ಕನಕಪುರದಲ್ಲಿ ನೈತಿಕ ಪೊಲೀಸ್​ಗಿರಿ: ಅನ್ಯ ಧರ್ಮದ ಯುವಕ, ಯುವತಿ ಮೇಲೆ ಹಲ್ಲೆ, ತಲೆಬೋಳಿಸಿದ್ದ ಆರೋಪಿಗಳು ಅರೆಸ್ಟ್​​

ಕನಕಪುರದಲ್ಲಿ ಹಿಂದೂ ಯುವಕ ಮತ್ತು ಮುಸ್ಲಿಂ ಯುವತಿಯ ಮೇಲೆ ನಡೆದ ನೈತಿಕ ಪೊಲೀಸ್​​ ಗಿರಿ ಪ್ರಕರಣದಲ್ಲಿ ಓರ್ವ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಯುವತಿಯ ಕುಟುಂಬಸ್ಥರು ಹಲ್ಲೆ ಮಾಡಿ ತಲೆ ಬೋಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಎರಡು ಪ್ರತ್ಯೇಕ ಎಫ್‌ಐಆರ್ ದಾಖಲಾಗಿವೆ.

ಕನಕಪುರದಲ್ಲಿ ನೈತಿಕ ಪೊಲೀಸ್​ಗಿರಿ: ಅನ್ಯ ಧರ್ಮದ ಯುವಕ, ಯುವತಿ ಮೇಲೆ ಹಲ್ಲೆ, ತಲೆಬೋಳಿಸಿದ್ದ ಆರೋಪಿಗಳು ಅರೆಸ್ಟ್​​
ಪ್ರಾತಿನಿಧಿಕ ಚಿತ್ರ
Updated By: ಗಂಗಾಧರ​ ಬ. ಸಾಬೋಜಿ

Updated on: Sep 21, 2025 | 1:16 PM

ರಾಮನಗರ, ಸೆಪ್ಟೆಂಬರ್​ 21: ಡಿಸಿಎಂ ಡಿಕೆ ಶಿವಕುಮಾರ್​​ ಸ್ವಕ್ಷೇತ್ರ ಕನಕಪುರದಲ್ಲಿ ನೈತಿಕ ಪೊಲೀಸ್ ಗಿರಿ (moral policing) ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕನಕಪುರಪುರ ಠಾಣೆ ಪೊಲೀಸರು ಓರ್ವ ಮಹಿಳೆ ಸೇರಿ ಐವರು ಬಂಧಿಸಿದ್ದಾರೆ (Arrest). ನವಾಜ್, ಕಬೀರ್, ಸುಯೋಲ್, ನಯಾಜ್ ಮತ್ತು ಮಹಿಳೆ ಬಂಧಿತ ಆರೋಪಿಗಳು. ಎರಡು ಪ್ರತ್ಯೇಕ ಎಫ್​ಐಆರ್ ಮಾಡಲಾಗಿದೆ.

ನಡೆದದ್ದೇನು?

ಅಕ್ರಮ ಸಂಬಂಧ ಹಿನ್ನೆಲೆ ಹಿಂದೂ ವ್ಯಕ್ತಿ ಹಾಗೂ ಮುಸ್ಲಿಂ ಮಹಿಳೆ ಮೇಲೆ ಹಲ್ಲೆ ಮಾಡಿರುವಂತಹ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರದ ಇಂದಿರಾನಗರದಲ್ಲಿ ನಡೆದಿತ್ತು. ಹಲ್ಲೆ ಮಾಡುವುದಲ್ಲದೇ ಮಹೇಶ್ ಹಾಗೂ ಹಸೀನಾ ಬಾನು ತಲೆ ಬೋಳಿಸಿ ಆರೋಪಿಗಳು ಅಟ್ಟಹಾಸ ಮೆರೆದಿದ್ದರು.

ಇದನ್ನೂ ಓದಿ: ‘ಬುರ್ಖಾ ತೆಗೆ, ನಿನ್ನ ಹೆಸರೇನು ಹೇಳು’: ಬೆಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ ಕೃತ್ಯ

ಮಹಿಳೆಯ ಕುಟುಂಬಸ್ಥರು ಹಾಗೂ ಸಂಬಂಧಿಕರಿಂದ ಕೃತ್ಯವೆಸಗಲಾಗಿದೆ. ತಕ್ಷಣ ಹಲ್ಲೆಗೊಳಗಾದವರನ್ನು ರಕ್ಷಣೆ ಮಾಡಿ ಪೊಲೀಸ್ ಠಾಣೆಗೆ ಕರೆ ತರಲಾಗಿತ್ತು. ಮಹೇಶ್ ಹಾಗೂ ಹಸೀನಾ ಬಾನು ದೂರಿನ ಅನ್ವಯ ಸದ್ಯ ಆರೋಪಿಗಳನ್ನು ಬಂಧಿಸಲಾಗಿದೆ.

ನೈತಿಕ ಪೊಲೀಸ್ ಗಿರಿ ನಡೆದಿದೆ ಎಂದ ಎಸ್​.ಪಿ ಶ್ರೀನಿವಾಸ್ ಗೌಡ

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ದಕ್ಷಿಣ ಜಿಲ್ಲಾ ಎಸ್​.ಪಿ ಶ್ರೀನಿವಾಸ್ ಗೌಡ ಹೇಳಿಕೆ ನೀಡಿದ್ದು, ನೊಂದಿತರಿಬ್ಬರೂ ಪರಸ್ಪರ ಪ್ರೀತಿಸುತ್ತಿರುತ್ತಾರೆ. ಇದನ್ನ ಸಹಿಸಲು ಆಗದೇ ಮಹಿಳೆ ಕಡೆಯವರು ಕರೆತಂದು ಹಲ್ಲೆ ನಡೆಸಿ ತಲೆ ಬೋಳಿಸಿದ್ದಾರೆ ಎಂದಿದ್ದಾರೆ.

ಸದ್ಯ ನೈತಿಕ ಪೊಲೀಸ್ ಗಿರಿ ನಡೆದಿದೆ. ಹೀಗಾಗಿ ತಕ್ಷಣ ಕ್ರಮ ತೆಗೆದುಕೊಂಡಿದ್ದೇವೆ. ಪ್ರಕರಣ ಸಂಬಂಧ ಐವರನ್ನ ಬಂಧಿಸಲಾಗಿದೆ. ಎರಡು ಪ್ರತ್ಯೇಕ ಎಫ್​ಐಆರ್ ದಾಖಲಿಸಲಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು

ಇತ್ತೀಚೆಗೆ ಜಿಲ್ಲೆಯ ರಾಮನಗರದಲ್ಲಿ ನೈತಿಕ ಪೊಲೀಸ್ ಗಿರಿ ನಡೆದಿತ್ತು. ಹಿಂದೂ ಯುವಕ, ಮುಸ್ಲಿಂ ಯುವತಿ ಬೈಕ್​ನಲ್ಲಿ ಪ್ರಯಾಣಿಸುತ್ತಿದ್ದಾಗ ಕೆಲ ಮುಸ್ಲಿಂ ಯುವಕರು ಅಡ್ಡಗಟ್ಟಿದ್ದರು. ಈ ವೇಳೆ ನೀವು ಯಾರು? ಎಲ್ಲಿಂದ ಬಂದಿದ್ದೀರಿ ಎಂದು ಪ್ರಶ್ನೆ ಮಾಡಿದ್ದರು. ನೈತಿಕ ಪೊಲೀಸ್​ ಗಿರಿ ವಿಡಿಯೋ ವೈರಲ್​ ಆಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.