ಮಂಡ್ಯ ಲೋಕಸಭಾ ಕಣದಿಂದ ಹಿಂದೆ ಸರಿದಿದ್ದ ನಿಖಿಲ್ ಕುಮಾರಸ್ವಾಮಿ ಯೂಟರ್ನ್​

ರಾಮನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಜೆಡಿಎಸ್​ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ನಾನು ಮಂಡ್ಯದಿಂದ ಸ್ಪರ್ಧೆ ಮಾಡಬೇಕು ಎನ್ನುವ ಭಾವನೆಯನ್ನು ಕಾರ್ಯಕರ್ತರು ವ್ಯಕ್ತಪಡಿಸಿದ್ದಾರೆ. ಕಳೆದ ಚುನಾವಣೆಯಲ್ಲಿ 5 ಲಕ್ಷಕ್ಕಿಂತ ಅಧಿಕ ಮತಗಳನ್ನ ಕೊಟ್ಟಿದ್ದರು. ಹಾಗಾಗಿ ಮಂಡ್ಯದ ಜನತೆಗೆ ನಾನು ಚಿರರುಣಿ. ಆದರೆ ಮೋದಿಯವರನ್ನ ಮತ್ತೊಮ್ಮೆ ಪ್ರಧಾನಿ ಮಾಡಲು ಹೋರಾಟ ಮಾಡಬೇಕಿದೆ ಎಂದು ಹೇಳಿದ್ದಾರೆ.

ಮಂಡ್ಯ ಲೋಕಸಭಾ ಕಣದಿಂದ ಹಿಂದೆ ಸರಿದಿದ್ದ ನಿಖಿಲ್ ಕುಮಾರಸ್ವಾಮಿ ಯೂಟರ್ನ್​
ನಿಖಿಲ್ ಕುಮಾರಸ್ವಾಮಿ
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ಗಂಗಾಧರ​ ಬ. ಸಾಬೋಜಿ

Updated on: Feb 16, 2024 | 4:32 PM

ರಾಮನಗರ, ಫೆಬ್ರವರಿ 16: ಪ್ರತಿ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರ (Mandya LokaSaba) ಇಂಡಿಯಾದಲ್ಲೇ ಅತೀ ಹೆಚ್ಚು ಹೈಪ್​ ಪಡೆದುಕೊಳ್ಳುತ್ತದೆ. ಈ ಬಾರಿ ಕೂಡ ಮತ್ತೆ ದೊಡ್ಡ ಮಟ್ಟದಲ್ಲಿ ಮಂಡ್ಯ ಕ್ಷೇತ್ರ ಚರ್ಚೆ ಆಗುತ್ತಿದೆ. ಹೀಗಾಗಿ ಮಂಡ್ಯ ಕ್ಷೇತ್ರದಿಂದ ಯಾರು ಕಣಕ್ಕಿಯುತ್ತಾರೆ ಎಂಬುವುದು ಕುತೂಹಲ ಮೂಡಿಸಿದೆ. ಸದ್ಯ ಈ ವಿಚಾರವಾಗಿ ಇತ್ತೀಚೆಗೆ ಜೆಡಿಎಸ್​ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನಾನು ಸ್ಪರ್ಧಿಸುವುದಿಲ್ಲ  ಎಂದು ಹೇಳಿದ್ದರು. ಆದರೆ ಇದೀಗ ನಾನು ಮಂಡ್ಯದಿಂದ ಸ್ಪರ್ಧಿಸಬೇಕೆಂದು ಒತ್ತಡ ಇದೆ. ನಮ್ಮ ಕಾರ್ಯಕರ್ತರು ತಮ್ಮ ಆಸೆ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ 5 ಲಕ್ಷಕ್ಕಿಂತ ಅಧಿಕ ಮತಗಳನ್ನ ಕೊಟ್ಟಿದ್ದರು. ಹಾಗಾಗಿ ಮಂಡ್ಯದ ಜನತೆಗೆ ನಾನು ಚಿರರುಣಿ. ನನ್ನ ಸ್ಪರ್ಧೆ ಬಗ್ಗೆ ಮುಂದೆ ಚರ್ಚೆ ಮಾಡೋಣ. ಮೋದಿ ಮತ್ತೊಮ್ಮೆ ಪ್ರಧಾನಿ ಮಾಡಲು ಹೋರಾಟ ಮಾಡಬೇಕಿದೆ. 28 ಕ್ಷೇತ್ರ ಗೆದ್ದು ಮೋದಿಗೆ ಉಡುಗೊರೆ ನೀಡುತ್ತೇವೆ ಎಂದು ಹೇಳಿದ್ದಾರೆ.

