ಅಕ್ರಮವಾಗಿ ನಾಡಬಂದೂಕು ತಯಾರಿಸುತ್ತಿದ್ದ ಇಬ್ಬರ ಬಂಧನ; ಅಕ್ಕೂರು ಪೊಲೀಸರಿಂದ 4 ಬಂದೂಕು, 1 ಬೈಕ್ ಜಪ್ತಿ

ಚನ್ನಪಟ್ಟಣ ‌ತಾಲೂಕಿನ ಅಕ್ಕೂರು ಪೊಲೀಸರ ಕಾರ್ಯಾಚರಣೆ ವೇಳೆ ಅಕ್ರಮ ಬೆಳಕಿಗೆ ಬಂದಿದ್ದು, ಬಂಧಿತರಿಂದ 4 ಬಂದೂಕು, ಬಂದೂಕು ತಯಾರಿಸುವ ವಸ್ತುಗಳು ಮತ್ತು ಒಂದು ಬೈಕ್ ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಅಕ್ರಮವಾಗಿ ನಾಡಬಂದೂಕು ತಯಾರಿಸುತ್ತಿದ್ದ ಇಬ್ಬರ ಬಂಧನ; ಅಕ್ಕೂರು ಪೊಲೀಸರಿಂದ 4 ಬಂದೂಕು, 1 ಬೈಕ್ ಜಪ್ತಿ
ಬಂಧಿತ ಆರೋಪಿಗಳು
Follow us
TV9 Web
| Updated By: preethi shettigar

Updated on:Dec 19, 2021 | 9:55 AM

ರಾಮನಗರ: ಅಕ್ರಮವಾಗಿ ನಾಡಬಂದೂಕು ತಯಾರಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ (Arrest) ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಅಂಬಾಡಹಳ್ಳಿಯಲ್ಲಿ ನಡೆದಿದೆ. ಅಂಬಾಡಹಳ್ಳಿ ಗ್ರಾಮದ ಶ್ರೀಧರ್, ಮಳವಳ್ಳಿ ತಾಲೂಕಿನ ಕುಂತೂರು ಗ್ರಾಮದ ರಮೇಶ್ ಬಂಧಿತ ಆರೋಪಿಗಳು. ಚನ್ನಪಟ್ಟಣ ‌ತಾಲೂಕಿನ ಅಕ್ಕೂರು ಪೊಲೀಸರ ಕಾರ್ಯಾಚರಣೆ ವೇಳೆ (Karnataka police) ಅಕ್ರಮ ಬೆಳಕಿಗೆ ಬಂದಿದ್ದು, ಬಂಧಿತರಿಂದ 4 ಬಂದೂಕು, ಬಂದೂಕು ತಯಾರಿಸುವ ವಸ್ತುಗಳು ಮತ್ತು ಒಂದು ಬೈಕ್ ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಕೋಲಾರ: ಮಚ್ಚಿನಿಂದ ಹೊಡೆದು ವ್ಯಕ್ತಿ ಹತ್ಯೆ; ಆರೋಪಿ ಪರಾರಿ ಮಚ್ಚಿನಿಂದ ಹೊಡೆದು ವ್ಯಕ್ತಿಯೊರ್ವರನ್ನು ಕೊಲೆ ಮಾಡಿ, ಆರೋಪಿ ಪರಾರಿಯಾದ ಘಟನೆ ಕೋಲಾರ ತಾಲೂಕಿನ ವೇಮಗಲ್‌ ಗ್ರಾಮದಲ್ಲಿ ನಡೆದಿದೆ. ವೇಮಗಲ್ ಗ್ರಾಮದ ಸಿ‌ ಬ್ಲಾಕ್ ನಿವಾಸಿ ವೆಂಕಟೇಶ್ ಅಲಿಯಾಸ್ ವೆಂಕಿ(33) ಕೊಲೆಯಾದ ವ್ಯಕ್ತಿ. ನಿನ್ನೆ ತಡರಾತ್ರಿ ಘಟನೆ ನಡೆದಿದ್ದು, ವೇಮಗಲ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಬೆಂಗಳೂರು: ಕಾಟನ್ ಪೇಟೆಯ ರಸ್ತೆಯಲ್ಲಿ ಬೈಕ್ ಕಳ್ಳರ ಕೈಚಳಕ ಹಾಡಹಗಲೇ ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಹ್ಯಾಂಡಲ್ ಲಾಕ್ ಮುರಿದು ಕಳ್ಳರು ಬೈಕ್​ ಕದ್ದೊಯ್ದ ಘಟನೆ ಬೆಂಗಳೂರಿನ ಕಾಟನ್ ಪೇಟೆಯ 32 ನೇ ಕ್ರಾಸ್ ಜನನಿಬಿಡ ರಸ್ತೆಯಲ್ಲಿ ನಡೆದಿದೆ. ಪಲ್ಸರ್ ಬೈಕ್​ನಲ್ಲಿ ಬಂದ ಇಬ್ಬರು ಕಳ್ಳರು ಬೈಕ್ ಕಳವು ಮಾಡಿದ್ದಾರೆ. ಓರ್ವ ಹೊಂಚುಹಾಕಿ ಬೈಕ್ ಬಳಿ ಬಂದು ಸಿಗ್ನಲ್ ಮಾಡುತ್ತಿದ್ದಂತೆ ಮತ್ತೋರ್ವ ಸ್ಥಳಕ್ಕೆ ಬಂದಿದ್ದಾನೆ. ಇಬ್ಬರು ಫುಟ್ ಪಾತ್ ಮೇಲೆ ಕೆಲ‌ನಿಮಿಷ ಹೊಂಚುಹಾಕಿ ಬೈಕ್ ಹ್ಯಾಂಡಲ್ ಲಾಕ್ ಮುರಿದು, ಬೈಕ್​ ಜತೆ ಪರಾರಿಯಾಗಿದ್ದಾರೆ. ಸದ್ಯ ಈ ಎಲ್ಲಾ ದೃಶ್ಯ ಸಿಸಿ‌ ಕ್ಯಾಮಾರದಲ್ಲಿ ಸೆರೆಯಾಗಿದೆ. ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಚಿತ್ರದುರ್ಗ: ತುರುವನೂರು ಪೊಲೀಸರಿಂದ ಐವರು ಡಕಾಯಿತರ ಬಂಧನ ಬಂಗಾರಕ್ಕನಹಳ್ಳಿಯಲ್ಲಿ ನಡೆದಿದ್ದ ಡಕಾಯಿತಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ತುರುವನೂರು ಪೊಲೀಸರು ಐವರನ್ನು ಬಂಧಿಸಿದ್ದಾರೆ. ಆರೋಪಿಗಳು 1 ಲಕ್ಷ ನಗದು, ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿ ಪಾರಿಯಾಗಿದ್ದರು. ಬೆಂಗಳೂರು ಮೂಲದ ಅಭಿಷೇಕ್, ವಿಕಾಸ್, ವಜ್ರಮಣಿ, ಚಿಕ್ಕಗೊಂಡನಹಳ್ಳಿಯ ತಿಪ್ಪೇಸ್ವಾಮಿ, ಶಿವು ಬಂಧಿತ ಆರೋಪಿಗಳು.

