ಕಳೆದ ಒಂದು ತಿಂಗಳಿನಿಂದ ಹಲವು ಕಾರಣಕ್ಕೆ ಸದಾ ಸುದ್ದಿಯಲ್ಲಿರುವ ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್ ವೇ(Bengaluru Mysuru expressway) ಟೋಲ್ ದರ ಹೆಚ್ಚಳ ಮಾಡಲಾಗಿದೆ. ಈಗಿರುವ ಟೋಲ್ ದರ ಹೆಚ್ಚಾಗಿದೆ ಎಂದು ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸುತ್ತಿರುವ ಮಧ್ಯೆಯೇ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ / NHAI) ಮತ್ತೆ ಶೇಕಡಾ 22ರಷ್ಟು ಟೋಲ್ ದರ (Bengaluru Mysuru expressway toll price) ಹೆಚ್ಚಿಸಿದೆ. ನಾಳೆಯಿಂದ ಅಂದರೆ ಏಪ್ರಿಲ್ 1ರಿಂದ ಈಗಿರುವ ಟೋಲ್ಗಿಂತ ಶೇಕಡಾ 22ರಷ್ಟು ದರ ದುಬಾರಿಯಾಗಲಿದೆ. ಟೋಲ್ ಸಂಗ್ರಹ ಆರಂಭವಾದ 17 ದಿನದಲ್ಲೇ ಮತ್ತೆ ಟೋಲ್ ದರ ಹೆಚ್ಚಳ ಮಾಡಿದ್ದು ಅಚ್ಚರಿಗೆ ಕಾರಣವಾಗಿದೆ. ಪರಿಷ್ಕೃತ ಟೋಲ್ ದರ ಪಟ್ಟಿ ಈ ಕೆಳಗಿನಂತಿದೆ ನೋಡಿ.
ಮಾರ್ಚ್ 14 ರಿಂದ ಟೋಲ್ ಸಂಗ್ರಹ ಆರಂಭವಾಗಿತ್ತು. ಇದೀಗ ರಾಷ್ಟ್ರೀಯ ಹೆದ್ದಾರಿ ಶುಲ್ಕ ನಿಯಮ 2008ರ ಪ್ರಕಾರ ದರ ಹೆಚ್ಚಳ ಮಾಡಲಾಗಿದ್ದು, ಬಿಡದಿ, ರಾಮನಗರ ವಾಹನ ಸವಾರರು ಸರ್ವಿಸ್ ರಸ್ತೆ ಬಳಸುವಂತೆ ಮನವಿ ಮಾಡಿದೆ. ಟೋಲ್ ದರ ಹೆಚ್ಚಳಕ್ಕೆ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದು, ಹೆದ್ದಾರಿ ಪ್ರಾಧಿಕಾರ ಜನಸಾಮಾನ್ಯರ ಲೂಟಿ ಮಾಡುತ್ತಿದೆ ಎಂದು ಕಿಡಿಕಾರುತ್ತಿದ್ದಾರೆ.
ಇದನ್ನೂ ಓದಿ: Bengaluru Mysuru Expressway: ಬೆಂಗಳೂರಿನಿಂದ ಮೈಸೂರಿಗೆ ತೆರಳಲು ಪರ್ಯಾಯ ಮಾರ್ಗಗಳಿವು
ಇನ್ನಷ್ಟು ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:12 am, Fri, 31 March 23