ರಾಜ್ಯದ 28 ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ಶೀಘ್ರದಲ್ಲೇ ಬಿಡುಗಡೆ ಆಗಲಿದೆ. ಪಟ್ಟಿ ಬಿಡುಗಡೆ ಸಂಬಂಧ ಬಿಜೆಪಿ ವರಿಷ್ಠರು ದೆಹಲಿಗೆ ಕರೆದಿದ್ದಾರೆ. ನಾನೂ ಕೂಡ ದೆಹಲಿಗೆ ಹೋಗುತ್ತಿದ್ದೇನೆ. ಬಿಜೆಪಿ ವರಿಷ್ಠರ ಜೊತೆ ಮಾತುಕತೆ ನಡೆಸಿ ತೀರ್ಮಾನ ಮಾಡುತ್ತೇವೆ.

ಇದನ್ನೂ ಓದಿ: ದೇವೇಗೌಡ್ರ ಸಭೆ ಅಂತ್ಯ: ಮಂಡ್ಯ ಜಿಡಿಎಸ್​ ಪಾಲು, ಅಭ್ಯರ್ಥಿ ಸಹ ಬಹುತೇಕ ಫೈನಲ್​!

ಹಳೇ ಮೈಸೂರು ಭಾಗದ ಎಲ್ಲಾ ಮುಖಂಡರನ್ನ ಕರೆದು ಸಭೆ ಮಾಡಿದ್ದೇನೆ. ಶೀಘ್ರದಲ್ಲೇ ಹಳೇ ಮೈಸೂರು ಭಾಗದ ಎಲ್ಲಾ ತಾಲೂಕುಗಳಿಗೂ ಪ್ರವಾಸ ಮಾಡುತ್ತೇನೆ. ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಗೆಲುವಿಗೆ ತಂತ್ರಗಾರಿಕೆ ಮಾಡುತ್ತೇವೆ ಎಂದಿದ್ದಾರೆ.

ಬಜೆಟ್ ಬಗ್ಗೆ ಆಶ್ಚರ್ಯ ಪಡುವಂತದ್ದು ಏನು ಇಲ್ಲ ಎಂದ ನಿಖಿಲ್ 

ಸಿದ್ದರಾಮಯ್ಯ ಬಜೆಟ್​ನಲ್ಲಿ ರಾಮನಗರ ಜಿಲ್ಲೆ ಅಭಿವೃದ್ಧಿಗೆ‌ ನಿರೀಕ್ಷಿತ ಪ್ರಮಾಣದಲ್ಲಿ ಅನುದಾನ ಬಿಡುಗಡೆ ಮಾಡದ ವಿಚಾರವಾಗಿ ಮಾತನಾಡಿದ್ದು, ಐದು ಗ್ಯಾರಂಟಿ ಯೋಜನೆ ಪೂರೈಸಲು ಸರ್ಕಾರ ಖಜಾನೆಯಲ್ಲಿ ಹಣ ಇಲ್ಲ. ಇಂತಹ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷ ಸಿಲುಕಿಸಿದೆ. ಹಾಗಾಗಿ ಬಜೆಟ್ ಬಗ್ಗೆ ಆಶ್ಚರ್ಯ ಪಡುವಂತದ್ದು ಏನು ಇಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಂಡ್ಯ ಲೋಕಸಭಾ ಅಭ್ಯರ್ಥಿ ಆಯ್ಕೆ ಕಸರತ್ತು: ನಿಖಿಲ್ ಮನವೋಲಿಸುವಂತೆ ನಾಯಕರ ಒತ್ತಾಯ

ರಾಮನಗರದಲ್ಲಿ ಹಿಂದಿನ ಶಾಸಕರು ನೀಡಿದ್ದ ಅನುದಾನವನ್ನೇ ಇಟ್ಟಕೊಂಡು ಈಗಿನ ಶಾಸಕರು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಹೋರಾಟ ಮಾಡಿ ಯಾವುದೇ ಅನುದಾನ ತಂದಿಲ್ಲ. ರಾಮನಗರ ಜಿಲ್ಲೆ ಹಾಗು ತಾಲೂಕು ಅಭಿವೃದ್ಧಿ ಪೂರಕವಾಗಿ ಇಲ್ಲಿನ ಶಾಸಕರಾಗಲಿ ಕಾಂಗ್ರೆಸ್ ಪಕ್ಷವಾಗಲಿ ಇಲ್ಲ ಎಂಬುದು ಜನರ ಅಭಿಪ್ರಾಯವಾಗಿದೆ ಎಂದು ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬಂಡೀಪುರದಲ್ಲಿ ಆನೆ ಮರಿಗೆ ಹೊಂಚು ಹಾಕಿದ್ದ ಹುಲಿಯನ್ನು ಓಡಿಸಿದ ತಾಯಾನೆ
ಬಂಡೀಪುರದಲ್ಲಿ ಆನೆ ಮರಿಗೆ ಹೊಂಚು ಹಾಕಿದ್ದ ಹುಲಿಯನ್ನು ಓಡಿಸಿದ ತಾಯಾನೆ
ಎರಡು ಕಡೆ ಫ್ರ್ಯಾಕ್ಚರ್ ಆಗಿರುವ ಕಾರಣ ಪ್ರಚಾರಕ್ಕೆ ಹೋಗಲಿಲ್ಲ: ರೇವಣ್ಣ
ಎರಡು ಕಡೆ ಫ್ರ್ಯಾಕ್ಚರ್ ಆಗಿರುವ ಕಾರಣ ಪ್ರಚಾರಕ್ಕೆ ಹೋಗಲಿಲ್ಲ: ರೇವಣ್ಣ
ಇಬ್ರಾಹಿಂ ಮತ್ತು ದೇವೇಗೌಡರ ನಡುವೆ ನಡೆದ ಚರ್ಚೆಯೇನು ಅಂತ ಗೊತ್ತಿಲ್ಲ: ಹರೀಶ್
ಇಬ್ರಾಹಿಂ ಮತ್ತು ದೇವೇಗೌಡರ ನಡುವೆ ನಡೆದ ಚರ್ಚೆಯೇನು ಅಂತ ಗೊತ್ತಿಲ್ಲ: ಹರೀಶ್
ದೇವೇಗೌಡ ಮತ್ತು ಕುಮಾರಸ್ವಾಮಿ ಯಾವತ್ತಿಗೂ ನನ್ನ ನಾಯಕರು: ರೇವಣ್ಣ
ದೇವೇಗೌಡ ಮತ್ತು ಕುಮಾರಸ್ವಾಮಿ ಯಾವತ್ತಿಗೂ ನನ್ನ ನಾಯಕರು: ರೇವಣ್ಣ
ಹಿಂದೆ ಯೋಗೇಶ್ವರ್ ಕಾಂಗ್ರೆಸ್ ಶಾಸಕರನ್ನು ಖರೀದಿಸುವ ಮಾತಾಡಿದ್ದರು: ಸುರೇಶ್
ಹಿಂದೆ ಯೋಗೇಶ್ವರ್ ಕಾಂಗ್ರೆಸ್ ಶಾಸಕರನ್ನು ಖರೀದಿಸುವ ಮಾತಾಡಿದ್ದರು: ಸುರೇಶ್
ಯಾದಗಿರಿ ತಲುಪಿ ರೈತರ ಸಂಕಷ್ಟ ಆಲಿಸುತ್ತಿರುವ ಬಸನಗೌಡ ಯತ್ನಾಳ್ ತಂಡ
ಯಾದಗಿರಿ ತಲುಪಿ ರೈತರ ಸಂಕಷ್ಟ ಆಲಿಸುತ್ತಿರುವ ಬಸನಗೌಡ ಯತ್ನಾಳ್ ತಂಡ
ಬೆಂಗಳೂರು: ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಬ್ಯಾಡ್ ಟಚ್, ವಿಡಿಯೋ ವೈರಲ್
ಬೆಂಗಳೂರು: ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಬ್ಯಾಡ್ ಟಚ್, ವಿಡಿಯೋ ವೈರಲ್
ಶಿಶುವನ್ನು ವಾಪಸ್ಸು ಪಡೆದ ತಂದೆತಾಯಿಗಳ ಸಂತೋಷಕ್ಕೆ ಪಾರವೇ ಇಲ್ಲ!
ಶಿಶುವನ್ನು ವಾಪಸ್ಸು ಪಡೆದ ತಂದೆತಾಯಿಗಳ ಸಂತೋಷಕ್ಕೆ ಪಾರವೇ ಇಲ್ಲ!
ಮುಸ್ಲಿಮರಿಗೆ ಮತದಾನದ ಹಕ್ಕು: ಸ್ವಾಮೀಜಿ ಹೇಳಿಕೆಗೆ ಮಹದೇವಪ್ಪ ಗರಂ
ಮುಸ್ಲಿಮರಿಗೆ ಮತದಾನದ ಹಕ್ಕು: ಸ್ವಾಮೀಜಿ ಹೇಳಿಕೆಗೆ ಮಹದೇವಪ್ಪ ಗರಂ
ಮೋಕ್ಷಿತಾ ಈಗ ಯುವರಾಣಿ; ಇಬ್ಭಾಗವಾದ ಬಿಗ್ ಬಾಸ್ ಮನೆ
ಮೋಕ್ಷಿತಾ ಈಗ ಯುವರಾಣಿ; ಇಬ್ಭಾಗವಾದ ಬಿಗ್ ಬಾಸ್ ಮನೆ