ಕಾಡಾನೆ ದಾಳಿ; ಮೃತನ ಕುಟುಂಬಕ್ಕೆ ಸಾಂತ್ವನ ಹೇಳಿ, ಪರಿಹಾರ ಚೆಕ್ ವಿತರಿಸಿದ ಸಚಿವ ಈಶ್ವರ್ ಖಂಡ್ರೆ

Ramanagara Elephant Attack: ಕಾಡಾನೆ ದಾಳಿಯಿಂದ ಮೃತಪಟ್ಟ ವೀರಭದ್ರಯ್ಯ ಮನೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ(Eshwar Khandre) ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಕಾಡಾನೆ ದಾಳಿ; ಮೃತನ ಕುಟುಂಬಕ್ಕೆ ಸಾಂತ್ವನ ಹೇಳಿ, ಪರಿಹಾರ ಚೆಕ್ ವಿತರಿಸಿದ ಸಚಿವ ಈಶ್ವರ್ ಖಂಡ್ರೆ
ಮೃತನ ಕುಟುಂಬಕ್ಕೆ ಸಾಂತ್ವನ ಹೇಳಿದ ಈಶ್ವರ್ ಖಂಡ್ರೆ
Follow us
TV9 Web
| Updated By: ವಿವೇಕ ಬಿರಾದಾರ

Updated on:Jun 04, 2023 | 4:48 PM

ರಾಮನಗರ: ಕಾಡಾನೆ ದಾಳಿಯಿಂದ ಮೃತಪಟ್ಟ ವೀರಭದ್ರಯ್ಯ ಮನೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ(Eshwar Khandre) ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಹಾಗೂ 15 ಲಕ್ಷ ಪರಿಹಾರ ಚೆಕ್ ವಿತರಿಸಿದ್ದಾರೆ. ಕನಕಪುರ ತಾಲೂಕಿನ ಮುತ್ತುರಾಯನಪುರಕ್ಕೆ ಭೇಟಿ ನೀಡಿದ ಈಶ್ವರ್ ಖಂಡ್ರೆ ಕುಟುಂಬಸ್ಥರಿಂದ ದಾಖಲೆಗಳನ್ನು ಪಡೆದ್ರು. ಸಚಿವ ಈಶ್ವರ ಖಂಡ್ರೆಗೆ ಸಂಸದ ಡಿಕೆ ಸುರೇಶ್ ಸಾಥ್ ನೀಡಿದರು.ಬಳಿಕ ರಾಮನಗರ ಅರಣ್ಯ ಭವನದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸಾಮಾನ್ಯವಾಗಿ ಆನೆಗಳು ಹಲಸಿನ ಹಣ್ಣು, ಕಬ್ಬು, ಕಾಫಿ ಬೀಜ ತಿನ್ನುವ ಸಲುವಾಗಿ ನಾಡಿಗೆ ಬರುತ್ತವೆ ಇದನ್ನು ತಡೆಯಲು ಸೌರ ತಂತಿ ಬೇಲಿ ಮತ್ತು ಹ್ಯಾಂಗಿಂಗ್ ಸೌರಬೇಲಿ ಸದ್ಯದ ಪರಿಹಾರವಾಗಿದ್ದು ಇದನ್ನು ಆನೆಗಳ ಹಾವಳಿ ಇರುವ ಪ್ರದೇಶದಲ್ಲಿ ಅಳವಡಿಸಲಾಗುವುದು ಎಂದರು.

