ರಾಮನಗರ: ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ, ತಪ್ಪಿಸಿಕೊಳ್ಳುವ ಭರದಲ್ಲಿ ಕೆರೆಗೆ ಬಿದ್ದು ವ್ಯಕ್ತಿ ಸಾವು

| Updated By: Rakesh Nayak Manchi

Updated on: Oct 12, 2023 | 2:20 PM

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ತೇರಿದೊಡ್ಡಿಯಲ್ಲಿನ ಇಸ್ಪೀಟ್ ಅಡ್ಡೆ ಮೇಲೆ ಮಂಗಳವಾರದಂದು ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿತ್ತು. ಆದರೆ, ಇಂದು ಬೆಳಗ್ಗೆ ವ್ಯಕ್ತಿಯೊಬ್ಬರ ಶವ ಕೆರೆಯಲ್ಲಿ ಪತ್ತೆಯಾಗಿದ್ದು, ದಾಳಿ ವೇಳೆ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಕೆರೆಗೆ ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ರಾಮನಗರ: ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ, ತಪ್ಪಿಸಿಕೊಳ್ಳುವ ಭರದಲ್ಲಿ ಕೆರೆಗೆ ಬಿದ್ದು ವ್ಯಕ್ತಿ ಸಾವು
ಇಸ್ಪೀಟ್ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಕೆರೆಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಶಂಕೆ ವ್ಯಕ್ತವಾಗಿದೆ
Follow us on

ರಾಮನಗರ, ಅ.12: ಜಿಲ್ಲೆಯ (Ramanagara) ಕನಕಪುರ ತಾಲೂಕಿನ ತೇರಿದೊಡ್ಡಿಯಲ್ಲಿನ ಇಸ್ಪೀಟ್ ಅಡ್ಡೆ ಮೇಲೆ ಮಂಗಳವಾರದಂದು ಪೊಲೀಸರು ದಾಳಿ (Police Raid) ನಡೆಸಿದ ಘಟನೆ ನಡೆದಿತ್ತು. ಆದರೆ, ಇಂದು ಬೆಳಗ್ಗೆ ವ್ಯಕ್ತಿಯೊಬ್ಬರ ಶವ ಕೆರೆಯಲ್ಲಿ ಪತ್ತೆಯಾಗಿದ್ದು, ದಾಳಿ ವೇಳೆ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಕೆರೆಗೆ ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಮರಿಸ್ವಾಮಿ (31) ಮೃತಪಟ್ಟ ವ್ಯಕ್ತಿ. ಮಂಗಳವಾರದಂದು ಜೂಜು ಆಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಅಡ್ಡೆಯಲ್ಲಿದ್ದ ಮರಿಸ್ವಾಮಿ ತಪ್ಪಿಸಿಕೊಂಡು ಓಡಿದ್ದರು. ಆದರೆ ಇಂದು ಬೆಳಗ್ಗೆ ಕೆರೆಯಲ್ಲಿ ಮರಿಸ್ವಾಮಿ ಶವ ಪತ್ತೆಯಾಗಿದ್ದು, ಪೊಲೀಸರ ಭಯದಿಂದ ಬಚಾವ್ ಆಗಲು ಹೋಗಿ ಕೆರೆಯಲ್ಲಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ರಾಮನಗರ: ದೇವಸ್ಥಾನ ಬಳಿಯ ನಲ್ಲಿ ನೀರು ತರಲು ಹೋದ ದಲಿತ ಬಾಲಕಿಗೆ ನಿಂದಿಸಿದ ಪೂಜಾರಿ: ಕೇಸ್​ ಬುಕ್

ಸಮುದ್ರದ ಅಲೆಗೆ ಸಿಲುಕಿದ್ದ ಬಾಲಕನ ರಕ್ಷಣೆ

ಸಮುದ್ರದ ಅಲೆಗೆ ಸಿಲುಕಿದ್ದ ಬಳ್ಳಾರಿ ಮೂಲದ ಅಂಜನಪ್ಪನಗರದ ಸಮೀರ್ (11) ಎಂಬ ಬಾಲಕನನ್ನು ರಕ್ಷಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಮುಖ್ಯ ಕಡಲತೀರದಲ್ಲಿ ನಡೆದಿದೆ. ಕುಟುಂಬದೊಂದಿಗೆ ಗೋಕರ್ಣಕ್ಕೆ ಬಂದಿದ್ದ ಬಾಲಕ ಸಮೀರ್, ದೇವರ ದರ್ಶನಕ್ಕೂ ಮುನ್ನ ಸಮುದ್ರ ಸ್ನಾನ ಮಾಡುವಾಗ ಅಲೆಗೆ ಸಿಲುಕಿದ್ದ. ಕೂಡಲೇ ಎಚ್ಚೆತ್ತ ಜೀವ ರಕ್ಷಕ ಸಿಬ್ಬಂದಿ ಶಿವಪ್ರಸಾದ್ ಅಂಬಿಗ ಅವರು ಬಾಲಕನನ್ನು ರಕ್ಷಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