AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀ ಕುಡಿಸಲು ಎಂದು ಕರೆದೊಯ್ದು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ಅರೆಸ್ಟ್

ಟೀ ಕುಡಿಸಿಕೊಂಡು ಬರ್ತೇನೆ ಅಂತ ಅಪ್ರಾಪ್ತೆಯನ್ನು ಹಾಸ್ಟೆಲ್​ನಿಂದ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಘಟನೆ ಸಂಬಂಧ ರಾಮನಗರ ಮಹಿಳಾ‌ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ‌ ಪ್ರಕರಣ ದಾಖಲಿಸಲಾಗಿದ್ದು 36 ವರ್ಷದ ಆರೋಪಿಯನ್ನು ಬಂಧಿಸಲಾಗಿದೆ.

ಟೀ ಕುಡಿಸಲು ಎಂದು ಕರೆದೊಯ್ದು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ಅರೆಸ್ಟ್
ರಾಮನಗರ ಮಹಿಳಾ‌ ಪೊಲೀಸ್ ಠಾಣೆ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on: Mar 18, 2024 | 1:45 PM

Share

ರಾಮನಗರ, ಮಾರ್ಚ್​.18: ಹಾಸ್ಟಲ್‌ನಿಂದ ಕರೆದೊಯ್ದು 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ 36 ವರ್ಷದ ವ್ಯಕ್ತಿ ಲೈಂಗಿಕ ಕಿರುಕುಳ ನೀಡಲಾಗಿರುವ ಘಟನೆ ನಡೆದಿದೆ. ಅಣ್ಣ ಎಂದು ಪರಿಚಯಿಸಿಕೊಂಡು ಟೀ ಕುಡಿಸಿಕೊಂಡು ಬರ್ತೇನೆ ಅಂತ ಅಪ್ರಾಪ್ತೆಯನ್ನು ಹಾಸ್ಟೆಲ್​ನಿಂದ ಕರೆದುಕೊಂಡು ಹೋಗಿ ಆರೋಪಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗುತ್ತಿದೆ. ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಆರೋಪಿಯನ್ನು ಬಂಧಿಸಲಾಗಿದೆ.

ಇನ್ನು ಅಪರಿಚಿತ ವ್ಯಕ್ತಿ ಬಾಲಕಿಯನ್ನು ಕರೆದುಕೊಂಡು ಹೋಗಿ ಎರಡು ತಾಸು ಕಳೆದರೂ ಬಾರದ ಹಿನ್ನೆಲೆ‌ ಹಾಸ್ಟಲ್ ಸಿಬ್ಬಂದಿ ಕುಟುಂಬಸ್ಥರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಅಲ್ಲದೆ ವ್ಯಕ್ತಿಯ ಹಾವಾಭಾವ ಕಂಡು ಸಿಬ್ಬಂದಿಗೆ ಅನುಮಾನ ಬಂದಿತ್ತು. ಸದ್ಯ ವಿಷಯ ತಿಳಿಯುತ್ತಿದ್ದಂತೆ ಕೂಡಲೇ ರಾಮನಗರ ಮಹಿಳಾ ಪೊಲೀಸ್ ಠಾಣೆಗೆ ಪೋಷಕರು ದೂರು ಸಲ್ಲಿಸಿದ್ದಾರೆ. ಆರೋಪಿ ಅಪ್ರಾಪ್ತಳನ್ನು ಮಾವಿನ‌ ತೋಪಿಗೆ ಕರೆದೊಯ್ದಿದ್ದ. ಕೃತ್ಯ ಸ್ಥಳಕ್ಕೆ ತೆರಳಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಬಾಲಕಿಯನ್ನು ಒಂದು ವರ್ಷದಿಂದ ಲೈಂಗಿಕ‌ವಾಗಿ ಬಳಕೆ ಮಾಡಿಕೊಂಡಿರುವ ಆರೋಪ ಕೇಳಿ ಬಂದಿದೆ. ರಾಮನಗರ ಪೊಲೀಸರು ವ್ಯಕ್ತಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ರಾಮನಗರ ಮಹಿಳಾ‌ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ‌ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: Doctors Negligence: ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ, ಮಗು ಸಾವು, ಕುಟುಂಬಸ್ಥರ ಆಕ್ರೋಶ

ಆ್ಯಪ್ ಆಧಾರಿತ ಬೈಕ್ ಚಾಲಕರನ್ನ ತಡೆದು ಕಿರುಕುಳ ಆರೋಪ

ಆ್ಯಪ್ ಆಧಾರಿತ ಬೈಕ್ ಚಾಲಕರನ್ನ ತಡೆದು ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಆಟೋ ಚಾಲಕನ ವಿರುದ್ಧ ಆ್ಯಪ್ ಆಧಾರಿತ ಬೈಕ್ ಚಾಲಕರು ಆರೋಪ ಮಾಡಿದ್ದಾರೆ. ಆ್ಯಪ್​​ ಆಧಾರಿತ ಬೈಕ್, ಆಟೋ ಚಾಲಕನ ನಡುವೆ ಗಲಾಟೆ ನಡೆದಿದ್ದು ಬಟ್ಟೆ ಬಿಚ್ಚಿಸಿ ಹಲ್ಲೆ ನಡೆಸಿದ್ದಾರೆಂದು ಬೈಕ್ ಸವಾರ ಆರೋಪ ಮಾಡಿದ್ದಾನೆ. ಈ ವೇಳೆ ಸ್ಥಳಕ್ಕೆ ಆಗಮಿಸಿದ ಆ್ಯಪ್ ಆಧಾರಿತ ಬೈಕ್ ಚಾಲಕರು, ಆಟೋ ಚಾಲಕನನ್ನ ಪ್ರಶ್ನಿಸುತ್ತಿದ್ದಾಗ ಪ್ಯಾಂಟ್ ಬಿಚ್ಚಿಸಿ ಹೈಡ್ರಾಮಾ ಮಾಡಿದ್ದಾರೆ ಎನ್ನಲಾಗುತ್ತಿದೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿ ಬೈಕ್ ಚಾಲಕರು ದೂರು ನೀಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್