ಚನ್ನಪಟ್ಟಣ ಕ್ಷೇತ್ರದ ಎನ್​ಡಿಎ ಅಭ್ಯರ್ಥಿಯಾಗಿ ನಿಖಿಲ್ ಕಣಕ್ಕೆ? ಕುತೂಹಲ ಕೆರಳಿಸಿದ ಹೆಚ್​ಡಿ ಕುಮಾರಸ್ವಾಮಿ ನಡೆ

ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ಮೈತ್ರಿ ಅಭ್ಯರ್ಥಿಯಾಗಿ ಸಿ.ಪಿ. ಯೋಗೇಶ್ವರ್ ಅಖಾಡಕ್ಕೆ ಇಳಿಯೋದು ಪಕ್ಕಾ ಎನ್ನಲಾಗುತ್ತಿತ್ತು.ಆದರೆ ಇದೀಗ ಹೆಚ್​ಡಿ ಕುಮಾರಸ್ವಾಮಿ ಎಂಟ್ರಿಯಾಗಿದ್ದು ಅವರ ನಡೆ ಕುತೂಹಲ ಕೆರಳಿಸಿದೆ. ನಿಖಿಲ್ ಅವರು ಸ್ಪರ್ಧಿಸಬೇಕೆಂಬ ಕೂಗು ಕೇಳಿ ಬಂದಿದ್ದು ಹೆಚ್​ಡಿಕೆ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್​ ದಾಸ್​ ಅಗರ್ವಾಲ್ ಅವರನ್ನು ಭೇಟಿ ಮಾಡಿ ಯೋಗೇಶ್ವರ್ ಮನವೊಲಿಸಲು ಸಲಹೆ ನೀಡಿದ್ದಾರೆ.

ಚನ್ನಪಟ್ಟಣ ಕ್ಷೇತ್ರದ ಎನ್​ಡಿಎ ಅಭ್ಯರ್ಥಿಯಾಗಿ ನಿಖಿಲ್ ಕಣಕ್ಕೆ? ಕುತೂಹಲ ಕೆರಳಿಸಿದ ಹೆಚ್​ಡಿ ಕುಮಾರಸ್ವಾಮಿ ನಡೆ
ಹೆಚ್​ಡಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ
Follow us
Sunil MH
| Updated By: ಆಯೇಷಾ ಬಾನು

Updated on: Oct 07, 2024 | 10:37 AM

ರಾಮನಗರ, ಅ.07: ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ (Channapatna By Election) ಕೌಂಟ್​ಡೌನ್​ ಶುರುವಾಗಿದೆ. ಚನ್ನಪಟ್ಟಣ ಸಾಮ್ರಾಜ್ಯಾಧಿಪತಿಯಾಗೋಕೆ ಡಿಕೆ ಬ್ರದರ್ಸ್​, ಕುಮಾರಸ್ವಾಮಿ ಮಧ್ಯೆ ಕಾಳಗವೇ ನಡೀತಿದೆ. ಕ್ಷೇತ್ರದ ಮೇಲೆ ಹದ್ದಿನ ಕಣ್ಣಿಟ್ಟಿರೋ ಇಬ್ಬರು, ನಾನಾ ತಂತ್ರಗಾರಿಕೆಯನ್ನೇ ಮಾಡ್ತಿದ್ದಾರೆ. ಇದೀಗ ಚನ್ನಪಟ್ಟಣ ಅಖಾಡಕ್ಕೆ ಹೆಚ್​ಡಿ ಕುಮಾರಸ್ವಾಮಿ ಎಂಟ್ರಿ ಕೊಟ್ಟಿದ್ದು ಜೆಡಿಎಸ್​ನಲ್ಲಿ ಭರ್ಜರಿ ತಯಾರಿ ಶುರುವಾಗಿದೆ. ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಸ್ಪರ್ಧೆಗೆ ಒತ್ತಡ ಹೆಚ್ಚಿದೆ.

