AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RTO ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಎಸ್ಪಿ ಪ್ರಶ್ನೆಗಳಿಗೆ ಪ್ರಾದೇಶಿಕ ಸಾರಿಗೆ ಆಯುಕ್ತರೇ ತಬ್ಬಿಬ್ಬು!

ಬೆಂಗಳೂರು ದಕ್ಷಿಣ ಜಿಲ್ಲಾ ಆರ್‌ಟಿಒ (RTO) ಕಚೇರಿ ಮೇಲೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಳೆದ ಒಂದು ವರ್ಷದ ಅವಧಿಯಲ್ಲಿ 3ನೇ ಬಾರಿ ನಡೆದ ರೇಡ್​​ ಇದಾಗಿದೆ. ಕಚೇರಿಯಲ್ಲಿ ಗುತ್ತಿಗೆ ನೌಕರರ ದರ್ಬಾರ್ ನಡೆಯುತ್ತಿದ್ದು, ಎಸ್​​ಪಿ ಸ್ನೇಹಾ ಪ್ರಶ್ನೆಗಳಿಗೆ ಆರ್​​ಟಿಒ ಟಿ.ಎ.ಸತೀಶ್ ಬಾಬು ತಬ್ಬಿಬ್ಬಾಗಿದ್ದಾರೆ. ಅತ್ತ ಹಾವೇರಿಯಲ್ಲಿಯೂ ಅಕ್ರಮ ಮರಳು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

RTO ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಎಸ್ಪಿ ಪ್ರಶ್ನೆಗಳಿಗೆ ಪ್ರಾದೇಶಿಕ ಸಾರಿಗೆ ಆಯುಕ್ತರೇ ತಬ್ಬಿಬ್ಬು!
RTO ಕಚೇರಿ ಸಿಬ್ಬಂದಿಗೆ ಲೋಕಾಯುಕ್ತ ಶಾಕ್​​Image Credit source: Tv9 Kannada
ಪ್ರಶಾಂತ್​ ಬಿ.
| Edited By: |

Updated on:Jun 12, 2026 | 3:11 PM

Share

ರಾಮನಗರ, ಜೂನ್​​ 12: ಬೆಂಗಳೂರು ದಕ್ಷಿಣ ಜಿಲ್ಲಾ RTO ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿ ವಿರುದ್ಧ ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ರೇಡ್​​ ನಡೆದಿದೆ. ಲೋಕಾಯುಕ್ತ ಎಸ್ಪಿ ಪಿ.ವಿ.ಸ್ನೇಹಾ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, RTO ಕಚೇರಿಯಲ್ಲಿ ಅಧಿಕಾರಿಗಳು ಇಂಚಿಂಚೂ ಪರಿಶೀಲನೆ ನಡೆಸಿದ್ದಾರೆ. ಕಳೆದ ಒಂದು ವರ್ಷದ ಅವಧಿಯಲ್ಲಿ 3ನೇ ಬಾರಿ ನಡೆದ ಲೋಕಾಯುಕ್ತ ದಾಳಿ ಇದಾಗಿದೆ.

ಮುಖ್ಯಾಂಶಗಳು

  • ಬೆಂಗಳೂರು ದಕ್ಷಿಣ ಜಿಲ್ಲಾ RTO ಕಚೇರಿ ಸಿಬ್ಬಂದಿಗೆ ಲೋಕಾಯುಕ್ತ ಶಾಕ್​​
  • ಲೋಕಾಯುಕ್ತ ಎಸ್​ಪಿ ಪಿ.ವಿ.ಸ್ನೇಹಾ ನೇತೃತ್ವದಲ್ಲಿ ಕಚೇರಿ ಮೇಲೆ ದಾಳಿ
  • ಒಂದು ವರ್ಷದ ಅವಧಿಯಲ್ಲಿ 3ನೇ ಬಾರಿ ನಡೆದ ಲೋಕಾಯುಕ್ತ ದಾಳಿ

ತಾಯಿಯ ಬದಲು ಮಗಳು ಕೆಲಸ!

