ಆಪರೇಷನ್​ ಕಾಡಾನೆ ಸಕ್ಸಸ್​​, ಸಾಕಾನೆಗಳ ಸಹಾಯದಿಂದ ಒಂಟಿ ಸಲಗ ಸೆರೆ: ಲಾರಿಗೆ ಹತ್ತಿಸುವ ವೇಳೆ ಮುರಿದ ದಂತ

ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಅಮಾಯಕರನ್ನು ಬಲಿ ಪಡೆದಿದ್ದ ಕಾಡಾನೆಯನ್ನು ಸಾಕಾನೆಗಳ ಸಹಾಯದಿಂದ ತೆಂಗಿನಕಲ್ಲು ಅರಣ್ಯ ‌ಪ್ರದೇಶದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಕೊನೆಗೂ ಸೆರೆ ಹಿಡಿಯುವಲ್ಲಿ ಇಂದು ಯಶಸ್ವಿಯಾಗಿದ್ದಾರೆ.

Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Jun 08, 2023 | 4:46 PM

ರಾಮನಗರ: ಜಿಲ್ಲೆಯಲ್ಲಿ ಕಾಡಾನೆಗಳ (Wild Elephant) ಹಾವಳಿ ಮಿತಿ ಮೀರಿದೆ. ಅದರಲ್ಲೂ ಚನ್ನಪಟ್ಟಣ ತಾಲೂಕಿನ ಗ್ರಾಮೀಣ ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಇತ್ತೀಚಿಗೆ ಇಬ್ಬರು ಅಮಾಯಕರನ್ನ ಕಾಡಾನೆಯೊಂದು ಬಲಿ ಪಡೆದಿತ್ತು. ಹಾಗಾಗಿ ಈ ಕಾಡಾನೆಯನ್ನು ಹಿಡಿಯಲೇಬೇಕು ಎಂದು ನಿರ್ಧರಿಸಿ, ಸಾಕಾನೆಗಳ ನೆರವಿನಿಂದ ಕಳೆದ ಮೂರು ದಿನಗಳಿಂದ ಕಾರ್ಯಾಚರಣೆ ನಡೆಸಿ ಸೆರೆಹಿಡಿಯಲಾಗಿದೆ. ಸೆರೆ ಹಿಡಿದ 40 ವರ್ಷದ ಗಂಡಾನೆಯನ್ನ ಲಾರಿಗೆ ಹತ್ತಿಸುವ ವೇಳೆ ಅದರ ದಂತ ಮುರಿದಿದೆ. ಕೋಪದಲ್ಲಿ ಕ್ರೇನ್​ಗೆ ಕಾಡಾನೆ ಗುದ್ದಿದೆ.

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಅರಳಾಳುಸಂದ್ರ ಗ್ರಾಮದ ಬಳಿಯ ತೆಂಗಿನಕಲ್ಲು ಅರಣ್ಯ ‌ಪ್ರದೇಶದಲ್ಲಿ ಕಾಡಾನೆಯನ್ನು ಕೊನೆಗೂ ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿಯುವಲ್ಲಿ ಇಂದು ಯಶಸ್ವಿಯಾಗಿದ್ದಾರೆ. ಸಾಕಾನೆಗಳಾದ ಅಭಿಮನ್ಯು, ಅರ್ಜುನ, ಭೀಮ, ಶ್ರೀಕಂಠ, ಮಹೇಂದ್ರ ಸಹಾಯದಿಂದ ಕಾಡಾನೆ ಸೆರೆಗೆ ಕಾರ್ಯಾಚರಣೆ ನಡೆಸಲಾಯಿತು.

ಇದನ್ನೂ ಓದಿ: Ramanagara News: ಅಕಾಲಿಕ ಮಳೆಯಿಂದ ಮಾವು ಬೆಳೆ ನಾಶ; ಸಂಕಷ್ಟದಲ್ಲಿ ಬೆಳೆಗಾರರು

ಇಂದು ಬೆಳಗ್ಗೆ ತೆಂಗಿನಕಲ್ಲು ಅರಣ್ಯ ಪ್ರದೇಶದಲ್ಲಿ ಕಾಡಾನೆ ಪತ್ತೆಯಾಗಿತ್ತು. ಹೀಗಾಗಿ ಅರವಳಿಕೆ ಮದ್ದು ನೀಡಿ ಸೆರೆ ಹಿಡಿಯಲಾಯಿತು. ಆನಂತರ ಸಾಕಾನೆಗಳ ಸಹಾಯದಿಂದ ಕಾಡಾನೆಯನ್ನ ಕ್ರೇನ್ ಸಹಾಯದಿಂದ ಲಾರಿಗೆ ಹತ್ತಿಸಲು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮುಂದಾಗಿದ್ರು. ಆದರೆ ಈ ವೇಳೆ ಸಾಕಷ್ಟು ವಿರೋಧ ವ್ಯಕ್ತಪಡಿಸಿತ್ತು.

