AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂರೈಕೆ ವ್ಯತ್ಯಯದ ನಡುವೆ LPG ಸಿಲಿಂಡರ್​​ಗೆ ಕಳ್ಳರ ಕಾಟ: ಮನೆಯ ಕಾಂಪೌಂಡ್​​ಗೆ ನುಗ್ಗಿ ಕದ್ದು ಎಸ್ಕೇಪ್​​!

ಮಧ್ಯಪ್ರಾಚ್ಯದ ಯುದ್ಧದಿಂದ ಕರ್ನಾಟಕದಲ್ಲಿ ಎಲ್ಪಿಜಿ ಸಿಲಿಂಡರ್ ಅಭಾವ ತೀವ್ರಗೊಂಡಿದೆ. ಹೋಟೆಲ್, ಪಿಜಿ, ಶಾಲೆಗಳು ಸಂಕಷ್ಟದಲ್ಲಿವೆ. ಈ ಪರಿಸ್ಥಿತಿಯನ್ನು ಬಂಡವಾಳ ಮಾಡಿಕೊಂಡ ಕೆಲವರು ಸಿಲಿಂಡರ್ಗಳನ್ನು ಬ್ಲ್ಯಾಕ್ ಮಾರ್ಕೆಟ್ನಲ್ಲಿ ಮಾರಾಟ ಮಾಡುತ್ತಿದ್ದರೆ, ಇನ್ನೂ ಕೆಲವರು ಮನೆಗಳಿಂದ ಸಿಲಿಂಡರ್ ಕದಿಯಲು ಮುಂದಾಗಿದ್ದಾರೆ. ಚನ್ನಪಟ್ಟಣದಲ್ಲಿ ಮನೆಯ ಕಾಂಪೌಂಡ್‌ನಿಂದ ಗೃಹಬಳಕೆಯ ಸಿಲಿಂಡರ್ ಕದ್ದ ಘಟನೆ ವರದಿಯಾಗಿದೆ. ಪೂರೈಕೆ ವ್ಯತ್ಯಯದ ಜೊತೆ ಕಳ್ಳರ ಕಾಟವೂ ಹೆಚ್ಚಾಗಿ ನಿವಾಸಿಗಳಿಗೆ ಹೊಸ ತಲೆನೋವಾಗಿದೆ.

ಪೂರೈಕೆ ವ್ಯತ್ಯಯದ ನಡುವೆ LPG ಸಿಲಿಂಡರ್​​ಗೆ ಕಳ್ಳರ ಕಾಟ: ಮನೆಯ ಕಾಂಪೌಂಡ್​​ಗೆ ನುಗ್ಗಿ ಕದ್ದು ಎಸ್ಕೇಪ್​​!
ಸಾಂದರ್ಭಿಕ ಚಿತ್ರImage Credit source: AI-generated photo
ಪ್ರಸನ್ನ ಹೆಗಡೆ
|

Updated on: Mar 13, 2026 | 3:30 PM

Share

ರಾಮನಗರ, ಮಾರ್ಚ್​ 13: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಪರಿಣಾಮವಾಗಿ ಹಡಗುಗಳು ಬಾರದೆ ದೇಶದ ಬಹುತೇಕ ರಾಜ್ಯಗಳಲ್ಲಿ ಎಲ್​​ಪಿಜಿ ವಾಣಿಜ್ಯ ಸಿಲಿಂಡರ್​​ಗಳ ಅಭಾವ ತಲೆದೋರಿದೆ. ಅದರಲ್ಲಿಯೂ ಕರ್ನಾಟಕದಲ್ಲಿ ಸಮಸ್ಯೆ ತೀರಾ ಹದಗೆಟ್ಟಿದ್ದು, ಸಿಲಿಂಡರ್​​ಗಳ ಅಲಭ್ಯತೆಯ ಹಿನ್ನೆಲೆ ಬಹುತೇಕ ಹೋಟೆಲ್​​ಗಳು ಭಾಗಶಃ ಬಂದ್​ ಆಗಿವೆ. ಇಲ್ಲವೇ ಗಣನೀಯವಾಗಿ ಮೆನು ಕಡಿತಗೊಳಿಸಿ ಗ್ರಾಹಕರಿಗೆ ಸೇವೆ ನೀಡುತ್ತಿವೆ. ಪಿಜಿಗಳು ಮತ್ತು ಸರಕಾರಿ ಶಾಲೆಗಳಲ್ಲಿ ಊಟ ತಯಾರಿಕೆಗೂ ಸಂಕಷ್ಟ ಬಂದೊದಗಿದ್ದು, ಹೆಚ್ಚಿನ ಹಣ ಕೊಡುತ್ತೇವೆ ಎಂದರೂ ಸಿಲಿಂಡರ್​​ಗಳು ಸಿಗುತ್ತಿಲ್ಲ ಎಂದು ಆಹಾರೋದ್ಯಮಿಗಳು ಅಲವತ್ತುಕೊಳ್ಳುತ್ತಿದ್ದಾರೆ. ಇದೇ ಸ್ಥಿತಿಯನ್ನು ಬಂಡವಾಳ ಮಾಡಿಕೊಂಡ ಕೆಲವರು ಬ್ಲ್ಯಾಕ್​​ ಮಾರ್ಕೆಟ್​​ನಲ್ಲಿ ಸಿಲಿಂಡರ್​​ ಮಾರುತ್ತಿದ್ದರೆ, ಇನ್ನು ಕೆಲವರು ಮನೆಗಳಿಗೆ ನುಗ್ಗಿ ಕದಿಯುವ ಕೆಲಸಕ್ಕೆ ಕೈಹಾಕಿದ್ದಾರೆ.

