ಎಲ್ಲಿ ಕಳೆದುಕೊಂಡಿದ್ದೇನೋ..ಅಲ್ಲೇ ಹುಡುಕುತ್ತೇನೆ: ಶಪಥ ಮಾಡಿದ ನಿಖಿಲ್ ಕುಮಾರಸ್ವಾಮಿ

ಎನ್​ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಅ ವರು ಚನ್ನಪಟ್ಟಣ ಉಪಚುನಾವಣೆಯಲ್ಲೂ ಸೋಲುಕಂಡಿದ್ದಾರೆ. ಹೀಗಾಗಿ ಸತತ ಮೂರು ಚುನಾವಣೆಯಲ್ಲಿ ಸೋಲುಕಂಡಂತಾಗಿದೆ. ಇನ್ನು ಚನ್ನಪಟ್ಟಣ ಸೋಲಿನಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ಅಭಿಮಾನಿ ನಿವಾಸಕ್ಕೆ ನಿಖಿಲ್ ಭೇಟಿ ನೀಡಿದ್ದಾರೆ. ಇದೇ ವೇಳೆ ಒಂದು ಶಪಥ ಮಾಡಿದ್ದಾರೆ.

ಎಲ್ಲಿ ಕಳೆದುಕೊಂಡಿದ್ದೇನೋ..ಅಲ್ಲೇ ಹುಡುಕುತ್ತೇನೆ: ಶಪಥ ಮಾಡಿದ ನಿಖಿಲ್ ಕುಮಾರಸ್ವಾಮಿ
ಆತ್ಮಹತ್ಯೆಗೆ ಯತ್ನಿಸಿದ ಅಭಿಮಾಣಿ ನಿವಾಸಕ್ಕೆ ನಿಖಿಲ್ ಭೇಟಿ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ Edited By:

Updated on: Nov 24, 2024 | 5:25 PM

ರಾಮನಗರ, (ನವೆಂಬರ್ 24): ಮಂಡ್ಯ ಲೋಕಸಭಾ, ರಾಮನಗರ ವಿಧಾನಸಭೆ ಈಗ ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯಲ್ಲೂ ನಿಖಿಲ್​ ಕುಮಾರಸ್ವಾಮಿ ಸೋಲುಕಂಡಿದ್ದಾರೆ. ಸತತ ಮೂರು ಚುನಾವಣೆಗಳಲ್ಲಿ ನಿಖಿಲ್​ ಮುಖಭಂಗ ಅನುವಿಸಿದ್ದಾರೆ. ಆದರೂ ಎದೆಗುಂದದ ನಿಖಿಲ್ ಕುಮಾರಸ್ವಾಮಿ, ಎಲ್ಲಿ ಕಳೆದುಕೊಂಡಿದ್ದೇನೋ ಅಲ್ಲಿಯೇ ಹುಡುಕುತ್ತೇನೆ. ಇಲ್ಲಿಯೇ ಮುಂದಿನ ರಾಜಕೀಯ ಮುಂದುವರಿಸುತ್ತೇನೆ ಎಂದು ಘೋಷಿಸಿದರು.

ಆತ್ಮಹತ್ಯೆಗೆ ಯತ್ನಿಸಿದ್ದ ಚನ್ನಪಟ್ಟಣದ ಶ್ರೀರಾಂಪುರ ಗ್ರಾಮದ ಮಂಜುನಾಥ್​ ನಿವಾಸಕ್ಕೆ ಭೇಟಿ ನೀಡಿದರು. ಇದೇ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ನಿಖಿಲ್ ಕುಮಾರಸ್ವಾಮಿ, ಎಲ್ಲಿ ಕಳೆದುಕೊಂಡಿದ್ದೇನೋ ಅಲ್ಲಿಯೇ ಹುಡುಕುತ್ತೇನೆ. ಇಲ್ಲಿಯೇ ಮುಂದಿನ ರಾಜಕೀಯ ಮುಂದುವರಿಸುತ್ತೇನೆ. ಇಲ್ಲಿ ನಮ್ಮ ಪಕ್ಷಕ್ಕೆ ದೊಡ್ಡಮಟ್ಟದ ಅಭಿಮಾನ ಇದೇ. ಹುಚ್ಚು ಅಭಿಮಾನದಿಂದ ಜೆಡಿಎಸ್ ಪಕ್ಷವನ್ನ ಕಟ್ಟಿದ್ದಾರೆ. ಹಾಗಾಗಿ ನಾವು ಕಾರ್ಯಕರ್ತರ ಜೊತೆಗೆ ಇರುತ್ತೇವೆ. ಯಾರು ಸಹ ತಮ್ಮ ಕುಟುಂಬಕ್ಕೆ ನೋವು ಕೊಡಬೇಡಿ. ನಿಮ್ಮ ಜತೆಗೆ ಸದಾ ಇರುತ್ತೇನೆ. ಯಾರು ಸಹ ಕೆಟ್ಟ ನಿರ್ಧಾರ ಮಾಡಬೇಡಿ ಎಂದು ತಮ್ಮ ಅಭಿಮಾನಿಗಳಿಗೆ ಕಿವಿ ಮಾತು ಹೇಳಿದರು. ಈ ಮೂಲಕ ಮುಂದೆ ಚನ್ನಪಟ್ಟಣದಲ್ಲಿಯೇ ಸ್ಪರ್ಧೆ ಬಗ್ಗೆ ಪರೋಕ್ಷವಾಗಿ ಹೇಳಿದರು.


