AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನಪಟ್ಟಣ ತಾಲೂಕಿನಲ್ಲಿ ಹಳ್ಳ ಹಿಡಿದಿದೆ ಹೈಟೆಕ್ ಖಾಸಗಿ ಬಸ್ ನಿಲ್ದಾಣ ಕಾಮಗಾರಿ

ರಾಮನಗರ: ಸಾರ್ವಜನಿಕರಿಗೆ ಅನುಕೂಲವಾಗಲಿ ಅಂತಾ ಆ ಖಾಸಗಿ ಬಸ್ ನಿಲ್ದಾಣದ ಕಾಮಗಾರಿಯನ್ನ ಕೈಗೆತ್ತಿಕೊಳ್ಳಲಾಗಿತ್ತು. ಆದ್ರೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ವರ್ಷಗಳು ಕಳೆದರೂ ಕಾಮಗಾರಿ ಪೂರ್ಣಗೊಂಡಿಲ್ಲ. ಇದು ಸಾರ್ವಜನಿಕರ ಕೋಪ ನೆತ್ತಿಗೆೇರುವಂತೆ ಮಾಡಿದೆ. ಮುಂದೆ ಸಾಗದ ಖಾಸಗಿ ಬಸ್ ನಿಲ್ದಾಣದ ಕಾಮಗಾರಿ! ರಾಷ್ಟೀಯ ಹೆದ್ದಾರಿ ಅಕ್ಕಪಕ್ಕದಲ್ಲಿ ಖಾಸಗಿ ಬಸ್ ನಿಲ್ಲಿಸುವಂತ ಪರಿಸ್ಥಿತಿ ನಿರ್ಮಾಣವಾಗಿರುವುದು ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ. ಇಲ್ಲಿ ಖಾಸಗಿ ಬಸ್‌ ನಿಲ್ದಾಣ ಇಲ್ಲದೆ ಇರೋದ್ರಿಂದ ಖಾಸಗಿ ಬಸ್‌ಗಳನ್ನು ರಸ್ತೆ ಪಕ್ಕದಲ್ಲಿ ನಿಲ್ಲಿಸುವ ಸ್ಥಿತಿ ನಿರ್ಮಾಣವಾಗಿದೆ. ಸುಮಾರು […]

ಚನ್ನಪಟ್ಟಣ ತಾಲೂಕಿನಲ್ಲಿ ಹಳ್ಳ ಹಿಡಿದಿದೆ ಹೈಟೆಕ್ ಖಾಸಗಿ ಬಸ್ ನಿಲ್ದಾಣ ಕಾಮಗಾರಿ
ಸಾಧು ಶ್ರೀನಾಥ್​
|

Updated on: Jan 09, 2020 | 3:48 PM

Share

ರಾಮನಗರ: ಸಾರ್ವಜನಿಕರಿಗೆ ಅನುಕೂಲವಾಗಲಿ ಅಂತಾ ಆ ಖಾಸಗಿ ಬಸ್ ನಿಲ್ದಾಣದ ಕಾಮಗಾರಿಯನ್ನ ಕೈಗೆತ್ತಿಕೊಳ್ಳಲಾಗಿತ್ತು. ಆದ್ರೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ವರ್ಷಗಳು ಕಳೆದರೂ ಕಾಮಗಾರಿ ಪೂರ್ಣಗೊಂಡಿಲ್ಲ. ಇದು ಸಾರ್ವಜನಿಕರ ಕೋಪ ನೆತ್ತಿಗೆೇರುವಂತೆ ಮಾಡಿದೆ.

ಮುಂದೆ ಸಾಗದ ಖಾಸಗಿ ಬಸ್ ನಿಲ್ದಾಣದ ಕಾಮಗಾರಿ! ರಾಷ್ಟೀಯ ಹೆದ್ದಾರಿ ಅಕ್ಕಪಕ್ಕದಲ್ಲಿ ಖಾಸಗಿ ಬಸ್ ನಿಲ್ಲಿಸುವಂತ ಪರಿಸ್ಥಿತಿ ನಿರ್ಮಾಣವಾಗಿರುವುದು ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ. ಇಲ್ಲಿ ಖಾಸಗಿ ಬಸ್‌ ನಿಲ್ದಾಣ ಇಲ್ಲದೆ ಇರೋದ್ರಿಂದ ಖಾಸಗಿ ಬಸ್‌ಗಳನ್ನು ರಸ್ತೆ ಪಕ್ಕದಲ್ಲಿ ನಿಲ್ಲಿಸುವ ಸ್ಥಿತಿ ನಿರ್ಮಾಣವಾಗಿದೆ. ಸುಮಾರು 7 ವರ್ಷಗಳ ಹಿಂದೆ ಆರಂಭವಾದ ಖಾಸಗಿ ಬಸ್ ನಿಲ್ದಾಣದ ಕಾಮಗಾರಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಅರ್ಧಕ್ಕೆ ನಿಂತಿದೆ. ಇದರಿಂದ ಬಸ್ ನಿಲ್ಲಿಸಲು ಜಾಗವಿಲ್ಲದೆ ನೂರಾರು ಖಾಸಗಿ ಬಸ್​ಗಳು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲುತ್ತಿದ್ದು, ಸಂಚಾರ ಅಸ್ತವ್ಯಸ್ಥವಾಗುತ್ತಿದೆ. ಅದರಲ್ಲೂ ವೀಕೆಂಡ್ ಹಾಗೂ ರಜೆ ದಿನಗಳಲ್ಲಿ ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್​ ಜಾಮ್ ಉಂಟಾಗುತ್ತಿದೆ.

ಅಂದಹಾಗೇ ಐದು ಎಕರೆ ವಿಸ್ತೀರ್ಣದಲ್ಲಿ ಸುಮಾರು 33 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ 7 ಅಂತಸ್ತಿನ ಹಡಗು ಮಾದರಿಯ ಬಸ್ ನಿಲ್ದಾಣ ನಿರ್ಮಾಣ ಮಾಡಲು ತೀರ್ಮಾನಿಸಲಾಗಿತ್ತು. ಆದ್ರೆ ಶಂಕುಸ್ಥಾಪನೆ ನಡೆದು ಏಳು ವರ್ಷಗಳೇ ಕಳೆಯುತ್ತ ಬಂದ್ರು, ಬಸ್ ನಿಲ್ದಾಣದ ಕಾಮಗಾರಿ ಮಾತ್ರ ಪ್ರಾರಂಭವಾಗುವ ಲಕ್ಷಣಗಳು ಕಾಣುತ್ತಿಲ್ಲ. ಕೇವಲ ಬಸ್ ನಿಲ್ದಾಣದ ಜಾಗದಲ್ಲಿ ಮಣ್ಣು ತೆಗೆದು, ಗುಂಡಿ ಮಾಡಿದ್ದಾರೆ. ಅದು ಬಿಟ್ಟರೆ ಬೇರೆ ಏನೂ ಮಾಡಿಲ್ಲ. ಹೀಗಾಗಿ ಈ ಜಾಗ ಹಾಳು ಕೊಂಪೆಯಾಗಿದೆ. ಹೀಗಾಗಿ ಈ ಬಗ್ಗೆ ಜನಪ್ರತಿನಿಧಿಗಳು ಗಮನ ಹರಿಸಬೇಕು ಅನ್ನೋದು ಜನರ ಒತ್ತಾಯವಾಗಿದೆ.

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​