AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್-ಕಾಂಗ್ರೆಸ್ ಅಣ್ಣ ತಮ್ಮಂದಿರು, ಕಿಚಡಿ ಸರ್ಕಾರ ಬೇಡ, ಸ್ಥಿರ ಸರ್ಕಾರ ಬೇಕಿದೆ: ಆರ್​ ಅಶೋಕ್

ಶಾಸಕ ಮಾಡಾಳ್‌ ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಮತ್ತು ವಿಪಕ್ಷನಾಯಕ ಸಿದ್ದಾರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಭ್ರಷ್ಟಚಾರದ 70 ಪ್ರಕರಣ ಮುಚ್ಚಿ ಹಾಕಿದ್ದಾರೆ ಎಂದು ಕಂದಾಯ ಸಚಿವ ಆರ್​ ಅಶೋಕ್​ ಆರೋಪ ಮಾಡಿದ್ದಾರೆ.

ವಿವೇಕ ಬಿರಾದಾರ
|

Updated on: Mar 04, 2023 | 1:44 PM

Share

ರಾಮನಗರ: ಶಾಸಕ ಮಾಡಾಳ್‌ ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಮತ್ತು ವಿಪಕ್ಷನಾಯಕ ಸಿದ್ದಾರಾಮಯ್ಯ (Siddaramaiah) ಮುಖ್ಯಮಂತ್ರಿಯಾಗಿದ್ದಾಗ ಭ್ರಷ್ಟಚಾರದ 70 ಪ್ರಕರಣ ಮುಚ್ಚಿ ಹಾಕಿದ್ದಾರೆ. ಜೆಡಿಎಸ್ (JDS) ಹಾಗೂ ಕಾಂಗ್ರೆಸ್ (Congress) ಅಣ್ಣ ತಮ್ಮಂದಿರು. ರಾಜ್ಯದಲ್ಲಿ JDS ಸರ್ಕಾರ ಇದ್ದಿದ್ದರೆ ಎಲ್ಲವನ್ನೂ ಮುಚ್ಚಿ ಹಾಕುತ್ತಿದ್ದರು. ಕಿಚಡಿ ಸರ್ಕಾರ ಬೇಡ, ಸ್ಥಿರ ಸರ್ಕಾರ ಬೇಕಿದೆ ಎಂದು ಕಂದಾಯ ಸಚಿವ ಆರ್​ ಅಶೋಕ್​​ (R Ashok) ವಾಗ್ದಾಳಿ ಮಾಡಿದ್ದಾರೆ.

ರಾಮನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಲೋಕಯುಕ್ತ ರದ್ದು ಮಾಡಿ ಎಸಿಬಿ ತಂದರು. ನಾವು ಪಾರದರ್ಶಕವಾಗಿ ಇದ್ದೇವೆ. ಕ್ರಮ ಕೈಗೊಳ್ಳುವುದಾಗಿ ಈಗಾಗಲೇ ಮುಖ್ಯಮಂತ್ರಿಗಳು ಹೇಳಿದ್ದಾರೆ. ನಮ್ಮ ಬಗ್ಗೆ ಮಾತನಾಡಲು ಜೆಡಿಎಸ್​, ಕಾಂಗ್ರೆಸ್​ನವರಿಗೆ​ ನೈತಿಕತೆ ಇಲ್ಲ. ಹೆಚ್​ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ, ಹೋಟೆಲ್​ನಲ್ಲಿ ಆಡಳಿತ ಮಾಡಿದ್ದಾರೆ. ಕುಮಾರಸ್ವಾಮಿಯಿಂದ ನಾವು ಪಾಠ ಕಲಿಯಬೇಕಿಲ್ಲ. ಕುಮಾರಸ್ವಾಮಿ ಅವರಿಗೆ ಅವರಿಗೆ ಚಾಲೆಂಜ್ ಮಾಡುತ್ತೇನೆ. ಎಲ್ಲವನ್ನು ಮುಚ್ಚಿ ಹಾಕಿದ್ದೀರಿ ಎಂದು ಆರೋಪ ಮಾಡಿದರು.

