ರಾಮನಗರ, ಫೆಬ್ರುವರಿ 2: ಶಾಸಕ, ನಿಗಮ ಮಂಡಳಿ ಅಧ್ಯಕ್ಷನಾಗಿದ್ದಕ್ಕೆ ತಡೆದುಕೊಳ್ಳಲು ಆಗುತ್ತಿಲ್ಲ. ದೂರಿನ ಬಗ್ಗೆ ಕಾನೂನು ರೀತಿಯಲ್ಲಿ ತನಿಖೆಯಾಗಿ ಸತ್ಯ ಹೊರಬರಲಿ ಎಂದು ಶಾಸಕ ಹೆಚ್.ಸಿ.ಬಾಲಕೃಷ್ಣ (MLA Balakrishna) ವಾಗ್ದಾಳಿ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಜನರಿಗೆ ಅಕ್ಷತೆ ಬೇಕಾ.. ಗ್ಯಾರಂಟಿ ಬೇಕಾ ಅಂತಾ ನಾನು ಕೇಳಿದ್ದು. ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಕುಟುಂಬಕ್ಕೆ ನಾವು ಅಧಿಕಾರದಲ್ಲಿದ್ದನ್ನು ತಡೆದುಕೊಳ್ಳಲು ಆಗುತ್ತಿಲ್ಲ ಎಂದು ಕಿಡಿಕಾರಿದ್ದಾರೆ.
ಯಾರಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದೇವೆ? ಯಾರಾದರೂ ಓಡಿಸಿಕೊಂಡು ಹೋಗುತ್ತಿದ್ದೇವಾ? ಎಂದು ಪ್ರಶ್ನೆ ಮಾಡಿದ್ದಾರೆ.
ಸರ್ಕಾರ ಒತ್ತಡ ಹಾಕಿ ಹೇಳಿಕೆ ಬಗ್ಗೆ ಬಾಲಕೃಷ್ಣ ಯೂಟರ್ನ್ ಹೇಳಿಕೆ ಕೊಟ್ಟಿದ್ದಾರೆ ಎಂಬ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯೆ ನೀಡುವುದರಲ್ಲಿ ಅರ್ಥ ಇಲ್ಲ. ಒಂದೊಂದು ದಿನ ಒಂದೊಂದು ಹೇಳಿಕೆ ನೀಡುತ್ತಾರೆ. ಹಿಂದೆ ಬಿಜೆಪಿಗೆ ವೋಟ್ ಹಾಕಿದರೆ ದೇಶ ದಿವಾಳಿ ಆಗುತ್ತೆ ಎಂದಿದ್ದರು. ನಾಳೆ ದಿನ ಶ್ರೀಲಂಕಾ ರೀತಿಯಲ್ಲಿ ದೇಶ ದಿವಾಳಿಯಾಗುತ್ತೆ ಎಂದಿದ್ದರು. ಅವರ ಹೇಳಿಕೆಗಳಿಗೆ ಮಹತ್ವ ಕೊಡುವುದು ಬೇಡ ಎಂದು ಟಾಂಗ್ ನೀಡಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ ಶಾಸಕ ಹೆಚ್ಸಿ ಬಾಲಕೃಷ್ಣ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು, ಏನಿದು ಪ್ರಕರಣ?
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ ಹಾಕಿದ್ರೆ ಗ್ಯಾರಂಟಿಗಳು ಇರುತ್ತೆ. ಇಲ್ಲದಿದ್ದರೆ ಇಲ್ಲ ಎನ್ನುವ ಅರ್ಥದಲ್ಲಿ ಶಾಸಕ ಹೆಚ್.ಸಿ.ಬಾಲಕೃಷ್ಣ ಹೇಳಿಕೆ ನೀಡಿದ್ದರು. ಸದ್ಯ ಈ ವಿಚಾರವಾಗಿಯೇ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೆಚ್.ಸಿ.ಬಾಲಕೃಷ್ಣ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ಕಾಂಗ್ರೆಸ್ನ ಗ್ಯಾರಂಟಿ ಯೋಜನೆಗಳಿಗೆ ಮತ ನೀಡಬೇಕೇ ಹೊರತು ಬಿಜೆಪಿಯವರ ಅಕ್ಷತೆಗಲ್ಲ ಎಂಬುದಷ್ಟೇ ನಮ್ಮ ಉದ್ದೇಶ. ಮತ ಹಾಕಲೇಬೇಕು, ಗ್ಯಾರಂಟಿ ಯೋಜನೆ ರದ್ದುಮಾಡಿಯೇ ಬಿಡುತ್ತೇವೆ ಎಂದು ಹೇಳಿಲ್ಲ. ನಮ್ಮದು ಬ್ಲ್ಯಾಕ್ಮೇಲ್ ಸಂಸ್ಕೃತಿ ಅಲ್ಲ. ನಾವು ಕೆಲಸ ಮಾಡಿದ್ದೇವೆ, ನಮಗೆ ಮತ ನೀಡಿ ಎಂದು ಕೇಳುತ್ತಿದ್ದೇವಷ್ಟೆ ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು.
ದೂರು ಬಳಿಕ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಗ್ಯಾರಂಟಿ ಮುಂದಿಟ್ಟುಕೊಂಡು ಬ್ಲ್ಯಾಕ್ಮೇಲ್ ಸಂಸ್ಕೃತಿ ಅನುಸರಿಸುತ್ತಿದ್ದಾರೆ. ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಗ್ಯಾರಂಟಿ ಘೋಷಣೆ ಮಾಡಿತ್ತು.
ಇದನ್ನೂ ಓದಿ: 2023ರ ವಿಧಾನಸಭಾ ಚುನಾವಣೆ ವೇಳೆ ಮತದಾರರಿಗೆ ಆಮಿಷ ಆರೋಪ: ಹೈಕೋರ್ಟ್ ಮೆಟ್ಟಿಲೇರಿದ ನಿಖಿಲ್ ಕುಮಾರಸ್ವಾಮಿ
ರಾಜ್ಯದ ಜನರು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿದ್ದರು. ಗ್ಯಾರಂಟಿ ಸಂಬಂಧ ಕಾಂಗ್ರೆಸ್ಸಿಗರು ಬಹಿರಂಗ ಹೇಳಿಕೆ ನೀಡುತ್ತಿದ್ದಾರೆ. ಮತ ಹಾಕದಿದ್ದರೆ ಗ್ಯಾರಂಟಿ ನಿಲ್ಲಿಸುತ್ತೇವೆ ಎಂದು ಹೆದರಿಸುತ್ತಿದ್ದಾರೆ. ಈಬಗ್ಗೆ ಕ್ರಮಕೈಗೊಳ್ಳಲು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ ಎಂದು ಹೇಳಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.