ಇನ್ನು ಲೋಕಾಯುಕ್ತ ಅಧಿಕಾರಿಗಳ ದಾಳಿ ವೇಳೆ ಆರ್​​ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳು ಕೆಲಸ ಮಾಡುತ್ತಿರುವುದು ಬೆಳಕಿಗೆ ಬಂದಿದೆ. 3 ತಿಂಗಳು ಕಳೆದರೂ ಸ್ಮಾರ್ಟ್ ಕಾರ್ಡ್​​ ವಿತರಿಸದೇ ಕಚೇರಿಯಲ್ಲೇ ಶೇಖರಣೆ ಮಾಡಿರುವುದು ಗೊತ್ತಾಗಿದೆ. ಏಜೆಂಟ್​ಗಳ ಮೂಲಕ ಬಂದರೇ ಮಾತ್ರ RTO ಕಚೇರಿಯಲ್ಲಿ ಕೆಲಸ ನಡೆಯುತ್ತೆ ಎಂಬ ಆರೋಪವೂ ಇದ್ದು, ಏಜೆಂಟ್​ಗಳ ನಡುಗೆ ಹೊಡೆದಾಟ ನಡೆದರೂ ಪ್ರಾದೇಶಿಕ ಸಾರಿಗೆ ಆಯುಕ್ತರು ದೂರು ನೀಡಿಲ್ಲ. ಕಚೇರಿಯಲ್ಲಿ ಗುತ್ತಿಗೆ ನೌಕರರ ದರ್ಬಾರ್ ನಡೆಯುತ್ತಿದ್ದು, ಎಸ್​​ಪಿ ಸ್ನೇಹಾ ಪ್ರಶ್ನೆಗಳಿಗೆ ಆರ್​​ಟಿಒ ಟಿ.ಎ.ಸತೀಶ್ ಬಾಬು ತಬ್ಬಿಬ್ಬಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಬೆಂಗಳೂರು-ಚನ್ನಪಟ್ಟಣ ನಡುವೆ BMTC ಎಸಿ ಬಸ್; ಎಲ್ಲೆಲ್ಲಿ ಸ್ಟಾಪ್? ಟಿಕೆಟ್ ದರ ಎಷ್ಟು ಗೊತ್ತಾ?

ಹಾವೇರಿಯಲ್ಲೂ ಲೋಕಾಯುಕ್ತ ರೇಡ್​​

ಅಕ್ರಮ ಮರಳು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಗಳ ಮೇಲೆ ಹಾವೇರಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ರಾಣೇಬೆನ್ನೂರು ತಾಲ್ಲೂಕಿನ ನಿಟಪಳ್ಳಿ, ಚಂದಾಪುರ, ಬೆಲೂರು , ಐರಣಿ ಹರನಗಿರಿ, ಕೋಟಿಹಾಳ ಮತ್ತು ಚಿಕ್ಕಕುರವತ್ತಿ ಗ್ರಾಮದ ಬಳಿ ಸೇರಿ ಒಟ್ಟು 8 ಸ್ಥಳಗಳಲ್ಲಿ ಏಕಕಾಲಕ್ಕೆ ರೇಡ್​​ ನಡೆದಿದೆ. ಲೋಕಾಯುಕ್ತ ಪೊಲೀಸ್ ಡಿವೈಎಸ್ಪಿ ಮಧುಸೂದನ್ ನೇತ್ರತ್ವದಲ್ಲಿ ದಾಳಿ ನಡೆದಿದ್ದು, ಸುಮಾರು 12,779 ಮೆಟ್ರಿಕ್ ಟನ್ ಮರಳು, 2 ಜೆಸಿಬಿ ಹಾಗೂ 4 ತೆಪ್ಪಗಳನ್ನ ವಶಕ್ಕೆ ಪಡೆಯಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 3:08 pm, Fri, 12 June 26

Follow Us
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