಡಿಯಲು ದೂರದ ಕೊಲ್ಕತ್ತಾದಿಂದ ಕರ್ನಾಟಕಕ್ಕೆ ಬಂದಿದ್ದ ಇಬ್ಬರು ಕಾರ್ಮಿಕರು ದುರಂತ ಅಂತ್ಯಕಂಡಿದ್ದಾರೆ.

ಕಬ್ಬಿಣ ತುಂಬಿದ್ದ ಟ್ರ್ಯಾಕ್ಟರ್ ಪಲ್ಟಿ:  ಹೊಟ್ಟೆ ಪಾಡಿಗೆಗೆ ಕೋಲ್ಕತ್ತಾದಿಂದ ಬಂದಿದ್ದ ಇಬ್ಬರು ದುರಂತ ಅಂತ್ಯ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Feb 16, 2024 | 7:27 PM

Share

ರಾಮನಗರ, (ಫೆಬ್ರವರಿ 16): ಕಬ್ಬಿಣ ತುಂಬಿದ್ದ ಟ್ರ್ಯಾಕ್ಟರ್ (tractor) ಪಲ್ಟಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ರಾಮನಗರ (Ramanagara) ಜಿಲ್ಲೆಯ ಕನಕಪುರ-ಸಾತನೂರು ರಸ್ತೆಯ ಜಕ್ಕೇಗೌಡನ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ಕೊಲ್ಕತ್ತಾ(kolkata ) ಮೂಲದ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಮತ್ತೊಬ್ಬ ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಬಿಡಬ್ಲ್ಯುಎಸ್‌ಎಸ್‌ಬಿ (BWSSB) ಕುಡಿಯುವ ನೀರಿನ ಪೈಪ್‌ಲೈನ್ ಕಾಮಗಾರಿಗೆ ಬಂದಿದ್ದ ಕಾರ್ಮಿಕರು, ಕನಕಪುರದಿಂದ ಜಕ್ಕೇಗೌಡನದೊಡ್ಡಿ ಕಡೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಟ್ರ್ಯಾಕ್ಟರ್ ಮೇಲೆ ಕುಳಿತಿದ್ದ ಇಬ್ಬರ ಮೇಲೆ ಕಬ್ಬಿಣದ ಕಂಬಿಗಳು ಬಿದ್ದಿದ್ದರಿಂದ ಅವರು ಮೃತಪಟ್ಟಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಸಾತನೂರು ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಸಾತನೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎರಡು ಟಾಟಾ ಏಸ್ ಡಿಕ್ಕಿ

ದೊಡ್ಡಬಳ್ಳಾಪುರ: ಎರಡು ಟಾಟಾ ಏಸ್ ವಾಹನಗಳ ನಡುವೆ ಡಿಕ್ಕಿಯಾಗಿ ಇಬ್ಬರು ಚಾಲಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದೊಡ್ಡಬಳ್ಳಾಪುರದ ಕಾಡನೂರು ಕೈಮರ ಬಳಿ ನಡೆದಿದೆ. ಗಾಯಾಳುಗಳನ್ನು ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೋಲೀಸರು ಸ್ಥಳಕ್ಕೆ ಗಾಯಾಳುಗಳ ಮಾಹಿತಿ ಕಲೆ‌ ಹಾಕುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