ಗಾಂಜಾ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ; ಬಂಧಿತರಿಂದ ಲಕ್ಷಾಂತರ ರೂ. ಮೌಲ್ಯದ ಗಾಂಜಾ ಗಿಡ ವಶ

ಬೆಂಗಳೂರು ದಕ್ಷಿಣ ತಾಲೂಕಿನ ತಾತಗುಣಿ ಗ್ರಾಮದ ಚೇತನ್ ಹಾಗೂ ಧ್ರುವರಾಜ್ ಬಂಧಿತ ಆರೋಪಿಗಳು. ಬಂಧಿತರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಮೂರು ಕೆಜಿ ಗಾಂಜಾ ಗಿಡ ವಶಪಡಿಸಿಕೊಳ್ಳಲಾಗಿದೆ.

ಗಾಂಜಾ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ; ಬಂಧಿತರಿಂದ ಲಕ್ಷಾಂತರ ರೂ. ಮೌಲ್ಯದ ಗಾಂಜಾ ಗಿಡ ವಶ
ಗಾಂಜಾ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ರಾಮನಗರ: ಗಾಂಜಾ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ರಾಮನಗರದಲ್ಲಿ ನಡೆದಿದೆ. ಬೆಂಗಳೂರು ದಕ್ಷಿಣ ತಾಲೂಕಿನ ಕಗ್ಗಲೀಪುರ ಠಾಣೆ ಪೊಲೀಸರ ಕಾರ್ಯಾಚರಣೆ ವೇಳೆ ಗಾಂಜಾ ಸಾಗಿಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರು ದಕ್ಷಿಣ ತಾಲೂಕಿನ ತಾತಗುಣಿ ಗ್ರಾಮದ ಚೇತನ್ ಹಾಗೂ ಧ್ರುವರಾಜ್ ಬಂಧಿತ ಆರೋಪಿಗಳು. ಬಂಧಿತರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಮೂರು ಕೆಜಿ ಗಾಂಜಾ ಗಿಡ ವಶಪಡಿಸಿಕೊಳ್ಳಲಾಗಿದೆ.

ಬೆಂಗಳೂರು: ಪೆಟ್ರೋಲ್ ಬಂಕ್ ಬಳಿ ಮೊಬೈಲ್ ಕಳ್ಳತನ
ಬೆಂಗಳೂರಿನ ಭುವನೇಶ್ವರಿ ನಗರದ ಮುಖ್ಯ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಬಳಿ ಮೊಬೈಲ್ ಕದ್ದು ಕಳ್ಳ ಪರಾರಿಯಾಗಿದ್ದಾನೆ. ಭಾರತ್ ಪೆಟ್ರೋಲಿಯಂ ಬಂಕ್​ನ ಸಿಬ್ಬಂದಿ ಬಳಸುವ ಮೊಬೈಲ್ ಅನ್ನು ಕಳ್ಳ ಹೊತ್ತೋಯ್ದಿದ್ದಾನೆ. ಸದ್ಯ ಈ ಕೃತ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಮೊಬೈಲ್ ಕಳ್ಳತನ ಸಂಬಂಧ ಅಮೃತಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು: ನೇತ್ರಾವತಿ ನದಿಯಲ್ಲಿ ತೇಲಿಬಂದ ಅಪರಿಚಿತ ಮಹಿಳೆ ಶವ
ಮಂಗಳೂರಿನ ಬೋಳೂರು ವ್ಯಾಪ್ತಿಯಲ್ಲಿನ ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮೃತದೇಹ ಸಮುದ್ರ ಸೇರುತ್ತಿರುವುದನ್ನು ಮೀನುಗಾರರು ತಪ್ಪಿಸಿದ್ದಾರೆ. ಸದ್ಯ ಮೃತದೇಹ ಮೇಲಕ್ಕೆತ್ತಿ ಪಾಂಡೇಶ್ವರ ಠಾಣಾ ಪೊಲೀಸರಿಗೆ ಹಸ್ತಾಂತರ ಮಾಡಲಾಗಿದ್ದು, ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಾಂಜಾ ನಶೆಯಲ್ಲಿ ರಸ್ತೆ ಬದಿ ನಿಂತಿದ್ದ ವಾಹನಗಳ ಗಾಜು ಪುಡಿ ಪುಡಿ
ಕಳೆದ ಕೆಲ ದಿನಗಳ ಹಿಂದೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪುಂಡನೋರ್ವನ ಅಟ್ಟಹಾಸಕ್ಕೆ 5 ವಾಹನಗಳು ಜಖಂ ಆಗಿದ್ದ ಘಟನೆ ನಡೆದಿತ್ತು. ಹುಡುಗಿ ಕೈ ಕೊಟ್ಳು ಅಂತ ಕುಡಿದ ಮತ್ತಿನಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳ ಗಾಜನ್ನು ಪುಡಿ ಪುಡಿ ಮಾಡಿ ಯುವಕನೋರ್ವ ವಿಕೃತಿ ಮೆರೆದಿದ್ದ. ಅದರಂತೆ ಮತ್ತೊಂದು ಘಟನೆ ನಡೆದಿದೆ. ಗಾಂಜಾ ನಶೆಯಲ್ಲಿದ್ದ ಪುಂಡರು ಬೆಂಗಳೂರಿನಲ್ಲಿ ಅಟ್ಟಹಾಸ ಮೆರೆದಿದ್ದಾರೆ.

ನಗರದ ವಿಜಯನಗರದ ಆರ್‌ಪಿಸಿ ಲೇಔಟ್‌ನಲ್ಲಿ ತಡರಾತ್ರಿ ರಸ್ತೆ ಬದಿ ನಿಲ್ಲಿಸಿದ್ದ 5ಕ್ಕೂ ಹೆಚ್ಚು ವಾಹನಗಳ ಗಾಜು ಪುಡಿ ಪುಡಿ ಮಾಡಿ ಎಸ್ಕೇಪ್ ಆಗಿದ್ದಾರೆ. ಇದೇ ಏರಿಯಾದ ಮೂವರು ಪುಂಡರು ಗಾಂಜಾ ನಶೆಯಲ್ಲಿ ವಾಹನಗಳ ಗಾಜನ್ನು ಪುಡಿ ಪುಡಿ ಮಾಡಿದ್ದಾರೆ. ಸ್ಥಳೀಯರ ವಿರೋಧ ಹಿನ್ನೆಲೆ ಕಲ್ಲುತೂರಿ ಪುಂಡರು ಪರಾರಿಯಾಗಿದ್ದಾರೆ. ಪುಂಡರ ಅಟ್ಟಹಾಸದ ದೃಶ್ಯಾವಳಿ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸಿಸಿ ಟಿವಿ ದೃಶ್ಯಾವಳಿ ವಶಕ್ಕೆ ಪಡೆದು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಇದನ್ನೂ ಓದಿ:
ಚಿಕ್ಕಮಗಳೂರು ಪೊಲೀಸರ ಬೃಹತ್​ ಬೇಟೆ; 1 ಕ್ವಿಂಟಲ್​ಗೂ ಹೆಚ್ಚು ತೂಕದ ಒಣ ಗಾಂಜಾ ತರಕಾರಿ ಗಾಡಿಯಲ್ಲಿ ಪತ್ತೆ, ಮೂವರು ವಶಕ್ಕೆ

ಬೀದರ್: ಸಂತಪುರ ಪೊಲೀಸರಿಂದ 592 ಕೆಜಿ ಗಾಂಜಾ ಜಪ್ತಿ, ನಾಲ್ವರ ಬಂಧನ

Click on your DTH Provider to Add TV9 Kannada