ಕಾವೇರಿ ವನ್ಯಜೀವಿ ತಾಣದ ಬಳಿ 132 ಕಿಲೋಮೀಟರ್ ಬ್ಯಾರಿಕೇಡ್ ಹಾಕುವ ಕಾರ್ಯ ನಡೆಯುತ್ತಿದ್ದು, ಈ ಪೈಕಿ 89 ಕಿಲೋಮೀಟರ್ ಕಾಮಗಾರಿ ಪೂರ್ಣಗೊಂಡಿದೆ. ಉಳಿದ ಕಾಮಗಾರಿಯನ್ನು ಶೀಘ್ರವೇ ಮುಗಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಹಾಸನ ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಬನ್ನೇರುಘಟ್ಟ ಪ್ರದೇಶಗಳಲ್ಲಿ ಆನೆಗಳ ಕಾಟವಿದ್ದು ಇಲ್ಲಿ ಜೀವಾಹಾನಿ ಆಗದ ರೀತಿಯಲ್ಲಿ ಕ್ರಮವಹಿಸಲು ಅರಣ್ಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ರಾಜ್ಯದ್ಯಂತ 641 ಕಿಲೋಮೀಟರ್ ಬ್ಯಾರಿಕೇಡ್ ಹಾಗೂ ಸೌರಬೇಲಿ ಹಾಕುವ ಯೋಜನೆಯಿದ್ದು ಈ ಪೈಕಿ 360 ಕಿಲೋ ಮೀಟರ್ ಕಾರ್ಯ ಪೂರ್ಣಗೊಂಡಿದೆ. ರಾಜ್ಯದಲ್ಲಿ 629 ಆನೆಗಳಿದ್ದರೂ ಸಾವಿನ ಪ್ರಮಾಣ ಇತರ ರಾಜ್ಯಗಳಿಗೆ ಹೋಲಿಸಿದರೆ ಅತ್ಯಂತ ಕಡಿಮೆ ಇದೆ. ಆದಾಗ್ಯೂ ಮಾನವನ ಜೀವ ಅಮೂಲ್ಯವಾಗಿದ್ದು ಜೀವ ಹಾನಿ ತಪ್ಪಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Anekal News: ಕಾಡಾನೆ ದಾಳಿ: ಕುರಿ ಕಾಯುತ್ತಿದ್ದ ಮಹಿಳೆ ದುರ್ಮರಣ

2019- 20 ರ ಸಾಲಿನಲ್ಲಿ ವನ್ಯಮೃಗಗಳ ದಾಳಿಯಿಂದ ರಾಜ್ಯದಲ್ಲಿ 50 ಸಾವು ಸಂಭವಿಸಿದೆ, ಈ ಪೈಕಿ 29 ಸಾವು ಆನೆಗಳಿಂದಲೇ ಆಗಿದೆ. 20-21ರ ಅವಧಿಯಲ್ಲಿ 41 ಸಾವುಗಳು ಸಂಭವಿಸಿದ್ದರೆ, 2021- 22 ರ ಅವಧಿಯಲ್ಲಿ 29 ಮತ್ತು 2022-23ರ ಅವಧಿಯಲ್ಲಿ 51 ಸಾವು ಸಂಭವಿಸಿದೆ, ಈ ಪೈಕಿ 29 ಆನೆ ದಾಳಿಯಿಂದ ಆಗಿದೆ ಎಂದು ವಿವರ ನೀಡಿದರು.

ಪ್ರಸ್ತುತ ಹಾಸನ ಚಿಕ್ಕಮಗಳೂರು ಕೊಡಗು ಮೈಸೂರು ಮತ್ತು ಚಾಮರಾಜನಗರದಲ್ಲಿ ಆನೆ ಕಾರ್ಯಪಡೆ ಕಾರ್ಯಾಚರಣೆ ಮಾಡುತ್ತಿದ್ದು ರಾಮನಗರ ಮತ್ತು ಬನ್ನೇರುಘಟ್ಟದಲ್ಲಿ ಪ್ರತ್ಯೇಕ ಟಾಸ್ಕ್ ಫೋರ್ಸ್ ರಚಿಸಲಾಗುವುದು ಎಂದರು. ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ಪ್ರತಿ ಕಿ.ಮೀ ಗೆ ಒಂದುವರೆ ಕೋಟಿ ರೂಪಾಯಿ ವೆಚ್ಚವಾಗಲಿದೆ, ಆದರೆ ಹ್ಯಾಂಗಿಂಗ್ ಸೌರ ಬೇಲಿ ಮತ್ತು ಸೋಲಾರ್ ಬೇಲಿಗೆ ತಲಾ 6 ಲಕ್ಷ ರೂಪಾಯಿ ವೆಚ್ಚ ಆಗಲಿದೆ ಎಂದು ಮಾಹಿತಿ ನೀಡಿದರು.

