ಮನೆಯೊಳಗೆ ಹೋಗಿ ಬರುವಷ್ಟರಲ್ಲಿ ಕಾರಿನಲ್ಲಿದ್ದ ಲಕ್ಷ ಲಕ್ಷ ಹಣ ದರೋಡೆ!
ರಾಮನಗರ: ಕಾರಿನ ಗಾಜು ಒಡೆದು 3 ಲಕ್ಷ ರೂಪಾಯಿ ಕಳ್ಳತನ ಮಾಡಿರುವ ಘಟನೆ ಚನ್ನಪಟ್ಟಣದ ವಿವೇಕಾನಂದ ನಗರದಲ್ಲಿ ನಡೆದಿದೆ. ಬಸವರಾಜೇ ಅರಸ್ ಎಂಬುವರು ಮನೆಯ ಮುಂದೆಯೇ ಕಾರು ನಿಲ್ಲಿಸಿ ಮನೆಯೊಳಗೆ ಹೋಗಿ ಬರುವಷ್ಟರಲ್ಲಿ ಘಟನೆ ನಡೆದಿದೆ. ಕಾರನ್ನು ಬಸವರಾಜೇ ಅರಸ್ ಮನೆಯ ಮುಂದೆಯೇ ನಿಲ್ಲಿಸಿದ್ದರು. ಎರಡು ಬೈಕ್ಗಳಲ್ಲಿ ಬಂದಿದ್ದ ನಾಲ್ವರು ಖದೀಮರು ಕಾರಿನ ಗ್ಲಾಸ್ ಒಡೆದು ಹಣ ಎಗರಿಸಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಚನ್ನಪಟ್ಟಣ ಪುರ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಾಮನಗರ: ಕಾರಿನ ಗಾಜು ಒಡೆದು 3 ಲಕ್ಷ ರೂಪಾಯಿ ಕಳ್ಳತನ ಮಾಡಿರುವ ಘಟನೆ ಚನ್ನಪಟ್ಟಣದ ವಿವೇಕಾನಂದ ನಗರದಲ್ಲಿ ನಡೆದಿದೆ. ಬಸವರಾಜೇ ಅರಸ್ ಎಂಬುವರು ಮನೆಯ ಮುಂದೆಯೇ ಕಾರು ನಿಲ್ಲಿಸಿ ಮನೆಯೊಳಗೆ ಹೋಗಿ ಬರುವಷ್ಟರಲ್ಲಿ ಘಟನೆ ನಡೆದಿದೆ.
ಕಾರನ್ನು ಬಸವರಾಜೇ ಅರಸ್ ಮನೆಯ ಮುಂದೆಯೇ ನಿಲ್ಲಿಸಿದ್ದರು. ಎರಡು ಬೈಕ್ಗಳಲ್ಲಿ ಬಂದಿದ್ದ ನಾಲ್ವರು ಖದೀಮರು ಕಾರಿನ ಗ್ಲಾಸ್ ಒಡೆದು ಹಣ ಎಗರಿಸಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಚನ್ನಪಟ್ಟಣ ಪುರ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.