ರಾಮನಗರ, ಸೆ.21: ಮೊರಾರ್ಜಿ ದೇಸಾಯಿ ವಸತಿ ಶಾಲೆ (Morarji Desai Residential School) ಯ ತಡೆಗೋಡೆ ಕುಸಿದು ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ರಾಮನಗರ (Ramanagara) ತಾಲೂಕಿನ ಹೊಸೂರು ಗೊಲ್ಲಳ್ಳಿ ಗ್ರಾಮದ ವಸತಿ ಶಾಲೆಯಲ್ಲಿ ನಡೆದಿದೆ. ವಿದ್ಯಾರ್ಥಿ ಕೌಶಿಕ್(12) ಮೃತ ರ್ದುದೈವಿ. 6ನೇ ತರಗತಿ ಓದುತ್ತಿದ್ದ ಕೌಶಿಕ್, ಬೆಳಗ್ಗೆ ಸ್ನಾನಕ್ಕೆ ತೆರಳಿದ್ದಾಗ ನೀರಿನ ಟ್ಯಾಂಕ್ಗೆ ನಿರ್ಮಾಣ ಮಾಡಿದ್ದ ತಡೆಗೋಡೆ ಕುಸಿದು ಈ ದುರ್ಘಟನೆ ನಡೆದಿದೆ. ಘಟನೆಗೆ ಕಳಪೆ ಕಾಮಗಾರಿಯೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸ್ಥಳಕ್ಕೆ ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಇನ್ನು ದಯಾನಂದ್ ಸಾಗರ್ ಆಸ್ಪತ್ರೆಯಲ್ಲಿರುವ ಕೌಶಿಕ್ ಮೃತದೇಹ ಇಡಲಾಗಿದ್ದು, ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಈ ಹಿಂದೆ ವಿದ್ಯಾರ್ಥಿಗಳು ಹಲವು ಬಾರಿ ಮನವಿ ಮಾಡಿದ್ದರೂ, ಶಾಲಾ ಮಂಡಳಿ ಮಾತ್ರ ಇದಕ್ಕೆ ಕ್ಯಾರೆ ಅಂದಿರಲಿಲ್ಲ. ಇದೀಗ ಬೆಳಿಗ್ಗೆ ಸ್ನಾನಕ್ಕೆ ತೆರಳಿದಾಗ ಮೈಮೇಲೆ ಗೋಡೆ ಬಿದ್ದಿದೆ. ಇದರಿಂದ ಕೌಶಿಕ್ ತಲೆ ಮೇಲೆ ಬಲವಾದ ಗಾಯವಾಗಿದ್ದು, ರಕ್ತಸ್ರಾವವಾಗಿದೆ. ಕೂಡಲೇ ಆತನನ್ನು ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದು, ಈ ವೇಳೆ ಕೌಶಿಕ್ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾನೆ.
ಹುಬ್ಬಳ್ಳಿ: ಮನೆ ಮಾಲೀಕರನ್ನು ಕಟ್ಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆ ಮಾಲೀಕರ ಕಾರನ್ನೇ ಕಳ್ಳರು ತಗೆದುಕೊಂಡು ಹೋಗಿದ್ದಾರೆ. ಹೌದು, ಹುಬ್ಬಳ್ಳಿಯ ಬಸವೇಶ್ವರ ನಗರದ ಲಕ್ಷ್ಮೀ ಲೇಔಟ್ನಲ್ಲಿ ವಾಸವಾಗಿದ್ದ ಉಲ್ಲಾಸ ದೊಡ್ಡಮನಿ ಎಂಬುವವರ ಮನೆಯನ್ನ ಲೂಟಿ ಮಾಡಿ ಮಾಲೀಕರ ಕಾರಲ್ಲಿಯೇ ಖದೀಮರು ಎಸ್ಕೇಪ್ ಆಗಿದ್ದಾರೆ. ಇನ್ನು ಕಳ್ಳರು ಹುಬ್ಬಳ್ಳಿಯಿಂದ ಬೆಳಗಾವಿ ಕಡೆಗೆ ಹೋಗಿರುವ ಬಗ್ಗೆ ಸುಳಿವು ಸಿಕ್ಕಿದ್ದು, ಬೆಳಗಾವಿಯಲ್ಲಿ ಹುಬ್ಬಳ್ಳಿ ಪೊಲೀಸರು ಶೋಧ ನಡೆಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