AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಒಕ್ಕಣೆ ಮಾಡಲೆಂದು ಹಾಕಲಾಗಿದ್ದ ರಾಗಿ ಮೆದೆಗೆ ಕಿಡಿಗೇಡಿಗಳಿಂದ ಬೆಂಕಿ; ಲಕ್ಷಾಂತರ ರೂ. ಮೌಲ್ಯದ ಬೆಳೆ ನಾಶ

ಕೃಷ್ಣ ಎಂಬುವವರಿಗೆ ಸೇರಿದ ರಾಗಿ ಮೆದೆಗೆ ಕಿಡಿಗೇಡಿಗಳು ಬೆಂಕಿ ಹಂಚಿ ಪರಾರಿಯಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಬೆಂಕಿಗೆ ಲಕ್ಷಂತಾರ ರೂಪಾಯಿ ಮೌಲ್ಯದ ರಾಗಿ ಮೆದೆ ನಾಶವಾಗಿದೆ.

ರಾಮನಗರ: ಒಕ್ಕಣೆ ಮಾಡಲೆಂದು ಹಾಕಲಾಗಿದ್ದ ರಾಗಿ ಮೆದೆಗೆ ಕಿಡಿಗೇಡಿಗಳಿಂದ ಬೆಂಕಿ; ಲಕ್ಷಾಂತರ ರೂ. ಮೌಲ್ಯದ ಬೆಳೆ ನಾಶ
ರಾಗಿ ಮೆದೆಗೆ ಕಿಡಿಗೇಡಿಗಳಿಂದ ಬೆಂಕಿ
TV9 Web
| Updated By: preethi shettigar|

Updated on:Jan 02, 2022 | 10:49 AM

Share

ರಾಮನಗರ: ಒಕ್ಕಣೆ ಮಾಡಲೆಂದು ಹಾಕಲಾಗಿದ್ದ ರಾಗಿ(Millet) ಮೆದೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಅರಳಾಪುರ ಗ್ರಾಮದಲ್ಲಿ ನಡೆದಿದೆ. ಕೃಷ್ಣ ಎಂಬುವವರಿಗೆ ಸೇರಿದ ರಾಗಿ ಮೆದೆಗೆ ಕಿಡಿಗೇಡಿಗಳು ಬೆಂಕಿ ಹಂಚಿ ಪರಾರಿಯಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಬೆಂಕಿಗೆ (Fire) ಲಕ್ಷಂತಾರ ರೂಪಾಯಿ ಮೌಲ್ಯದ ರಾಗಿ ಮೆದೆ ನಾಶವಾಗಿದೆ. ಸದ್ಯ ಎಂ.ಕೆ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಕಲಬುರಗಿ: ಮನೆಯ ಮುಂದೆ ನಿಲ್ಲಿಸಿದ್ದ ಬೈಕ್‌ಗಳಿಗೆ ಕಿಡಿಗೇಡಿಗಳಿಂದ ಬೆಂಕಿ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್‌ಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ಕಲಬುರಗಿ ಜಿಲ್ಲೆಯ ಅಂಬೇಡ್ಕರ್ ಆಶ್ರಯ ಕಾಲೋನಿಯಲ್ಲಿ ನಡೆದಿದೆ. 3 ಬೈಕ್‌ಗಳಿಗೆ ಬೆಂಕಿ ಹಚ್ಚಿ ಕಿಡಿಗೇಡಿಗಳು ಪರಾರಿಯಾಗಿದ್ದು, ಬೈಕ್​ಗಳು ಸುಟ್ಟು ಭಸ್ಮವಾಗಿದೆ. ಕಳೆದ ವಾರ ಹಲವು ಮನೆ ಹಾಗೂ ಕಾರುಗಳ ಮೇಲೆ ಕಲ್ಲು ತೂರಾಟ ನಡೆದಿತ್ತು, ಇದೀಗ ಮತ್ತೆ ಬೈಕ್​ಗಳಿಗೆ ಬೆಂಕಿ ಹಚ್ಚಿದ್ದಾರೆ. ಕಲಬುರಗಿಯಲ್ಲಿ ಕಿಡಿಗೇಡಿಗಳ ಕೃತ್ಯಕ್ಕೆ ಜನರು ಭಯಭೀತರಾಗಿದ್ದಾರೆ. ಸದ್ಯ ಚೌಕ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಬೆಂಗಳೂರು: ತೋಟಗಳಲ್ಲಿ ಅಡಿಕೆ ಕದಿಯುತ್ತಿದ್ದ ಮೂವರು ಕಳ್ಳರ ಬಂಧನ ನೆಲಮಂಗಲ, ದೊಡ್ಡಬಳ್ಳಾಪುರ, ಹೊಸಕೋಟೆ ಭಾಗದಲ್ಲಿ ಅಡಕೆ ಕದಿಯುತ್ತಿದ್ದ ಮೂವರು ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ತ್ಯಾಮಗೊಂಡ್ಲು ಪೊಲೀಸರು ರವಿಶಂಕರ್(32), ಶಶಿಕುಮಾರ್(26), ನಟರಾಜ್(30)ನನ್ನು ಬಂಧಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ತಾಲೂಕುಗಳಲ್ಲಿ ಆರೋಪಿಗಳು ಅಡಿಕೆ ಕದಿಯುತ್ತಿದ್ದರು. ಸದ್ಯ ಬಂಧಿತರಿಂದ 300ಕೆಜಿ ಅಡಿಕೆ ಜಪ್ತಿ ಮಾಡಲಾಗಿದೆ. ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಚಿಕ್ಕಮಗಳೂರು: ಟ್ರ್ಯಾಕ್ಟರ್ ಪಲ್ಟಿಯಾಗಿ ಚಾಲಕ ಹರೀಶ್(28) ಸ್ಥಳದಲ್ಲೇ ಸಾವು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಳೇಕೋಟೆಯಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಚಾಲಕ ಹರೀಶ್(28) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಳೆದ 45 ದಿನಗಳ ಹಿಂದಷ್ಟೇ ಹರೀಶ್ ಮದುವೆಯಾಗಿದ್ದರು. ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಗುತ್ತಿಗೆ ಆಧಾರದಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಹರೀಶ್ ಮೃತಪಟ್ಟಿದ್ದು, ಮೂಡಿಗೆರೆ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕೊಟ್ಟಿಗೆಹಾರ: ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ, ಸುಟ್ಟು ಕರಕಲಾದ ಬಸ್

ಮೆಕ್ಕೆಜೋಳದ ಕಣಕ್ಕೆ ಬೆಂಕಿ: ಉತ್ತಮ ಬೆಲೆಯ ನಿರೀಕ್ಷೆಯಲ್ಲಿದ್ದ ಹಾವೇರಿ ರೈತರಿಗೆ ಶಾಕ್

Published On - 9:45 am, Sun, 2 January 22