Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramanagara News: ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇಯಲ್ಲಿ ಕೆಎಸ್​ಆರ್​ಟಿಸಿ ಬಸ್, ಗೂಡ್ಸ್ ವಾಹನ ಡಿಕ್ಕಿ; ಚಾಲಕ ಸಾವು

ಬಸ್ ಮೈಸೂರಿನಿಂದ ಬೆಂಗಳೂರಿಗೆ ‌ಬರುವ ವೇಳೆ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ರಾಮನಗರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ,‌ ಪರಿಶೀಲನೆ ನಡೆಸಿದ್ದಾರೆ.

Ramanagara News: ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇಯಲ್ಲಿ ಕೆಎಸ್​ಆರ್​ಟಿಸಿ ಬಸ್, ಗೂಡ್ಸ್ ವಾಹನ ಡಿಕ್ಕಿ; ಚಾಲಕ ಸಾವು
ಅಪಘಾತದ ತೀವ್ರತೆಗೆ ಬಸ್ ಡಿವೈಡರ್ ಹಾರಿ ಸರ್ವಿಸ್ ರಸ್ತೆಗೆ ತಲುಪಿದ್ದು, ಅಲ್ಲಿಂದಲೂ ಹೊರಕ್ಕೆ ಚಲಿಸಿದೆ.
Follow us
ಪ್ರಶಾಂತ್​ ಬಿ.
| Updated By: Ganapathi Sharma

Updated on: Jun 28, 2023 | 5:54 PM

ರಾಮನಗರ: ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇಯಲ್ಲಿ (Bengaluru Mysuru expressway) ಮತ್ತೊಂದು ಭೀಕರ ಅಪಘಾತ (Accident) ಸಂಭವಿಸಿದ್ದು, ಕೆಎಸ್​ಆರ್​ಸಿಟಿ ಬಸ್ ಚಾಲಕ ಮೃತಪಟ್ಟಿದ್ದಾರೆ. ರಾಮನಗರ ತಾಲೂಕಿನ ಜಯಪುರ ಗೇಟ್ ಬಳಿ ಬುಧವಾರ ಕೆಎಸ್​ಆರ್​ಸಿಟಿ ಬಸ್ ಹಾಗೂ ಗೂಡ್ಸ್ ವಾಹನದ ಮಧ್ಯೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬಸ್ ಡಿವೈಡರ್ ಹಾರಿ ಸರ್ವಿಸ್ ರಸ್ತೆಗೆ ತಲುಪಿದ್ದು, ಅಲ್ಲಿಂದಲೂ ಹೊರಕ್ಕೆ ಚಲಿಸಿದೆ. ಅದೃಷ್ಟವಶಾತ್, ಬಸ್​​​ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬಸ್ ಮೈಸೂರಿನಿಂದ ಬೆಂಗಳೂರಿಗೆ ‌ಬರುವ ವೇಳೆ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ರಾಮನಗರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ,‌ ಪರಿಶೀಲನೆ ನಡೆಸಿದ್ದಾರೆ.

ಮೈಸೂರು ಬೆಂಗಳೂರು ಎಕ್ಸ್​ಪ್ರೆಸ್​​​ ವೇಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಪರಿಶೀಲನೆ ನಡೆಸಿ ವರದಿ ಸಲ್ಲಿಸಲು ತಜ್ಞರ ಸಮಿತಿ ರಚಿಸುವುದಾಗಿ ರಾಜ್ಯ ಸರ್ಕಾರ ಎರಡು ದಿನಗಳ ಹಿಂದೆ ಹೇಳಿತ್ತು. ಎಕ್ಸ್​​ಪ್ರೆಸ್​​ ವೇ ಕಾಮಗಾರಿ ಅವೈಜ್ಞಾನಿಕವಾಗಿ ನಡೆದಿದೆ. ಇದನ್ನು ಪರಿಶೀಲಿಸಲು ತಂಡ ರಚನೆ ಮಾಡುತ್ತೇವೆ. ಅದು ನೀಡುವ ವರದಿಯ ಆಧಾರದಲ್ಲಿ ಸಮಸ್ಯೆಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಸೋಮವಾರ ಹೇಳಿದ್ದರು.

ಇದನ್ನೂ ಓದಿ: Bengaluru-Mysore Expressway: ಅಪಘಾತಕ್ಕೆ ಕಾರಣಗಳ ಕುರಿತು ಎನ್​​ಹೆಚ್​ಎಐಗೆ ವರದಿ ಸಲ್ಲಿಸಿದ 2 ಜಿಲ್ಲಾಡಳಿತ

ಕಳೆದ ಎರಡ್ಮೂರು ತಿಂಗಳಲ್ಲಿ ಈ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತಗಳಲ್ಲಿ ನೂರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