ನೆಲಮಂಗಲ: ಚಿಕ್ಕಬಾಣಾವರ ಬಳಿಯ ಎಜಿಬಿ ಲೇಔಟ್‌ನಲ್ಲಿ ಬೈಕ್ ಕಳ್ಳತನ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣಾವರ ಬಳಿಯ ಎಜಿಬಿ ಲೇಔಟ್​ನಲ್ಲಿ ರಾಯಲ್ ಎನ್ಫೀಲ್ಡ್  ಬೈಕ್​ ಕಳುವಾಗಿದೆ. ಕೇರಳ ಮೂಲದ ವಿಧ್ಯಾರ್ಥಿ ಮಹಮ್ಮದ್ ಅವರಿಗೆ ಸೇರಿದ ಬೈಕ್ ಕಳ್ಳತನವಾಗಿದೆ. ಒಂದು ಲಕ್ಷಕ್ಕೂ ಹೆಚ್ಚು ಬೆಲೆಬಾಳುವ ಬೈಕ್ ಕಳಕೊಂಡು ವಿದ್ಯಾರ್ಥಿ ಕಂಗಾಲಾಗಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:

ಯಾದಗಿರಿಯಲ್ಲಿ ಅಕ್ರಮವಾಗಿ ಮಾರಲು ಮುಂದಾಗಿದ್ದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್ ಜಪ್ತಿ

ಗೆಳತಿ ಮನೆಯಲ್ಲಿ ಕಳ್ಳತನ; ಬಟ್ಟೆ ಬದಲಿಸುವ ನೆಪದಲ್ಲಿ ಚಿನ್ನಾಭರಣ ಹೊತ್ತು ಪರಾರಿ

Published On - 9:35 am, Sun, 19 December 21

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