AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲ ಕೊಡಿಸುವುದಾಗಿ ಮಹಿಳೆಯನ್ನ ಲಾಡ್ಜ್​ಗೆ ಕರೆದೊಯ್ದ, ಬಿಜೆಪಿ ಮುಖಂಡ ಅರೆಸ್ಟ್

ಸಾಲ‌ ಕೊಡಿಸುವುದಾಗಿ ಮಹಿಳೆಯನ್ನು ಲಾಡ್ಜ್​ಗೆ ಕರೆದುಕೊಂಡು ಹೋಗಿ ಹಲ್ಲೆ ಮಾಡಿ ಅತ್ಯಾಚಾರ ಎಸಗಿರುವ ಆರೋಪ ಬಿಜೆಪಿ ಮುಖಂಡನ ವಿರುದ್ಧ ಕೇಳಿಬಂದಿದ್ದು, ಮಹಿಳೆ ನೀಡಿದ ದೂರಿನ ಮೇರೆಗೆ ಪೊಲೀಸರು, ಬಿಜೆಪಿ ಮುಖಂಡನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ನಾಪತ್ತೆಯಾಗಿರುವ ಮತ್ತೋರ್ವ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಹಾಗಾದ್ರೆ, ಮಹಿಳೆ ನೀಡಿದ ದೂರಿನಲ್ಲೇನಿದೆ ಎನ್ನುವ ವಿವರ ಇಲ್ಲಿದೆ .

ಸಾಲ ಕೊಡಿಸುವುದಾಗಿ ಮಹಿಳೆಯನ್ನ ಲಾಡ್ಜ್​ಗೆ ಕರೆದೊಯ್ದ, ಬಿಜೆಪಿ ಮುಖಂಡ ಅರೆಸ್ಟ್
ಬಿಜೆಪಿ ಮುಖಂಡ ಚಲುವರಾಮು
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on: Dec 27, 2024 | 7:26 PM

Share

ರಾಮನಗರ, (ಡಿಸೆಂಬರ್ 27): ಸಾಲ ಕೊಡಿಸುವುದಾಗಿ ಹೇಳಿ ಲಾಡ್ಜ್​ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆಯೋರ್ವಳು ಬಿಜೆಪಿ ಮುಖಂಡನ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಬ್ಯೂಟಿಷನ್ ಕೆಲಸ ಮಾಡಿಕೊಂಡಿರುವ ವಿವಾಹಿತ ಮಹಿಳೆಗೆ ಸಾಲ ಕೊಡಿಸುವುದಾಗಿ ನಂಬಿಸಿ ರಾಮನಗರದ ಲಾಡ್ಜ್​ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದ್ದು. ಮಹಿಳೆ ನೀಡಿದ ಈ ದೂರಿನ ಮೇರೆಗೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಸೂರನಹಳ್ಳಿಯ ಬಿಜೆಪಿ ಮುಖಂಡ ಚಲುವರಾಮು ಎನ್ನುವರನ್ನು ಸಾತನೂರು ಪೊಲೀಸರು ಬಂಧಿಸಿದ್ದಾರೆ.

ತನ್ನ ಗಂಡನ ಕಾಗದ ಪತ್ರ ಸರಿಪಡಿಸಲು ಹಣದ ಅವಶ್ಯಕತೆ ಇತ್ತು. ಆಗ ಸಾಲ‌ ಕೊಡಿಸುವುದಾಗಿ ಚಲುವರಾಮು ಭರವಸೆ ನೀಡಿದ್ದರು. ಬಳಿಕ ಸಾಲ ಕೊಡುವವರು ಬರುತ್ತಿದ್ದಾರೆ ಬನ್ನಿ ಎಂದು ಲಾಡ್ಜ್ ಗೆ ಕರೆದುಕೊಂಡು ಹೋಗಿದ್ದು, ಸಾಲ ಕೊಡುವವರ ಕಚೇರಿ ಇಲ್ಲೇ ಇದೆ ಎಂದು ಹೇಳಿದ್ದ. ಬಳಿಕ ಮತ್ತು ಬರಿಸಿ ಲಾಡ್ಜ್​ನಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ತಡೆಯೊಡ್ಡಿದ್ದಕ್ಕೆ ಕಪಾಳಕ್ಕೆ ಹೊಡೆದಿದ್ದಾಗಿ ಮಹಿಳೆ ದೂರಿದ್ದಾಳೆ.

ಇದನ್ನೂ ಓದಿ: ಹೊಸ ವರ್ಷಕ್ಕೆ ಅದಲು ಬದಲು: ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಎಕ್ಸ್​​ಚೇಂಜ್ ದಂಧೆ ಬೆಳಕಿಗೆ..!

ಅಲ್ಲದೇ ಬಳಿಕ ವಿಡಿಯೋ ಕಾಲ್ ಮಾಡಿ ನಗ್ನ ದೇಹ ತೋರಿಸುವಂತೆ ಬೆದರಿಕೆ ಹಾಕುತ್ತಿದ್ದ, ನಿನ್ನ ಖಾಸಗಿ ವಿಡಿಯೋ ಇದೆ. ಎಲ್ಲಾ ಕಡೆ ಹಾಕುತ್ತೇನೆ ಎಂದು ಬೆದರಿಕೆ ಹಾಕಿರುವುದಾಗಿ ಮಹಿಳೆ ಸಾತನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈ ದೂರಿನ ಮೇರೆಗೆ ಇದೀಗ ಸಾತನೂರು ಪೊಲೀಸರು, ಬಿಜೆಪಿ ಮುಖಂಡ ಚಲುವರಾಮು ಎನ್ನುವರನ್ನು ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್