ಸ್ಕೂಟರ್​​ನಲ್ಲಿ ಬಂದ ಆರೋಪಿಗಳು ಮನೆಯ ಕಾಂಪೌಂಡ್​​ ಪ್ರವೇಶಿಸಿ ಗೃಹೋಪಯೋಗಿ ಎಲ್​​ಪಿಜಿ ಸಿಲಿಂಡರ್​​ ಕದ್ದಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದಿದೆ. ಮಾರ್ಚ್​​ 7ರಂದೇ ಈ ಘಟನೆ ನಡೆದಿದ್ದು, ವಿಷಯ ತಡವಾಗಿ ಬೆಳಕಿಗೆ ಬಂದಿದೆ. ಕೃಷ್ಣಪ್ಪ ಎಂಬವರ ಮನೆಯಲ್ಲಿ ಈ ಕಳ್ಳತನ ನಡೆದಿದ್ದು, ಘಟನೆ ವೇಳೆ ಕುಟುಂಬದವರು ಮನೆಯಲ್ಲಿ ಇರಲಿಲ್ಲ. ಬಳಿಕ ಅಡುಗೆ ಮನೆಯ ಸಿಲಿಂಡರ್​​ ಬದಲಾಯಿಸಲು ಹೋದ ವೇಳೆ ಮನೆಯ ಆವರಣದಲ್ಲಿ ಇಟ್ಟುಕೊಂಡಿದ್ದ ಹೆಚ್ಚುವರಿ ಸಿಲಿಂಡರ್ ಕಾಣೆಯಾಗಿರುವುದು ಗಮನಕ್ಕೆ ಬಂದಿದೆ ಎನ್ನಲಾಗಿದೆ. ಹೀಗಾಗಿ ಸಿಲಿಂಡರ್​​ ಏನಾಯಿತು ಎಂಬ ಬಗ್ಗೆ ಮನೆಯವರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಕಳವು ನಡೆದಿರುವುದು ಗೊತ್ತಾಗಿದೆ.

ಇದನ್ನೂ ಓದಿ: ಎಲ್​ಪಿಜಿ ಸಿಲಿಂಡರ್ ಕೊರತೆ ಬೆನ್ನಲ್ಲೇ ಅರಣ್ಯ ಇಲಾಖೆ ಹೈ ಅಲರ್ಟ್​ ಆಗಿದ್ಯಾಕೆ ಗೊತ್ತಾ?