ಮತ್ತೊಮ್ಮೆ ಅಧಿಕಾರಕ್ಕೆ ತರಲು ವಿಜಯ ಸಂಕಲ್ಪ ರಥಯಾತ್ರೆ

ವಿಜಯ ಸಂಕಲ್ಪ ರಥಯಾತ್ರೆಗೆ ಅಮಿತ್ ಶಾ ಅವರು ದೇವನಹಳ್ಳಿಯಲ್ಲಿ ಉದ್ಘಾಟನೆ ಮಾಡಿದ್ದಾರೆ. ಮತ್ತೊಮ್ಮೆ ಅಧಿಕಾರಕ್ಕೆ ತರಲು ಈ ರಥಯಾತ್ರೆ ಪ್ರಮುಖವಾಗಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್​​ನ ರಥಯಾತ್ರೆಗಳು ಅಂತ್ಯವಾಗಿದೆ. ನಾಲ್ಕು ತಂಡಗಳು ಇದೆ. ಒಟ್ಟು 15 ದಿನ 224 ಕ್ಷೇತ್ರಗಳಿಗೆ ಭೇಟಿ ನೀಡುತ್ತೇವೆ. ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್​ನ ಎ ಟೀಂ ಬಿ ಟೀಂ ಅಂತ್ಯ ಹಾಡಬೇಕಿದೆ ಎಂದರು.

ಕೇಂದ್ರದಿಂದ ಕರ್ನಾಟಕಕ್ಕೆ ಅತೀ ಹೆಚ್ಚು ಹಣ ಬಂದಿದೆ. ಕೇಂದ್ರದ ಬಜೆಟ್​​ನಲ್ಲಿ ಹೆಚ್ಚು ಹಣ ಘೋಷಣೆ ಆಗಿದೆ ರಾಜ್ಯಕ್ಕೆ. ದೇಶದ ಈಶಾನ್ಯ ಭಾಗದಲ್ಲಿ ಬಿಜೆಪಿ ಬಾವುಟ ಹಾರುತ್ತಿದೆ. ಯಾವ ಕ್ಷೇತ್ರಗಳಲ್ಲಿ ಹಿಂದೆ ಹಿಂದೆವು ಅಲ್ಲಿ ಹೆಚ್ಚು ಒತ್ತು ನೀಡಲಾಗುತ್ತಿದೆ. ಕಳೆದ ಬಾರಿಗಿಂತ ಹೆಚ್ಚಿನ 20 ಸೀಟ್ ಗೆಲ್ಲಬೇಕು ಎಂಬ ಟಾರ್ಗೆಟ್ ಕೊಟ್ಟಿದ್ದಾರೆ ಎಂದು ತಿಳಿಸಿದರು.

ಸುಮಲತಾ ಪಕ್ಷ ಸೇರ್ಪಡೆ ವಿಚಾರವಾಗಿ ಮಾತನಾಡಿದ ಅವರು ಬಹಳ ಸಲ ಮಾತನಾಡಿದ್ದೇವೆ ಹೈಕಮಾಂಡ್ ಯಾವಾಗ ಹೇಳುತ್ತಾರೆ ಅವಾಗ ಮಾತನಾಡುತ್ತೇವೆ. 4-5 ಬಾರಿ ಸುಮಲತಾ ಜೊತೆ ಮಾತನಾಡಿದ್ದೇನೆ. ಅವರ ಭಾವನೆಗಳ ಹಂಚುಕೊಂಡಿದ್ದಾರೆ ಎಂದು ಹೇಳಿದರು.

ನಾಳೆ ಕನಕಪುರದಲ್ಲಿ ನಾವೇ ರಥಯಾತ್ರೆ ಮಾಡುತ್ತಿದ್ದೇವೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಅವರನ್ನ ಕಟ್ಟಿಹಾಕುತ್ತೇವೆ. ಒಳ್ಳೆಯ ಅಭ್ಯರ್ಥಿಯನ್ನು ಹಾಕುತ್ತೇವೆ. ಕನಕಪುರದದಲ್ಲಿ ಚರ್ಚ್ ವಿಚಾರವಾಗಿ ದೊಡ್ಡ ಹೋರಾಟ ಮಾಡಿದ್ದೇವೆ. ಚರ್ಚ್ ಕಟ್ಟಲು ಬಿಟ್ಟಿಲ್ಲ ಎಂದು ಮಾತನಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