ಚುನಾವಣೆ ಎರಡು ದಿನ ಇರುವಾಗ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಹಣ ಹಾಕುತ್ತಾರೆ. ಇದನ್ನ ಚುನಾವಣಾ ಆಯೋಗ ಗಮನಿಸಬೇಕು . ನಾವು ಹೋರಾಟ ಮಾಡಲು ಹಲವು ವಿಚಾರಗಳಿವೆ. ಮುಂದೆ ನಾವು ಹೋರಾಟ ಮಾಡುತ್ತೇವೆ. ಈ ಚುನಾವಣೆಯಲ್ಲಿ ಹೆಚ್ಚಿನ ಮತಬಂದಿದೆ. ಆದರೆ ಒಂದು ಸಮುದಾಯದ ಮತಗಳು ಬಂದಿಲ್ಲ ಎಂದು ಮತ್ತೊಮ್ಮೆ ಮುಸ್ಲಿಂ ಸಮುದಾಯವನ್ನು ದೂರಿದ ನಿಖಿಲ್, ದೇವೇಗೌಡರ ಕೊಡುಗೆಯನ್ನ ನೆನಪಿಸಿಕೊಂಡಿಲ್ಲ. ನಮ್ಮ ಅವಶ್ಯಕತೆ ಅವರಿಗೆ ಇಲ್ಲ ಅನಿಸುತ್ತೆ. ಹಾಗಾಗಿ ನಾವು ಸಹ ಅವರನ್ನ ಬಿಟ್ಟು ಸ್ಟ್ರಾಟರ್ಜಿ ಮಾಡಬೇಕಾಗುತ್ತೆ ಎಂದು ಎಚ್ಚರಿ ಮಾತುಗಳನ್ನಾಡಿದರು.

ಮುಸ್ಲಿಂ ಸಮುದಾಯವನ್ನು ದೂರಿದ್ದ ನಿಖಿಲ್

ಮಾಜಿ ಪ್ರಧಾನಿ ದೇವೇಗೌಡರ ದೀರ್ಘಕಾಲದ ರಾಜಕಾರಣದಲ್ಲಿ ಸಾಕಷ್ಟು ಚುನಾವಣೆ ಎದುರಿಸಿದ್ದಾರೆ. ರಾಜಕೀಯ ಪರಿಸ್ಥಿತಿಗಳನ್ನು ಸಮಸ್ಥಿತಿಯಲ್ಲಿ ನೋಡುತ್ತಾರೆ. ಮುಂದೆ ಯಾವ ರೀತಿ ಪಕ್ಷ ಕಟ್ಟಬೇಕು ಅಂತಾ ಚರ್ಚೆ ಮಾಡಿದ್ದಾರೆ. ಚುನಾವಣೆಗಳಲ್ಲಿ ಬೈ ಎಲೆಕ್ಷನ್‌ಗಳಲ್ಲಿ, ಹಣ ಹಾಗೂ ತೋಳಬಲ ಹೆಚ್ಚಾಗಿರುವುದರಿಂದ ಫಲಿತಾಂಶ ನಾನು ಅಂದುಕೊಳ್ಳುವ ಹಾಗೆ ಬಂದಿಲ್ಲ. ಆ ಒಂದು ಸಮುದಾಯ ನಮ್ಮನ್ನು ಕೈ ಹಿಡಿಯಲಿಲ್ಲ ಎಂದು ಪರೋಕ್ಷವಾಗಿ ತಮ್ಮ ಸೋಲಿಗೆ ಮುಸ್ಲಿಂ ಸಮುದಾಯದ ಮತಗಳು ಬರದಿರುವುದೇ ಕಾರಣವೆಂದು ದೂರಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೈಯ್ಯದ್​ ನಿಜಾಮುದ್ದೀನ್​, ರಾಮನಗರ

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Loading...
Unable to load recommendations.
Follow Us