ಸಿಸಿಟಿವಿ ಕ್ಯಾಮರಾದಲ್ಲಿ ಕಳ್ಳತನದ ದೃಶ್ಯ ಸೆರೆ

ಸ್ಕೂಟರ್​​ನಲ್ಲಿ ಬಂದ ಆರೋಪಿಗಳ ಪೈಕಿ ಓರ್ವ ಮನೆಯ ಗೇಟ್​​ ತೆರೆದು ಕಾಂಪೌಂಡ್​​ ಒಳಗೆ ಪ್ರವೇಶಿಸಿದ್ದು, ಆಕಡೆ ಈಕಡೆ ನೋಡಿ ಸೀದಾ ಸಿಲಿಂಡರ್​​ ಇಟ್ಟ ಸ್ಥಳಕ್ಕೆ ತೆರಳಿದ್ದಾನೆ. ಕೂಡಲೇ ಅದನ್ನು ಎತ್ತಿಕೊಂಡು ಆತ ಕಾಂಪೌಂಡ್​​ನಿಂದ ಹೊರ ಹೋಗುತ್ತಿರುವ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕೃತ್ಯವನ್ನು ಗಮನಿಸಿದಾಗ ಮನೆಯವರು ಹೆಚ್ಚುವರಿ ಸಿಲಿಂಡರ್​​ ಇಡುತ್ತಿದ್ದ ಸ್ಥಳ ಆರೋಪಿಗಳಿಗೆ ಮೊದಲೇ ಗೊತ್ತಿತ್ತಾ ಎನ್ನುವ ಅನುಮಾನವೂ ಇದ್ದು, ಸಿಲಿಂಡರ್ ಪೂರೈಕೆ ವ್ಯತ್ಯಯದಿಂದ ಮೊದಲೇ ಆತಂಕಗೊಂಡಿದ್ದ ನಿವಾಸಿಗಳಿಗೆ ಇದೀಗ ಸಿಲಿಂಡರ್ ಕಳ್ಳರ ಹಾವಳಿ ಹೊಸ ತಲೆನೋವಾಗಿ ಮಾರ್ಪಟ್ಟಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಮೈಸೂರು ದಸರಾ 2026: ಅರಮನೆಗೆ ಬಂದ ಗಜಪಡೆಗೆ ಭವ್ಯ ಸ್ವಾಗತ
ಮೈಸೂರು ದಸರಾ 2026: ಅರಮನೆಗೆ ಬಂದ ಗಜಪಡೆಗೆ ಭವ್ಯ ಸ್ವಾಗತ
ಸೂರತ್‌ನಲ್ಲಿ ಗೋಮಯ ರಾಖಿಗಳ ಮೂಲಕ ಪರಿಸರ ಸ್ನೇಹಿ ರಕ್ಷಾಬಂಧನ ಆಚರಣೆ
ಸೂರತ್‌ನಲ್ಲಿ ಗೋಮಯ ರಾಖಿಗಳ ಮೂಲಕ ಪರಿಸರ ಸ್ನೇಹಿ ರಕ್ಷಾಬಂಧನ ಆಚರಣೆ
ಲೋಕಾ ದಾಳಿಗೆ ಹೆದರಿ ರಾಜೀನಾಮೆ ಕೊಟ್ಟಿದ್ದ ವಿಶೇಷ ಭೂ ಸ್ವಾಧೀನ ಅಧಿಕಾರಿ!
ಲೋಕಾ ದಾಳಿಗೆ ಹೆದರಿ ರಾಜೀನಾಮೆ ಕೊಟ್ಟಿದ್ದ ವಿಶೇಷ ಭೂ ಸ್ವಾಧೀನ ಅಧಿಕಾರಿ!
NEET-PG Exam: ನೀಟ್-ಪಿಜಿ 2026 ಪರೀಕ್ಷೆಗೆ ಸಂಪೂರ್ಣ ಸಿದ್ಧತೆ
NEET-PG Exam: ನೀಟ್-ಪಿಜಿ 2026 ಪರೀಕ್ಷೆಗೆ ಸಂಪೂರ್ಣ ಸಿದ್ಧತೆ
ಇಂದು ಅರಮನೆ ಪ್ರವೇಶಿಸಲಿರುವ ಗಜಪಡೆ, ಅರಣ್ಯ ಭವನದಲ್ಲಿ ವಿಶೇಷ ಪೂಜೆ
ಇಂದು ಅರಮನೆ ಪ್ರವೇಶಿಸಲಿರುವ ಗಜಪಡೆ, ಅರಣ್ಯ ಭವನದಲ್ಲಿ ವಿಶೇಷ ಪೂಜೆ
ಜಾತ್ರೆ ಸಮಯದಲ್ಲಿ ಮನೆಯಲ್ಲಿ ಒಲೆ ಹಚ್ಚುವಂತಿಲ್ಲ!
ಜಾತ್ರೆ ಸಮಯದಲ್ಲಿ ಮನೆಯಲ್ಲಿ ಒಲೆ ಹಚ್ಚುವಂತಿಲ್ಲ!
ಬೆಂಗಳೂರಿನಲ್ಲಿ ದಕ್ಷಿಣ ಕೊರಿಯಾ ಕಂಪನಿ ಕಾರ್ಯಾರಂಭ: 350 ಜನರಿಗೆ ಉದ್ಯೋಗ
ಬೆಂಗಳೂರಿನಲ್ಲಿ ದಕ್ಷಿಣ ಕೊರಿಯಾ ಕಂಪನಿ ಕಾರ್ಯಾರಂಭ: 350 ಜನರಿಗೆ ಉದ್ಯೋಗ
ಇಂದು ಯಜುರುಪಾಕರ್ಮ, ರಕ್ಷಾ ಬಂಧನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯಜುರುಪಾಕರ್ಮ, ರಕ್ಷಾ ಬಂಧನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ನೀರಿನಲ್ಲಿ ಕೊಚ್ಚಿಬಂದ ಸಿಲಿಂಡರ್​​ಗಾಗಿ ಪ್ರವಾಹದ ನೀರಿಗೆ ಹಾರಿದ ನೇಪಾಳದ ಜನ
ನೀರಿನಲ್ಲಿ ಕೊಚ್ಚಿಬಂದ ಸಿಲಿಂಡರ್​​ಗಾಗಿ ಪ್ರವಾಹದ ನೀರಿಗೆ ಹಾರಿದ ನೇಪಾಳದ ಜನ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