ಮನೆಯೊಳಗೆ ಹೋಗಿ ಬರುವಷ್ಟರಲ್ಲಿ ಕಾರಿನಲ್ಲಿದ್ದ ಲಕ್ಷ ಲಕ್ಷ ಹಣ ದರೋಡೆ!

ರಾಮನಗರ: ಕಾರಿನ ಗಾಜು ಒಡೆದು 3 ಲಕ್ಷ ರೂಪಾಯಿ ಕಳ್ಳತನ ಮಾಡಿರುವ ಘಟನೆ ಚನ್ನಪಟ್ಟಣದ ವಿವೇಕಾನಂದ ನಗರದಲ್ಲಿ ನಡೆದಿದೆ. ಬಸವರಾಜೇ ಅರಸ್ ಎಂಬುವರು ಮನೆಯ ಮುಂದೆಯೇ ಕಾರು ನಿಲ್ಲಿಸಿ ಮನೆಯೊಳಗೆ ಹೋಗಿ ಬರುವಷ್ಟರಲ್ಲಿ ಘಟನೆ ನಡೆದಿದೆ. ಕಾರನ್ನು ಬಸವರಾಜೇ ಅರಸ್ ಮನೆಯ ಮುಂದೆಯೇ ನಿಲ್ಲಿಸಿದ್ದರು. ಎರಡು ಬೈಕ್​ಗಳಲ್ಲಿ ಬಂದಿದ್ದ ನಾಲ್ವರು ಖದೀಮರು ಕಾರಿನ ಗ್ಲಾಸ್ ಒಡೆದು ಹಣ ಎಗರಿಸಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಚನ್ನಪಟ್ಟಣ ಪುರ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ‌ ನಡೆಸಿದ್ದಾರೆ.

ಮನೆಯೊಳಗೆ ಹೋಗಿ ಬರುವಷ್ಟರಲ್ಲಿ ಕಾರಿನಲ್ಲಿದ್ದ ಲಕ್ಷ ಲಕ್ಷ ಹಣ ದರೋಡೆ!
ಸಾಧು ಶ್ರೀನಾಥ್​

Updated on: Jan 08, 2020 | 3:32 PM

ರಾಮನಗರ: ಕಾರಿನ ಗಾಜು ಒಡೆದು 3 ಲಕ್ಷ ರೂಪಾಯಿ ಕಳ್ಳತನ ಮಾಡಿರುವ ಘಟನೆ ಚನ್ನಪಟ್ಟಣದ ವಿವೇಕಾನಂದ ನಗರದಲ್ಲಿ ನಡೆದಿದೆ. ಬಸವರಾಜೇ ಅರಸ್ ಎಂಬುವರು ಮನೆಯ ಮುಂದೆಯೇ ಕಾರು ನಿಲ್ಲಿಸಿ ಮನೆಯೊಳಗೆ ಹೋಗಿ ಬರುವಷ್ಟರಲ್ಲಿ ಘಟನೆ ನಡೆದಿದೆ.

ಕಾರನ್ನು ಬಸವರಾಜೇ ಅರಸ್ ಮನೆಯ ಮುಂದೆಯೇ ನಿಲ್ಲಿಸಿದ್ದರು. ಎರಡು ಬೈಕ್​ಗಳಲ್ಲಿ ಬಂದಿದ್ದ ನಾಲ್ವರು ಖದೀಮರು ಕಾರಿನ ಗ್ಲಾಸ್ ಒಡೆದು ಹಣ ಎಗರಿಸಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಚನ್ನಪಟ್ಟಣ ಪುರ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ‌ ನಡೆಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us