ಅಲ್ಲದೆ ಇದರಿಂದ ಕೋಪಗೊಂಡ ತಪ್ಪಿಸಿಕೊಳ್ಳಲು ಪ್ರಯತ್ನ ಪಟ್ಟಿತ್ತು. ಅಲ್ದದೆ ಸಿಟ್ಟಿನಲ್ಲಿ ಕ್ರೇನ್​ಗೆ ಗುದ್ದಿತ್ತು. ಇದರಿಂದ ಆನೆಯ ದಂತವೇ ಮುರಿದು ಬಿದ್ದಿತ್ತು. ಆದರೂ ಸಹ ಸಾಕಾನೆಗಳ ಸಹಾಯದಿಂದ ಕಾಡಾನೆಯನ್ನ ಲಾರಿಗೆ ಹತ್ತಿಸಲಾಯಿತು.

ಇದನ್ನೂ ಓದಿ: Storm Effect: ರಾಮನಗರದಲ್ಲಿ ಬಿರುಗಾಳಿ ಸಹಿತ‌ ಮಳೆಗೆ ಬೆಚ್ಚಿ ಬಿದ್ದ ಜನ; ವಿಡಿಯೋ ವೈರಲ್​

ಅಂದಹಾಗೆ ಕಾಡಾನೆ ದಾಳಿಗೆ ಐದು ದಿನಗಳ ಅಂತರದಲ್ಲಿ ಇಬ್ಬರು ಸಾವನ್ನಪ್ಪಿದರು. ಮೇ 30ರಂದು ಕನಕಪುರ ತಾಲೂಕಿನ ಹೊಸಕಬ್ಬಾಳು ಗ್ರಾಮದ ಬಳಿ ಜಮೀನಿಗೆ ತೆರಳುತ್ತಿದ್ದ ಕಬ್ಬಾಳು ಗ್ರಾಮದ ಕಾಳಯ್ಯ(60) ಎಂಬಾತ ಬಲಿಯಾಗಿದ್ರೆ, ಜೂನ್ 3ರಂದು ಚನ್ನಪಟ್ಟಣ ತಾಲೂಕಿನ ವಿರೂಪಸಂದ್ರ ಗ್ರಾಮದ ಬಳಿ ಮಾವಿನ ತೋಟ ಕಾವಲು ಕಾಯುತ್ತಿದ್ದ, ಕನಕಪುರ ಮೂಲದ ವೀರಭದ್ರಯ್ಯ(56) ಎಂಬಾತನನ್ನು ಕಾಡಾನೆ ಬಲಿ ಪಡೆದಿತ್ತು.

ಹೀಗಾಗಿ ಐದು ಆನೆಗಳನ್ನ ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ರು. ಒಂದು ಕಾಡಾನೆ ಸೆರೆಗೆ ಅನುಮತಿ ಸಿಕ್ಕಿತ್ತು. ಅದರಂತೆ ಇದೀಗ ಇಬ್ಬರನ್ನ ಬಲಿ ಪಡೆದ ಪುಂಡಾನೆ ಸೆರೆಯಾಗಿದ್ದು, ಉಳಿದ ನಾಲ್ಕು ಕಾಡಾನೆಗಳನ್ನ ಮತ್ತೆ ಎರಡು ದಿನಗಳ ನಂತರ ಕಾರ್ಯಾಚರಣೆ ನಡೆಸಿ ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಪ್ಲಾನ್ ಮಾಡಿಕೊಂಡಿದ್ದಾರೆ.

ಇದೀಗ ಸೆರೆ ಸಿಕ್ಕಿರುವ ಕಾಡಾನೆಗೆ ರೇಡಿಯೋ ಕಾಲರ್ ಕೂಡ ಅಳವಡಿಸಿದ್ದು, ಅದರ ಚಲನ-ವಲನದ ಬಗ್ಗೆಯೂ ಕೂಡ ನಿಗಾ ಹಿಡಲು ಪ್ಲಾನ್ ಮಾಡಲಾಗಿದೆ. ಸದ್ಯ ಎಲ್ಲರ ನಿದ್ದೆಗೆಡಿಸಿದ ಕಾಡಾನೆಯ ಸೆರೆಯಿಂದ ಹತ್ತಾರು ಹಳ್ಳಿಯ ರೈತರು ಸದ್ಯದ ಮಟ್ಟಿಗೆ ನಿಟ್ಟಿಸಿರು ಬಿಟ್ಟಿದ್ದಾರೆ. ಉಳಿದ ಆನೆಗಳನ್ನು ಕೂಡ ಸೆರೆ ಹಿಡಿಯುವಂತೆ ಒತ್ತಾಯ ಮಾಡಿದ್ದಾರೆ.

ವರದಿ: ಪ್ರಶಾಂತ್ ಹುಲಿಕೆರೆ, ಟಿವಿ9 ರಾಮನಗರ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:42 pm, Thu, 8 June 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್