ರಾಮನಗರ: ಪ್ರತಿಷ್ಠಿತ ಕಂಪನಿಯಲ್ಲಿ ದೇಶದ್ರೋಹ ಕೃತ್ಯ, ಪಾಕಿಸ್ತಾನ ಪರ ಬರಹ

ರಾಮನಗರದ ಒಂದು ಪ್ರತಿಷ್ಠಿತ ಕಂಪನಿಯ ಶೌಚಾಲಯದ ಗೋಡೆಯ ಮೇಲೆ "ಪಾಕಿಸ್ತಾನ ಜೈ" ಮತ್ತು ಕನ್ನಡಿಗರನ್ನು ಅವಮಾನಿಸುವ ಬರಹಗಳು ಕಾಣಿಸಿಕೊಂಡಿವೆ. ಈ ದೇಶದ್ರೋಹದ ಕೃತ್ಯಕ್ಕೆ ಕಂಪನಿ ಉದ್ಯೋಗಿಗಳಿಗೆ ಸುತ್ತೋಲೆ ಹೊರಡಿಸಿದೆ ಮತ್ತು ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ. ಕನ್ನಡಪರ ಸಂಘಟನೆಗಳು ಈ ಘಟನೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿವೆ ಮತ್ತು ಕಿಡಿಗೇಡಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿವೆ.

ರಾಮನಗರ: ಪ್ರತಿಷ್ಠಿತ ಕಂಪನಿಯಲ್ಲಿ ದೇಶದ್ರೋಹ ಕೃತ್ಯ, ಪಾಕಿಸ್ತಾನ ಪರ ಬರಹ
ಪಾಕಿಸ್ತಾನ ಪರ ಬರಹ
Edited By: ವಿವೇಕ ಬಿರಾದಾರ

Updated on: Mar 16, 2025 | 12:12 PM

ರಾಮನಗರ, ಮಾರ್ಚ್​ 16: ಪ್ರತಿಷ್ಠಿತ ಕಂಪನಿಯಲ್ಲಿ ಯಾರೋ ಕಿಡಿಗೇಡಿಗಳು ದೇಶದ್ರೋಹದ (Treason) ಕೃತ್ಯ ಎಸಗಿದ್ದಾರೆ. ಕಂಪನಿಯ ಶೌಚಾಲಯದ ಗೋಡೆಯ ಮೇಲೆ ಪಾಕಿಸ್ತಾನಜೈಎಂದು ಬರೆಯಲಾಗಿದೆ. ಅಲ್ಲದೇ, ಕನ್ನಡಿಗರು ಸೂಮಕ್ಕಳು ಎಂದು ಬರಹ ಇದೆ. ಬಿಡಿದಿ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಬರಹವನ್ನು ಯಾರು, ಯಾವಾಗ ಬರೆದಿದ್ದಾರೆ ಎಂಬುವುದಕ್ಕೆ ಸ್ಪಷ್ಟತೆ ಇಲ್ಲ. ಆದರೆ, ಘಟನೆ ಮಾರ್ಚ್​ 15 ರಂದು ಬೆಳಕಿಗೆ ಬಂದಿದೆ. ಈ ಬಗ್ಗೆ ಕಂಪನಿ ಉದ್ಯೋಗಿಗಳಿಗೆ ಸುತ್ತೋಲೆ ಹೊರಡಿಸಿದೆ. ಈ ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಕಂಪನಿ ಹೇಳಿದೆ.

ಕಂಪನಿಯ ಸುತ್ತೋಲೆಯಲ್ಲಿ ಏನಿದೆ?

ಕೆಲವು ಕಿಡಿಗೇಡಿ ಉದ್ಯೋಗಿಗಳು PU ಲೈನಿನ ಶೌಚಾಲಯಗಳಲ್ಲಿ ಪಾಕಿಸ್ತಾನ ಜೈ, ಕನ್ನಡಿಗರು ಸೂ,…. ಮಕ್ಕಳು ಎಂದು ಬರೆದಿರುತ್ತಾರೆ. ಈ ರೀತಿಯ ಬರವಣಿಗೆಗಳು ಉದ್ಯೋಗಿಗಳ ಮನಸ್ಸಿನಲ್ಲಿ ಅಶಾಂತಿಯನ್ನು ಸೃಷ್ಟಿಸುವುದಲ್ಲದೇ ಸಂಸ್ಥೆಯಲ್ಲಿ ತೀವ್ರ ರೀತಿಯ ಅಶಿಸ್ತಿನ ಬೆಳವಣಿಗೆಗೆ ಕಾರಣವಾಗುತ್ತದೆ. ಮುಂದುವರೆದು ಈ ರೀತಿಯ ಬರವಣಿಗೆಗಳು ದೇಶದ ಕಾನೂನಿನ ಚೌಕಟ್ಟಿನಲ್ಲಿ ದೇಶದ್ರೋಹಿಅಪರಾಧಗಳಡಿಯಲ್ಲಿ ವರ್ಗೀಕೃತವಾಗಿರುತ್ತವೆ.

