AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಶಾಲೆಯ ತಡೆಗೋಡೆ ಕುಸಿದು ವಿದ್ಯಾರ್ಥಿ ಸಾವು; ಕಳಪೆ ಕಾಮಗಾರಿಯೇ ಕಾರಣ ಎಂದು ಆರೋಪ

ಬೆಳಿಗ್ಗೆ ಸ್ನಾನಕ್ಕೆ ತೆರಳಿದಾಗ ಮೈಮೇಲೆ ಗೋಡೆ ಬಿದ್ದಿದೆ. ಇದರಿಂದ ಕೌಶಿಕ್ ತಲೆ ಮೇಲೆ ಬಲವಾದ ಗಾಯವಾಗಿದ್ದು, ರಕ್ತಸ್ರಾವವಾಗಿದೆ. ಕೂಡಲೇ ಆತನನ್ನು ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದು, ಈ ವೇಳೆ ಕೌಶಿಕ್ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾನೆ.

ರಾಮನಗರ: ಶಾಲೆಯ ತಡೆಗೋಡೆ ಕುಸಿದು ವಿದ್ಯಾರ್ಥಿ ಸಾವು; ಕಳಪೆ ಕಾಮಗಾರಿಯೇ ಕಾರಣ ಎಂದು ಆರೋಪ
ಮೃತ ವಿದ್ಯಾರ್ಥಿ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ | Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 21, 2023 | 2:47 PM

Share

ರಾಮನಗರ, ಸೆ.21: ಮೊರಾರ್ಜಿ ದೇಸಾಯಿ ವಸತಿ ಶಾಲೆ (Morarji Desai Residential School) ಯ ತಡೆಗೋಡೆ ಕುಸಿದು ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ರಾಮನಗರ (Ramanagara) ತಾಲೂಕಿನ ಹೊಸೂರು ಗೊಲ್ಲಳ್ಳಿ ಗ್ರಾಮದ ವಸತಿ ಶಾಲೆಯಲ್ಲಿ ನಡೆದಿದೆ. ವಿದ್ಯಾರ್ಥಿ ಕೌಶಿಕ್(12)‌ ಮೃತ ರ್ದುದೈವಿ. 6ನೇ ತರಗತಿ ಓದುತ್ತಿದ್ದ ಕೌಶಿಕ್, ಬೆಳಗ್ಗೆ ಸ್ನಾನಕ್ಕೆ ತೆರಳಿದ್ದಾಗ ನೀರಿನ ಟ್ಯಾಂಕ್​ಗೆ ನಿರ್ಮಾಣ ಮಾಡಿದ್ದ ತಡೆಗೋಡೆ ಕುಸಿದು ಈ ದುರ್ಘಟನೆ ನಡೆದಿದೆ. ಘಟನೆಗೆ ಕಳಪೆ ಕಾಮಗಾರಿಯೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸ್ಥಳಕ್ಕೆ ರಾಮನಗರ ಎಸ್​​ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಇನ್ನು ದಯಾನಂದ್ ಸಾಗರ್ ಆಸ್ಪತ್ರೆಯಲ್ಲಿರುವ ಕೌಶಿಕ್ ಮೃತದೇಹ ಇಡಲಾಗಿದ್ದು, ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಹಲವು ಬಾರಿ ಮನವಿ ಮಾಡಿದ್ದ ವಿದ್ಯಾರ್ಥಿಗಳು

ಈ‌ ಹಿಂದೆ ವಿದ್ಯಾರ್ಥಿಗಳು ಹಲವು ಬಾರಿ ಮನವಿ‌ ಮಾಡಿದ್ದರೂ, ಶಾಲಾ ಮಂಡಳಿ ಮಾತ್ರ ಇದಕ್ಕೆ ಕ್ಯಾರೆ ಅಂದಿರಲಿಲ್ಲ. ಇದೀಗ ಬೆಳಿಗ್ಗೆ ಸ್ನಾನಕ್ಕೆ ತೆರಳಿದಾಗ ಮೈಮೇಲೆ ಗೋಡೆ ಬಿದ್ದಿದೆ. ಇದರಿಂದ ಕೌಶಿಕ್ ತಲೆ ಮೇಲೆ ಬಲವಾದ ಗಾಯವಾಗಿದ್ದು, ರಕ್ತಸ್ರಾವವಾಗಿದೆ. ಕೂಡಲೇ ಆತನನ್ನು ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದು, ಈ ವೇಳೆ ಕೌಶಿಕ್ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾನೆ.

ಇದನ್ನೂ ಓದಿ:Smart School: ಬೀದರ್ ಮೊರಾರ್ಜಿ ದೇಸಾಯಿ ವಸತಿ ಶಾಲೆ -ಇಲ್ಲಿದೆ ಸ್ಮಾರ್ಟ್​​ ಬೋರ್ಡ್​​ ಶಿಕ್ಷಣ, 26 ಸಿಸಿಟಿವಿ, 25 ಎಕರೆಯಲ್ಲಿ ಸಾವಿರಾರು ಗಿಡಮರಗಳ ಸಾಂಗತ್ಯದಲ್ಲಿ ಶಿಕ್ಷಣ!

ಮನೆ ಮಾಲೀಕರನ್ನ ಕಟ್ಟಿ ದರೋಡೆ; ಅವರ ಕಾರಲ್ಲೆ ಪರಾರಿ

ಹುಬ್ಬಳ್ಳಿ: ಮನೆ ಮಾಲೀಕರನ್ನು ಕಟ್ಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆ ಮಾಲೀಕರ ಕಾರನ್ನೇ ಕಳ್ಳರು ತಗೆದುಕೊಂಡು ಹೋಗಿದ್ದಾರೆ. ಹೌದು, ಹುಬ್ಬಳ್ಳಿಯ ಬಸವೇಶ್ವರ ನಗರದ ಲಕ್ಷ್ಮೀ ಲೇಔಟ್​ನಲ್ಲಿ ವಾಸವಾಗಿದ್ದ ಉಲ್ಲಾಸ ದೊಡ್ಡಮನಿ ಎಂಬುವವರ ಮನೆಯನ್ನ ಲೂಟಿ ಮಾಡಿ ಮಾಲೀಕರ ಕಾರಲ್ಲಿಯೇ ಖದೀಮರು ಎಸ್ಕೇಪ್ ಆಗಿದ್ದಾರೆ. ಇನ್ನು ಕಳ್ಳರು ಹುಬ್ಬಳ್ಳಿಯಿಂದ ಬೆಳಗಾವಿ ಕಡೆಗೆ ಹೋಗಿರುವ ಬಗ್ಗೆ ಸುಳಿವು ಸಿಕ್ಕಿದ್ದು, ಬೆಳಗಾವಿಯಲ್ಲಿ ಹುಬ್ಬಳ್ಳಿ ಪೊಲೀಸರು ಶೋಧ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