ಸೌರ ಬೇಲಿಗಳ ಬದಲು ದಪ್ಪ ಕಲ್ಲಿನ ತಡಗೋಡೆಗಳನ್ನು ನಿರ್ಮಿಸಿದರೆ ಆನೆಗಳ ಹಾವಳಿ ತಪ್ಪಿಸಬಹುದು ಎಂಬ ಸಂಸದ ಸುರೇಶ್ ಅವರ ಸಲಹೆಗೆ ಪ್ರತಿಕ್ರಿಸಿದ ಸಚಿವರು ರೈಲ್ವೆ ಬ್ಯಾರಿಕೇಡ್ ಮತ್ತು ಕಲ್ಲಿನ ತಡೆಗೋಡೆಗಳ ತುಲನಾತ್ಮಕ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಬೆಳೆ ಹಾನಿಗೆ ಸಮಾನವಾದ ಪರಿಹಾರ ದೊರಕಬೇಕು ಕೆಲವು ಪ್ರಾಣಿಗಳು ದಾಳಿಯಿಂದ ಆಗುವ ಬೆಳೆ ಹಾನಿಗೆ ಪರಿಹಾರ ಲಭಿಸುತ್ತಿಲ್ಲ, ಅದೇ ರೀತಿ ಕೆಲವು ಬೆಳೆಗಳ ಹಾನಿಗೂ ಪರಿಹಾರ ಸಿಗುತ್ತಿಲ್ಲ ಇದರಿಂದ ರೈತರಿಗೆ ತೊಂದರೆಯಾಗಿದ್ದು ಎಲ್ಲ ಬೆಳೆಗಳು ಮತ್ತು ಎಲ್ಲಾ ಕಾಡುಪ್ರಾಣಿಗಳ ಹಾನಿಗೆ ಪರಿಹಾರ ನೀಡುವ ಸಂಬಂಧ ಪರಿಶೀಲನೆ ನಡೆಸಲಾಗುವುದು ಎಂದರು.

ಚಿರತೆಗಳ ಹಾವಳಿಯು ರಾಜ್ಯದ ಅನೇಕ ಕಡೆ ಅದರಲ್ಲೂ ರಾಮನಗರದಲ್ಲಿ ಹೆಚ್ಚಾಗಿದ್ದು ಚಿರತೆಗಳನ್ನು ಹಿಡಿದು ಕಾಡಿಗೆ ಕಳುಹಿಸಲು ಕ್ರಮ ವಹಿಸುವಂತೆ ಸೂಚಿಸಿದರು. ಮಾನವನ ರಕ್ತದ ರುಚಿ ಕಂಡ ಚಿರತೆ ಮತ್ತು ಹುಲಿಗಳು ಪದೇ ಪದೇ ದಾಳಿ ಮಾಡುತ್ತವೆ, ಈ ಹಿನ್ನೆಲೆಯಲ್ಲಿ ಅವುಗಳನ್ನು ಪುನರ್ವಸತಿ ಕೇಂದ್ರಗಳಲ್ಲಿ ಪೋಷಿಸುವ ಅಗತ್ಯವಿದ್ದು, ಈ ಕಾರ್ಯವನ್ನು ಇಲಾಖೆ ನಿರ್ವಹಿಸುತ್ತಿದೆ ಎಂದರು. ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಹಾಜರಿದ್ದರು.

ಘಟನೆ ಹಿನ್ನೆಲೆ

ಚನ್ನಪಟ್ಟಣ ತಾಲ್ಲೂಕಿನ ವಿರುಪಸಂದ್ರದಲ್ಲಿ ಶನಿವಾರ ಕಾಡಾನೆ ದಾಳಿಗೆ ಮಾವಿನ ತೋಟದ ಕಾವಲುಗಾರ ವೀರಭದ್ರಯ್ಯ(52) ಎಂಬುವವರು ಮೃತಪಟ್ಟಿದ್ದರು. ಕನಕಪುರದವರಾದ ವೀರಭದ್ರಯ್ಯ, ಲೋಕೇಶ್ ಎಂಬುವವರ ಮಾವಿನ ತೋಟದಲ್ಲಿ ಮೂರ್ನಾಲ್ಕು ತಿಂಗಳಿಂದ ಕಾವಲುಗಾರರಾಗಿ ಕೆಲಸ ಮಾಡುತ್ತಿದ್ದರು. ಶನಿವಾರ ನಸುಕಿನಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ ದಾಳಿ ಮಾಡಿತ್ತು. ತಲೆ ಮೇಲೆ ಕಾಲಿಟ್ಟು ಕೊಂದಿತ್ತು. ಸ್ಥಳಕ್ಕೆ ಅಕ್ಕೂರು ಠಾಣೆ ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಸದ್ಯ ಈಗ ಅರಣ್ಯ ಸಚಿವ ಈಶ್ವರ್ ಖಂಡ್ರೆ ವೀರಭದ್ರಯ್ಯ ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.

ರಾಮನಗರಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:42 pm, Sun, 4 June 23

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