ಈ ರೀತಿಯಾದ ಕೃತ್ಯಗಳು ಮುಂದುವರೆದಲ್ಲಿ, ಮಾಹಿತಿಯನ್ನು ಪೊಲೀಸರ ಗಮನಕ್ಕೆ ತರುವುದರೊಂದಿಗೆ ಜೈಲು ವಾಸವಾಗುವವರೆಗೂ ಕಿಡಿಗೇಡಿಗಳನ್ನು ಬಿಡುವುದಿಲ್ಲ ಮತ್ತು ಬೆರಳಚ್ಚು ಹಾಗೂ ಬರವಣಿಗೆ ತಜ್ಞರ ಗಮನಕ್ಕೆ ತಂದು ಈ ಕೃತ್ಯ ಹೆಸಗುವವರನ್ನು ಕಂಡುಹಿಡಿದು ಹೆಚ್ಚಿನ ಮಟ್ಟದಲ್ಲಿ ಶಿಕ್ಷೆಯಾಗುವವರೆಗೂ ಆಡಳಿತ ಮಂಡಳಿಯು ಕಾಳಜಿ ವಹಿಸಲು ಸಿದ್ಧವಿರುತ್ತದೆ.

ಇದನ್ನೂ ಓದಿ
ಬಿಜೆಪಿ ಮುಖಂಡನ ವಿಡಿಯೋ: 20 ಲಕ್ಷಕ್ಕೆ ಡಿಮ್ಯಾಂಡ್‌, ಮಾಯಾಂಗನೆ ಲಾಕ್
ಕಾರವಾರದಲ್ಲಿ SSLC ವಿದ್ಯಾರ್ಥಿ, ತುಮಕೂರಿನಲ್ಲಿ PUC ವಿದ್ಯಾರ್ಥಿನಿ ಸಾವು
ಕುಣಿಗಲ್: ದೊಡ್ಡಕೆರೆಯಲ್ಲಿ ಮಹಿಳಾ ಟೆಕ್ಕಿ ಮೃತದೇಹ ಪತ್ತೆ, ಆತ್ಮಹತ್ಯೆ ಶಂಕೆ
ಪ್ರೀತಿಸಿ ಮದ್ವೆಯಾಗಿದ್ದ ಪತ್ನಿ ಸ್ನೇಹಿತನ ಜತೆ ಪರಾರಿ: ಪತಿ ದುರಂತ ಸಾವು

ಆದುದರಿಂದ, ಎಲ್ಲಾ ವರ್ಗದ ಉದ್ಯೋಗಿಗಳು ಮೇಲೆ ತಿಳಿಸಿದ ವಿಷಯವನ್ನು ಸೂಕ್ಷ್ಮವಾಗಿ ಗಮನಕ್ಕೆ ತೆಗೆದುಕೊಳ್ಳಬೇಕೆಂದು ಈ ಮೂಲಕ ತಿಳಿಸಲಾಗಿದೆ. ಹಾಗೂ ಯಾವುದೇ ಉದ್ಯೋಗಿಯು ಈ ರೀತಿಯ ಕಿಡಿಗೇಡಿ ಕೃತ್ಯ ಮಾಡುವಾಗ ಸಿಕ್ಕಿಬಿದ್ದಲ್ಲಿ ಅತ್ಯಂತ ಕಠಿಣ ಶಿಸ್ತಿನ ಕ್ರಮ ಎದುರಿಸಬೇಕಾಗುತ್ತದೆ ಎಂದು ಈ ಮೂಲಕ ಆಡಳಿತ ಮಂಡಳಿಯು ತಿಳಿಸುತ್ತದೆಎಂದು ಕಂಪನಿ ಸುತ್ತೋಲೆ ಹೊರಡಿಸಿದೆ.

ಇದನ್ನೂ ಓದಿ: ಕರ್ನಾಟಕದ ಇತಿಹಾಸದಲ್ಲಿ ಅತೀ ದೊಡ್ಡ ಕಾರ್ಯಾಚರಣೆ: 75 ಕೋಟಿ ರೂ. ಮೌಲ್ಯದ ಡ್ರಗ್ಸ್​ ಜಪ್ತಿ

ಕಂಪನಿ ಮುಂಭಾಗ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ

ಘಟನೆಯನ್ನು ಖಂಡಿಸಿ ಕಂಪನಿ ಎದುರು ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಭಯೋತ್ಪಾದಕ ಕೃತ್ಯ ಎಸಗಿರುವ ಕಿಡಿಗೇಡಿ ವಿರುದ್ಧ ಗಂಭೀರ ಪ್ರಕರಣ ದಾಖಲು ಮಾಡಬೇಕು. ಕಿಡಿಗೇಡಿಯನ್ನು ಗಡಿಪಾರು ಮಾಡಬೇಕು. ಪ್ರಕರಣ ಮುಚ್ಚಾಕಲು ಯತ್ನಿಸಿದ್ದ ಆಡಳಿತ ಮಂಡಲಿ ವಿರುದ್ಧ ಕೂಡ ಕ್ರಮ ಕೈಗೊಳ್ಳಬೇಕು ಎಂದು ಕನ್ನಡಪರ ಸಂಘಟನೆ ಮುಖಂಡ ಕನ್ನಡ ಮಂಜು ಆಗ್ರಹಿಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:09 pm, Sun, 16 March 25

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us