AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೆಡೆ ಮೆಡಿಕಲ್ ಕಾಲೇಜು ಹೋರಾಟ, ಮತ್ತೊಂದೆಡೆ ಚಿಕಿತ್ಸೆ ಪಡೆಯಲು ಪರದಾಟ: ಡಿಸಿಎಂ ತವರು ಜಿಲ್ಲಾಸ್ಪತ್ರೆಯ ಅವಾಂತರದಿಂದ ರೋಗಿಗಳ ಒದ್ದಾಟ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ತವರು ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ಮತ್ತು ಸಿಬ್ಬಂದಿ ಕೊರತೆ ಇದೆ. ಸುಸಜ್ಜಿತ ಆಸ್ಪತ್ರೆ ಇದ್ದರೂ, ಸಮರ್ಪಕ ವೈದ್ಯಕೀಯ ಸಿಬ್ಬಂದಿ ಇಲ್ಲದೇ ರೋಗಿಗಳು ಪರದಾಡುತ್ತಿದ್ದಾರೆ.

ಒಂದೆಡೆ ಮೆಡಿಕಲ್ ಕಾಲೇಜು ಹೋರಾಟ, ಮತ್ತೊಂದೆಡೆ ಚಿಕಿತ್ಸೆ ಪಡೆಯಲು ಪರದಾಟ: ಡಿಸಿಎಂ ತವರು ಜಿಲ್ಲಾಸ್ಪತ್ರೆಯ ಅವಾಂತರದಿಂದ ರೋಗಿಗಳ ಒದ್ದಾಟ
ರಾಮನಗರ ಜಿಲ್ಲಾಸ್ಪತ್ರೆ
ಪ್ರಶಾಂತ್​ ಬಿ.
| Edited By: ವಿವೇಕ ಬಿರಾದಾರ|

Updated on: Sep 17, 2023 | 1:26 PM

Share

ರಾಮನಗರ ಸೆ.17: ರಾಮನಗರಕ್ಕೆ (Ramnagar) ಮಂಜೂರಾಗಿದ್ದ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ವೈದ್ಯಕೀಯ ಕಾಲೇಜನ್ನು ಡಿ.ಕೆ ಸಹೋದರರು (DK Brothers) ಕನಕಪುರಕ್ಕೆ (Kanakapura) ಕೊಂಡೊಯ್ದಿದಕ್ಕೆ ಭಾರಿ ವಿರೋಧ ವ್ಯಕ್ತವಾಗುತ್ತಿದೆ. ಈ ವಿಚಾರವಾಗಿ ರಾಮನಗರ ನಿವಾಸಿಗಳು ರಾಮನಗರ ಬಂದ್​ಗೆ ಕರೆ ನೀಡಿದ್ದರು. ಅಲ್ಲದೇ ಪ್ರತಿಪಕ್ಷಗಳಾದ ಬಿಜೆಪಿ (BJP) ಮತ್ತು ಜೆಡಿಎಸ್ (JDS)​ ಡಿಕೆ ಸಹೋದರರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಆದರೆ ಒಂದೆಡೆ ಮೆಡಿಕಲ್ ಕಾಲೇಜು ಹೋರಾಟ, ಮತ್ತೊಂದೆಡೆ ಚಿಕಿತ್ಸೆ ಪಡೆಯಲು ರೋಗಿಗಳು ಪರದಾಡುತ್ತಿದ್ದಾರೆ.

ಹೌದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ತವರು ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ಮತ್ತು ಸಿಬ್ಬಂದಿ ಕೊರತೆ ಇದೆ. ಸುಸಜ್ಜಿತ ಆಸ್ಪತ್ರೆ ಇದ್ದರೂ, ಸಮರ್ಪಕ ವೈದ್ಯಕೀಯ ಸಿಬ್ಬಂದಿ ಇಲ್ಲದೇ ರೋಗಿಗಳು ಪರದಾಡುತ್ತಿದ್ದಾರೆ. ವೈದ್ಯರು, ನರ್ಸ್​​​​ಗಳು, ಸ್ವಚ್ಚತಾ ಸಿಬ್ಬಂದಿ ಕೊರತೆಯಿಂದ ಸರಿಯಾದ ಚಿಕಿತ್ಸೆ ಸಿಗದ ರೋಗಿಗಳು ನರಳಾಡುತ್ತಿದ್ದಾರೆ.

ಇದನ್ನೂ ಓದಿ: ರಾಮನಗರದಿಂದ ಕನಕಪುರಕ್ಕೆ ಮೆಡಿಕಲ್ ಕಾಲೇಜು ಸ್ಥಳಾಂತರದ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಜಿಲ್ಲಾಸ್ಪತ್ರೆಯಲ್ಲಿನ 39 ವೈದ್ಯ ಹುದ್ದೆಯಲ್ಲಿ 17 ಜನ ವೈದ್ಯರ ಹುದ್ದೆ ಖಾಲಿ ಇವೆ. 109 ಬಿ.ಗ್ರೂಪ್ ಸಿಬ್ಬಂದಿ ಇರಬೇಕಾದ ಆಸ್ಪತ್ರೆಯಲ್ಲಿ ಕೇವಲ 61 ನೌಕರರು ಮಾತ್ರ ಇದ್ದಾರೆ. ಸ್ಟಾಫ್ ನರ್ಸ್, ಸೀನಿಯರ್ ನರ್ಸ್ ಸೇರಿದಂತೆ 52 ಹುದ್ದೆಗಳು ಖಾಲಿ ಇವೆ. ಇದರಿಂದ ತುರ್ತುಪರಿಸ್ಥಿತಿ ಸಂದರ್ಭದಲ್ಲಿ ಆಸ್ಪತ್ರೆಗೆ ಬಂದ  ರೋಗಿಗಳಿಗೆ ಚಿಕಿತ್ಸೆ ದೊರೆಯದೆ, ಬೆಂಗಳೂರು, ಮಂಡ್ಯಕ್ಕೆ ಹೋಗುತ್ತಿದ್ದಾರೆ.

ನ್ಯೂರೋ ಸರ್ಜನ್, ನ್ಯೂರೊ ಫಿಜಿಷಿಯನ್, ಕಾರ್ಡಿಯಾಲಜಿ, ಫಲ್ಮೋನಾಲಜಿ ಚಿಕಿತ್ಸೆ ನೀಡಲು ವೈದ್ಯರಿಲ್ಲ. ಇನ್ನು ವೆಂಟಿಲೇಟರ್​​ಗಳಿದ್ದರೂ, ಅದರ ನಿರ್ವಾಹಣೆಗೆ ಬೇಕಾದ ನಿಯೋನೆಟಲಾಜಿಸ್ಟ್, ಟ್ರೈನ್ಡ್ ಸ್ಟಾಫ್​​ನರ್ಸ್ ಕೂಡ ಇಲ್ಲ. ಒಟ್ಟು 30 ಜನ ಸ್ಟಾಫ್ ನರ್ಸ್ ಹುದ್ದೆ ಭರ್ತಿಯಾಗಬೇಕಿದೆ. ಕೂಡಲೇ ಜಿಲ್ಲಾಸ್ಪತ್ರೆಯ ಸಿಬ್ಬಂದಿ ಸಮಸ್ಯೆಯನ್ನು ಬಗೆಹರಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಪ್ರಶಾಂತ್​ ಬಿ.
ಪ್ರಶಾಂತ್​ ಬಿ.

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು