ಮನೆ ಮುಂದೆ ಕೆಮ್ಮಿದ್ದಕ್ಕೆ ಮಾರಣಾಂತಿಕ ಹಲ್ಲೆ! ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ರಾಮನಗರ ತಾಲೂಕಿನ ಬಿಡದಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಮಾರಣಾಂತಿಕ ಹಲ್ಲೆಯಲ್ಲಿ ರಾಜಸ್ಥಾನ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮನೆ ಮುಂದೆ ಕೆಮ್ಮಿದ ವಿಚಾರಕ್ಕೆ ಪಕ್ಕದ ಮನೆಯವರು ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದರು. ಗಾಯಗೊಂಡ ವ್ಯಕ್ತಿ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಮನೆ ಮುಂದೆ ಕೆಮ್ಮಿದ್ದಕ್ಕೆ ಮಾರಣಾಂತಿಕ ಹಲ್ಲೆ! ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
ಮನೆ ಮುಂದೆ ಕೆಮ್ಮಿದ್ದಕ್ಕೆ ಮಾರಣಾಂತಿಕ ಹಲ್ಲೆ! ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Edited By:

Updated on: Feb 11, 2026 | 12:47 PM

ರಾಮನಗರ, ಫೆಬ್ರವರಿ 11: ಸಮಾಜದಲ್ಲಿ ಯಾವ್ಯಾವುದೋ ವಿಚಾರಕ್ಕೆ ಗಲಾಟೆ, ಹಲ್ಲಗಳು ನಡೆಯುತ್ತವೆ. ಆದರೆ ವ್ಯಕ್ತಿಯೊಬ್ಬ ಮನೆ ಮುಂದೆ ಬಂದು ಕೆಮ್ಮಿದ ಎನ್ನವ ಕ್ಷುಲ್ಲಕ ಕಾರಣಕ್ಕೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ರಾಮನಗರ (Ramnagar) ತಾಲೂಕಿನ ಬಿಡದಿಯಲ್ಲಿ ನಡೆದಿದೆ. ರಾಜಸ್ಥಾನ ಮೂಲದ ವ್ಯಕ್ತಿಯೊಬ್ಬ ಕೆಮ್ಮಿದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ತಿರುಗಿದೆ.

ಸಣ್ಣದಾಗಿ ಶುರುವಾದ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿತು

ರಾಜಸ್ಥಾನ ಮೂಲದ ವಿನೋದ್ ಕುಮಾರ್ ಶೈನಿ (34) ಕಳೆದ 11 ವರ್ಷಗಳಿಂದ ಬಿಡದಿಯ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಅಲ್ಲಿಯೇ ವಾಸವಾಗಿದ್ದರು. ಮೂರು ದಿನಗಳ ಹಿಂದೆ ಮನೆ ಪಕ್ಕದಲ್ಲಿದ್ದ ಸಂಜಯ್ ಅವರೊಂದಿಗೆ ಮಾತಿನ ಚಕಮಕಿ ಉಂಟಾಗಿದ್ದು, ಕೆಮ್ಮಿದ ವಿಚಾರಕ್ಕೆ ಜಗಳ ತೀವ್ರಗೊಂಡಿದೆ ಎನ್ನಲಾಗಿದೆ. ಈ ವೇಳೆ ಸಂಜಯ್, ಹೊಂಬಯ್ಯ (ಹೊಂಬೆಗೌಡ), ವಿಜಯ್ ಸೇರಿದಂತೆ ಇತರರು ಸೇರಿ ವಿನೋದ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ Bengaluru: ಸೊಸೆ ಮೇಲೆ ಮಾವನಿಂದಲೇ ಲೈಂಗಿಕ ದೌರ್ಜನ್ಯ; ಆಸೆ ಈಡೇರಿಸು ಎಂದು ಪೀಡನೆ

ಗಂಭೀರವಾಗಿ ಗಾಯಗೊಂಡ ವಿನೋದ್ ಅವರನ್ನು ತಕ್ಷಣ ಬಿಡದಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಲ್ಲೆ ನಡೆಸಿದ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಪರಾರಿಯಾಗಿರುವ ಆರೋಪಿಗಳ ಬಂಧನಕ್ಕಾಗಿ ಪೊಲೀಸರು ವ್ಯಾಪಕ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:21 pm, Wed, 11 February 26

Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
Follow Us