ಚನ್ನಪಟ್ಟಣದ ಕೋಡಂಬಳ್ಳಿ ಗ್ರಾಮದಲ್ಲಿ ಜೆಡಿಎಸ್​ ಕಾರ್ಯಕರ್ತರ ಜೊತೆ ಹೆಚ್​ಡಿ ಕುಮಾರಸ್ವಾಮಿಯವರು ಸಭೆ ನಡೆಸಿದ್ದು ಈ ವೇಳೆ ನಿಖಿಲ್ ಸ್ಪರ್ಧೆಗೆ ಕೂಗು ಕೇಳಿ ಬಂದಿದೆ. ನಿನ್ನೆ ಹೆಚ್​.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ನಿಖಿಲ್ ಸ್ಪರ್ಧೆ ಮಾಡುವಂತೆ ಕಾರ್ಯಕರ್ತರು ಬಹಿರಂಗವಾಗಿ ಒತ್ತಡ ಹಾಕಿದ್ರು. ಹೀಗಾಗಿ ಚನ್ನಪಟ್ಟಣದಲ್ಲಿ ನಿಖಿಲ್ ಸ್ಪರ್ಧೆ ಬಗ್ಗೆ ಚರ್ಚೆ ಜೋರಾಗಿದೆ. ಮತ್ತೊಂದೆಡೆ HD ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿಯವರು ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್​ ದಾಸ್​ ಅಗರ್ವಾಲ್ ಅವರನ್ನು ಭೇಟಿ ಮಾಡಿದ್ದಾರೆ. ಜೊತೆಗೆ ಹೆಚ್​ಡಿಕೆ, ನಿಖಿಲ್​ ಚನ್ನಪಟ್ಟಣ ಉಪ ಚುನಾವಣೆ ಬಗ್ಗೆ ಚರ್ಚಿಸಿದ್ದಾರೆ. ರಾಧಾಮೋಹನ್​ ದಾಸ್ ಅವರು ಕ್ಷೇತ್ರದ ವಿಚಾರದಲ್ಲಿ ಗೊಂದಲವಿಲ್ಲ ಎಂದಿದ್ದಾರೆ.

ಪರಿಷತ್​ ಬಿಜೆಪಿ ಸದಸ್ಯ ಸಿ.ಪಿ.ಯೋಗೇಶ್ವರ್ ಮನವೊಲಿಕೆ ಬಗ್ಗೆ ಚರ್ಚೆ ನಡೆದಿದೆ. JDS, ಬಿಜೆಪಿ ಒಟ್ಟಾಗಿ ಹೋದರೆ ಮಾತ್ರ ಕಾಂಗ್ರೆಸ್ ಸೋಲಿಸಬಹುದು. ಇಲ್ಲವಾದರೆ ಮತ ವಿಭಜನೆಯಾಗಿ ಕಾಂಗ್ರೆಸ್​​ ಲಾಭ ಪಡೆಯುತ್ತದೆ. ಸಿ.ಪಿ.ಯೋಗೇಶ್ವರ್​ ಮನವೊಲಿಸಲು H.D.ಕುಮಾರಸ್ವಾಮಿ ರಾಧಾಮೋಹನ್ ಅವರಿಗೆ ಸಲಹೆ ನೀಡಿದ್ದಾರೆ. ಹೀಗಾಗಿ‌‌‌ ಹೆಚ್​.ಡಿ.ಕುಮಾರಸ್ವಾಮಿ ನಡೆ ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ಬಿಜೆಪಿ ಶಾಸಕರ ಬೆನ್ನು ಬಿದ್ದ ಕಾಂಗ್ರೆಸ್; ಬಿಜೆಪಿ ಶಾಸಕರ ಪ್ರಕರಣದ ಮಾಹಿತಿ ಕಲೆಹಾಕಲು ತಯಾರಿ

ಇನ್ನು ಚನ್ನಪಟ್ಟಣದ ಕೋಡಂಬಳ್ಳಿ ಗ್ರಾಮದಲ್ಲಿ ಜೆಡಿಎಸ್​ ಕಾರ್ಯಕರ್ತರ ಜೊತೆ ಸಭೆ ಮಾಡಿದ ಹೆಚ್​ಡಿಕೆ, ದಲಿತಾಸ್ತ್ರವನ್ನೂ ಪ್ರಯೋಗಿಸಿದ್ರು, ದಲಿತ ಸಮುದಾಯದವರೇ ಕಾಂಗ್ರೆಸ್​ನವರನ್ನ ನಂಬಬೇಡಿ, ಮೋಸಗಾರರು ಅಂದ್ರು. ಕುಮಾರಸ್ವಾಮಿಗೆ ಎರಡೆರಡೂ ಟೆನ್ಷನ್ ಇದೆ. ಎನ್​ಡಿಎ ಅಭ್ಯರ್ಥಿಯ ಜೊತೆಗೆ ಮಗನ ರಾಜಕೀಯ ಭವಿಷ್ಯವೂ ಮುಖ್ಯ ಆಗಿದೆ. ಒಂದು ವೇಳೆ ಕ್ಷೇತ್ರ ಕೈ ತಪ್ಪಿದ್ರೆ ಚನ್ನಪಟ್ಟಣದಲ್ಲಿ ಹಿಡಿತ ಸಾಧಿಸೋಕೆ ಆಗಲ್ಲ, ಇನ್ನು ಜೆಡಿಎಸ್​ ಹಾಗೂ ಕಾಂಗ್ರೆಸ್​ಗೆ ನೇರಾ ನೇರ ಪೈಪೋಟಿ ಇರೋದ್ರಿಂದ ಸಿ.ಪಿ.ಯೋಗೇಶ್ವರ್​​ನ್ನೂ ಒಟ್ಟಾಗಿ ಕರೆದುಕೊಂಡು ಹೋಗೋದು ಸವಾಲು ಆಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್