AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಭರ್ಜರಿ ಡಾನ್ಸ್!

Nikhil Kumaraswamy: ರಾಮನಗರದಲ್ಲಿ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ನಟ ನಿಖಿಲ್ ಕುಮಾರಸ್ವಾಮಿ ಮಕ್ಕಳೊಂದಿಗೆ ನೃತ್ಯ ಮಾಡಿರುವುದು ಎಲ್ಲರ ಗಮನ ಸೆಳೆದಿದೆ.

ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಭರ್ಜರಿ ಡಾನ್ಸ್!
ನೃತ್ಯ ಮಾಡುತ್ತಿರುವ ನಿಖಿಲ್ ಕುಮಾರಸ್ವಾಮಿ
TV9 Web
| Updated By: shivaprasad.hs|

Updated on: Jul 23, 2021 | 10:32 AM

Share

ರಾಮನಗರ: ಚಂದನವನದ ಭರವಸೆಯ ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ತಮ್ಮ ವಿಭಿನ್ನ ವ್ಯಕ್ತಿತ್ವದಿಂದಾಗಿ ಹೆಸರಾದವರು. ಜನರೊಂದಿಗೆ ಬೆರೆತು ಸಂತಸವನ್ನು ಹಂಚಿಕೊಳ್ಳುವುದರಿಂದ ಅವರು ಅಭಿಮಾನಿಗಳಿಗೆ ಮತ್ತಷ್ಟು ಹತ್ತಿರವಾಗಿದ್ದಾರೆ. ಅದೇ ರೀತಿ ಇತ್ತೀಚೆಗೆ ಅವರು ಮಕ್ಕಳೊಂದಿಗೆ ಸ್ಟೆಪ್ ಹಾಕಿದ್ದು ಎಲ್ಲರ ಗಮನ ಸೆಳೆದಿದೆ. ಪ್ರಸ್ತುತ ರಾಮನಗರದಲ್ಲಿ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ನಿಖಿಲ್ ಕುಮಾರಸ್ವಾಮಿ, ಎ.ಆರ್​.ಕೆ.ಡಾನ್ಸ್ ಕ್ಲಾಸ್​ಗೆ ಭೇಟಿ ನೀಡಿದ್ದರು. ಆಗ ಅಲ್ಲಿ ನೃತ್ಯಾಭ್ಯಾಸ ಮಾಡುತ್ತಿದ್ದ ಮಕ್ಕಳ ಒತ್ತಾಯಕ್ಕೆ ಮಣಿದು ಭರ್ಜರಿ ಸ್ಟೆಪ್ ಹಾಕಿದ್ದಾರೆ.

ನಿಖಿಲ್ ಕುಮಾರಸ್ವಾಮಿ ಹಾಗೂ ರಚಿತಾ ರಾಮ್ ಅಭಿನಯದ ಸೀತಾರಾಮ ಕಲ್ಯಾಣ ಚಿತ್ರದ ‘ನಿನ್ನ ರಾಜ ನಾನು, ನನ್ನ ರಾಣಿ ನೀನು’ ಹಾಡಿಗೆ ಮಕ್ಕಳನ್ನೂ ಸೇರಿಸಿಕೊಂಡು ನಿಖಿಲ್ ಕುಮಾರಸ್ವಾಮಿ ನೃತ್ಯ ಮಾಡಿದ್ದಾರೆ. ನಿಖಿಲ್​ಗೆ ಸಂತಸದಿಂದ ಸಾಥ್ ನೀಡಿರುವ ಮಕ್ಕಳು ತಾವೂ ಭರ್ಜರಿ ಸ್ಟೆಪ್ಸ್ ಹಾಕಿದ್ದಾರೆ. ನಿಖಿಲ್ ಡಾನ್ಸ್​ಗೆ ನೆರೆದಿರುವವರಿಂದ ಭರ್ಜರಿ ಸಿಳ್ಳೆ, ಚಪ್ಪಾಳೆಗಳು ಬಿದ್ದಿವೆ. ನಟನೊಂದಿಗೆ ಹೆಜ್ಜೆ ಹಾಕಿರುವುದಕ್ಕೆ ಮಕ್ಕಳಿಗೂ ಬಹಳ ಖುಷಿಯಾಗಿದೆ.

ನಿಖಿಲ್ ನೃತ್ಯ ಮಾಡುತ್ತಿರುವ ಚಿತ್ರಗಳು ಇಲ್ಲಿವೆ:

Nikhil Kumaraswami

ಮಕ್ಕಳೊಂದಿಗೆ ‘ನಿನ್ನ ರಾಜ ನಾನು’ ಹಾಡಿಗೆ ಭರ್ಜರಿ ನೃತ್ಯ ಮಾಡುತ್ತಿರುವ ನಿಖಿಲ್

Nikhil Kumaraswamy

ನೃತ್ಯಕ್ಕೆ ಪ್ರೇಕ್ಷಕರಿಂದ ಬಹುಪರಾಕ್!

ಇದನ್ನೂ ಓದಿ: ವಿಲನ್​ ಆದ ಬಾಲಿವುಡ್​ ಹೀರೋ; ಒಂದೇ ದೃಶ್ಯಕ್ಕೆ 10 ಕೋಟಿ ರೂ. ಸುರಿಯಲಿರುವ ನಿರ್ಮಾಪಕರು

ಇದನ್ನೂ ಓದಿ: ‘ಬದುಕಿರುವುದಕ್ಕೆ ನಾನು ಅದೃಷ್ಟವಂತೆ’; ಗಂಡನ ನೀಲಿ ಚಿತ್ರ ಹಗರಣ ಬಯಲಾದ ಬಳಿಕ ಶಿಲ್ಪಾ ಶೆಟ್ಟಿ ಮೊದಲ ಮಾತು

(Nikhil Kumaraswamy dance with students in Ramanagara)

ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಕೊಲೆ ಆರೋಪಿ ಮಹೇಶ್​ಗೆ ಗರ್ಭಧರಿಸಿದ್ದ ಹೆಂಡತಿ ಶುಭಾ ಮೇಲೆ ಸದಾ ಅನುಮಾನ
ಕೊಲೆ ಆರೋಪಿ ಮಹೇಶ್​ಗೆ ಗರ್ಭಧರಿಸಿದ್ದ ಹೆಂಡತಿ ಶುಭಾ ಮೇಲೆ ಸದಾ ಅನುಮಾನ
‘ಮ್ಯಾಕ್ಸ್ 2’ ಸಿನಿಮಾ ಯಾವಾಗ? ಅಪ್​ಡೇಟ್ ಕೊಟ್ಟ ಸುದೀಪ್
‘ಮ್ಯಾಕ್ಸ್ 2’ ಸಿನಿಮಾ ಯಾವಾಗ? ಅಪ್​ಡೇಟ್ ಕೊಟ್ಟ ಸುದೀಪ್
VIDEO: ಸುಈಈಈಈ... ಪ್ಯಾಟ್ ಕಮಿನ್ಸ್ ವಾಟ್ ಎ ಕ್ಯಾಚ್
VIDEO: ಸುಈಈಈಈ... ಪ್ಯಾಟ್ ಕಮಿನ್ಸ್ ವಾಟ್ ಎ ಕ್ಯಾಚ್