ಡಿಕೆ ಶಿವಕುಮಾರ್ ತವರು ರಾಮನಗರ ಜಿಲ್ಲೆಯಲ್ಲಿ ಫುಲ್ ಅಲರ್ಟ್ ಆಗಿರಲು ಪೊಲೀಸರಿಗೆ ಸೂಚನೆ: ಕಾರಣವೇನು?

ಡಿಕೆ ಶಿವಕುಮಾರ್ ಅವರ ತವರು ಜಿಲ್ಲೆ ರಾಂನಗರದಲ್ಲಿ ಫುಲ್ ಅಲರ್ಟ್ ಆಗಿರುವಂತೆ ಪೊಲೀಸರಿಗೆ ಹಿರಿ ಪೊಲೀಸ್ ಅಧಿಕಾರಿಗಳು ಸೂಚನೆ ರವಾನಿಸಿದ್ದಾರೆ.

ಡಿಕೆ ಶಿವಕುಮಾರ್ ತವರು ರಾಮನಗರ ಜಿಲ್ಲೆಯಲ್ಲಿ ಫುಲ್ ಅಲರ್ಟ್ ಆಗಿರಲು ಪೊಲೀಸರಿಗೆ ಸೂಚನೆ: ಕಾರಣವೇನು?
ಡಿಕೆ ಶಿವಕುಮಾರ್
Follow us
ರಮೇಶ್ ಬಿ. ಜವಳಗೇರಾ
|

Updated on:May 17, 2023 | 2:15 PM

ಬೆಂಗಳೂರು/ರಾಮನಗರ: ಸಿದ್ದರಾಮಯ್ಯನವರಿಗೆ ಮುಖ್ಯಮಂತ್ರಿ ಸ್ಥಾನ ಬಹುತೇಕ ಫಿಕ್ಸ್ ಆಗಿದ್ದು, ಕಾಂಗ್ರೆಸ್ ಹೈಕಮಾಂಡ್​ ಅಧಿಕೃತ ಘೋಷಣೆ ಮಾಡುವುದೊಂದೇ ಬಾಕಿ ಇದೆ. ಕೊನೆ ಕ್ಷಣದ ವರೆಗೂ ಸಿಎಂ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಅವರಿಗೆ ಬಹುತೇಕ ಸಿಎಂ ಸ್ಥಾನ ಕೈತಪ್ಪಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಡಿಕೆ ಶಿವಕುಮಾರ್ ಅವರ ತವರು ಜಿಲ್ಲೆ ರಾಮನಗರದಲ್ಲಿ ಹೈ ಅಲರ್ಟ್ ಆಗಿರುವಂತೆ ಪೊಲೀಸರಿಗೆ ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಕೈತಪ್ಪಿದ್ದರಿಂದ ಅವರ ಅಭಿಮಾನಿಗಳು ಗಲಾಟೆ ಮಾಡುವ ಸಾಧ್ಯತೆಗಳು ಇವೆ. ಇದ್ದರಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಗೆ ಸಂದೇಶ ರವಾನಿಸಲಾಗಿದೆ.

ಇದನ್ನೂ ಓದಿ: ಸಿಎಂ ಹುದ್ದೆಗೆ ಪೈಪೋಟಿ ನಡೆಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೆ ಬಿಗ್ ರಿಲೀಫ್

ರಾಮನಗರ ಜಿಲ್ಲೆಗೆ ಹೆಚ್ಚುವರಿ ಪೊಲೀಸ್ ತುಕಡಿ ನಿಯೋಜನೆ ಮಾಡಲಾಗಿದೆ. ಬೆಂಗಳೂರು, ಮೈಸೂರಿನಿಂದ 6 ಕೆಎಸ್​ಆರ್​ಪಿ ತುಕಡಿ ಆಗಮನವಾಗಿದ್ದು, ಫುಲ್ ಬಂದೋಬಸ್ತ್​ ಮಾಡಲಾಗಿದೆ. ಈ ಹಿಂದೆ ಡಿಕೆ ಶಿವಕುಮಾರ್ ಅವರು ಜೈಲಿಗೆ ಹೋದ ಸಂದರ್ಭದಲ್ಲಿ ರಾಮನಗರ ಜಿಲ್ಲೆಯಲ್ಲಿ ದೊಡ್ಡ ಮಟ್ಟದ ಅಹಿತಕರ ಘಟನೆಗಳು ನಡೆದಿದ್ದವು. ಇದೀಗ  ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ತಪ್ಪುವ ಸಾಧ್ಯತೆ ಹಿನ್ನೆಲೆಯಲ್ಲಿ ಗಲಾಟೆಗಳಾಗುವ ಸಾಧ್ಯತೆಗಳಿವೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ರಾಮನಗರದಲ್ಲಿ ಪೊಲೀಸರ ಅಲರ್ಟ್ ಆಗಿದ್ದಾರೆ.

ಡಿಕೆ ಶಿವಕುಮಾರ್ ಅವರು ಕೂಡ ಸಿಎಂ ಸ್ಥಾನಕ್ಕಾಗಿ ಪ್ರಬಲ ಪೈಪೋಟಿ ನಡೆಸಿದ್ದರು. ಆದರೆ ಹೈಕಮಾಂಡ್ ಸಿದ್ದರಾಮಯ್ಯನವರನ್ನು ಸಿಎಂ ಎಂದು ಘೋಷಣೆ ಮಾಡಿದೆ. ಇನ್ನು ಡಿಕೆ ಶಿವಕುಮಾರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಸಾಧ್ಯತೆ ಇದೆ. ಇದರ ಜೊತೆಗೆ ಇಂಧನ ಹಾಗೂ ನೀರಾವರಿ ಖಾತೆ ಮೇಲೆ ನೀಡುವ ಒಪ್ಪಂದವಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ (ಮೇ 18) ಸಿದ್ದರಾಮಯ್ಯನವರ ಜೊತೆಗೆ ಡಿಕೆ ಶಿವಕುಮಾರ್ ಕೂಡ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.

ಕರ್ನಾಟಕದಲ್ಲಿ ಭಾರಿ ಜಯಭೇರಿ ಬಾರಿಸಿದರೂ ಮುಖ್ಯಮಂತ್ರಿ ಹೆಸರನ್ನು ಘೋಷಿಸಲು ಕಾಂಗ್ರೆಸ್ ಪಕ್ಷಕ್ಕೆ ಕಷ್ಟವಾಗಿತ್ತು. ಕಳೆದ ಮೂರು ದಿನಗಳಿಂದ ಪಕ್ಷದಲ್ಲಿ ಮುಖ್ಯಮಂತ್ರಿ ಹೆಸರು ಚರ್ಚೆಯಾಗುತ್ತಿದ್ದು, ಇನ್ನೂ ನಿರ್ಧಾರವಾಗಿರಲಿಲ್ಲ, ಸದ್ಯ ಫೈನಲ್ ಆಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಹೆಸರು ಕೇಳಿಬರುತ್ತಿತ್ತು. ಕಳೆದ ಕೆಲವು ತಿಂಗಳುಗಳಲ್ಲಿ, ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿಯಾಗಬೇಕೆಂದು ಸ್ಪಷ್ಟವಾಗಿ ಸೂಚಿಸಿದ್ದರು. ಆದರೆ ಪಕ್ಷದ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಮಣೆ ಹಾಕಿದೆ.

Published On - 1:57 pm, Wed, 17 May 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