AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಿಎಂ ಕುಮಾರಸ್ವಾಮಿ 64ನೇ ಜನ್ಮದಿನದ ಪ್ರಯುಕ್ತ ಇಂದು ರಾಮನಗರದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ

ಇಂದು ಹೆಚ್ ಡಿ ಕುಮಾರಸ್ವಾಮಿ ಅವರ 64 ನೇ ಹುಟ್ಟುಹಬ್ಬ ಹಿನ್ನೆಲೆ ರಾಮನಗರ ಜಿಲ್ಲಾ ಕ್ರೀಡಾಂಗಣದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ.

ಮಾಜಿ ಸಿಎಂ ಕುಮಾರಸ್ವಾಮಿ 64ನೇ ಜನ್ಮದಿನದ ಪ್ರಯುಕ್ತ ಇಂದು ರಾಮನಗರದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ
TV9 Web
| Updated By: Rakesh Nayak Manchi|

Updated on:Dec 16, 2022 | 12:00 PM

Share

ರಾಮನಗರ: ಇಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ (H.D.Kumaraswamy) ಅವರ 64ನೇ ಜನ್ಮ ದಿನ. ರಾಜ್ಯಾದ್ಯಂತ ಜೆಡಿಎಸ್ ಪಂಚರತ್ನ ರಥಯಾತ್ರೆ (JDS Pancharatna Rath Yatra)ಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿರುವ ಇವರು ಇಂದು ಜನ್ಮದಿನದ (Kumaraswamy Birthday) ಪ್ರಯುಕ್ತ ರಾಮನಗರದ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ಇನ್ನೊಂದೆಡೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕನಾಗಿರುವ ಇವರಿಗೆ ಪಕ್ಷದ ಮುಖಂಡರು, ಕಾರ್ಯಕರ್ತರು, ನಾಯಕರುಗಳು ಶುಭಾಶಯಗಳನ್ನು ಕೋರುತ್ತಿದ್ದಾರೆ. ಆದರೆ ಮಾಜಿ ಮುಖ್ಯಮಂತ್ರಿಯಾಗಿರುವ ಇವರಿಗೆ ಹಾಲಿ ಮುಖ್ಯಮಂತ್ರಿಯಾಗಲಿ ಇತರೆ ಪಕ್ಷದ ಘಟಾನುಘಟಿ ನಾಯಕರಾಗಲಿ ಇದುವರೆಗೆ ಶುಭಕೋರಿಲ್ಲ.

ಶುಭಕೋರದ ಮುಖ್ಯಮಂತ್ರಿ ಬೊಮ್ಮಾಯಿ

ಮುಖ್ಯಮಂತ್ರಿ, ಪ್ರಧಾನ ಮಂತ್ರಿ, ಅಥವಾ ರಾಜಕೀಯದಲ್ಲಿ ಸಕ್ರಿಯರಾಗಿರುವ ಮಾಜಿ ಮುಖ್ಯಮಂತ್ರಿ, ಮಾಜಿ ಪ್ರಧಾನ ಮಂತ್ರಿಗಳ ಜನ್ಮದಿನದಂದು ಆಪ್ತರು, ರಾಜಕೀಯ ಸ್ನೇಹಿತರು ಹೆಚ್ಚಾಗಿ ಪಕ್ಷಾತೀತವಾಗಿ ಟ್ವಿಟರ್​ ಮೂಲಕ ಶುಭಾಶಯಗಳನ್ನು ಕೋರುತ್ತಾರೆ. ಆದರೆ ಮಾಜಿ ಮುಖ್ಯಮಂತ್ರಿಯಾಗಿರುವ ಕುಮಾರಸ್ವಾಮಿ ಅವರ ಜನ್ಮದಿನಕ್ಕೆ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ್ಯ ರಾಜಕೀಯ ಪಕ್ಷದ ದೊಡ್ಡದೊಡ್ಡ ನಾಯಕರುಗಳು ಇದುವರೆಗೆ ಒಂದೇ ಒಂದು ಶುಭಾಶಯದ ಟ್ವೀಟ್ ಮಾಡಿಲ್ಲ. ಇವರ ಆಪ್ತ ಸ್ನೇಹಿತರೂ ಆಗಿರುವ ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಕೂಡ ಶುಭಾಶಯ ಕೋರಿ ಟ್ವೀಟ್ ಮಾಡಿಲ್ಲ.

ದೂರವಾಣಿ ಕರೆ ಮಾಡಿದ ಬಿಎಸ್​ವೈ

ಕುಮಾರಸ್ವಾಮಿ ಅವರಿಗೆ ದೂರವಾಣಿ ಕರೆ ಮಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್ಯಡಿಯೂರಪ್ಪ ಅವರು ಜನ್ಮದಿನಕ್ಕೆ ಶುಭಕೋರಿದರು. ಇಂದು ಬೆಳಗ್ಗೆ ಕುಮಾರಸ್ವಾಮಿಗೆ ದೂರವಾಣಿ ಕರೆ ಮಾಡಿ ಹುಟ್ಟು ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.

ಜಿಲ್ಲಾ ಕ್ರೀಡಾಂಗಣದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ

ಕುಮಾರಸ್ವಾಮಿ ಜನ್ಮದಿನದ ಹಿನ್ನಲೆ ರಾಮನಗರ ಜಿಲ್ಲಾ ಕ್ರೀಡಾಂಗಣದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ (Srinivasa Kalyanotsava) ಕಾರ್ಯಕ್ರಮ ಆಯೋಜಿಸಲಾಗಿದ್ದು, ಪಕ್ಷಾತೀತವಾಗಿ ನಡೆಸಲಾಗುತ್ತಿದೆ ಎಂದು ಸ್ವತಃ ಕುಮಾರಸ್ವಾಮಿ ಅವರೇ ಹೇಳಿದ್ದಾರೆ. ಕಾರ್ಯಕ್ರಮಕ್ಕೆ ಈಗಾಗಲೇ ಸಕಲ ಸಿದ್ಧತೆ ನಡೆಸಲಾಗಿದ್ದು, ತಿರುಪತಿ ಮಾದರಿಯಲ್ಲಿ ದೇವಸ್ಥಾನ ನಿರ್ಮಾಣ ಮಾಡಲಾಗಿದೆ. ಈ ಕಾರ್ಯಕ್ರವು ಸಂಜೆ 6 ಘಂಟೆಗೆ ಆರಂಭಗೊಳ್ಳಲಿದೆ.

ಇದನ್ನೂ ಓದಿ: ಕಾಂಗ್ರೆಸ್ ಸೇರ್ಪಡೆಗೆ 2 ಕಾರಣ ಕೊಟ್ಟ ದತ್ತ, ದೇವೇಗೌಡ್ರ ಹತ್ತಿರ ಹೇಳಿಕೊಳ್ಳಲಾಗದೇ ತೊಳಲಾಟಕ್ಕೆ ಒಳಗಾದ ಮೇಷ್ಟ್ರು

ಈ ಬಗ್ಗೆ ಮಾಹಿತಿ ನೀಡಿದ ಕುಮಾರಸ್ವಾಮಿ, ನನ್ನ ಹುಟ್ಟುಹಬ್ಬ ಪ್ರಯುಕ್ತ ರಾಮನಗರದಲ್ಲಿ ಶ್ರೀನಿವಾಸ ಕಲ್ಯಾಣ ನಡೆಯಲಿದೆ. ಪಕ್ಷಾತೀತವಾಗಿ ಮಾಡುತ್ತಿರುವ ಕಾರ್ಯಕ್ರಮ ಇದಾಗಿದೆ. ಪಕ್ಷಕ್ಕೂ ಅದಕ್ಕೂ ಸಂಬಂಧ ಇಲ್ಲ ಎಂದರು. ರಾಮನಗರದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮ ವಿಶೇಷವಾದ ಕಾರ್ಯಕ್ರಮವಾಗಿದೆ. ನಾಡಿನ ನಮ್ಮ ಭಾಗದ ಜನತೆ ಕಲ್ಯಾಣೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ತಿರುಮಲ ದೇವಸ್ಥಾನದಿಂದ 80 ಜನ ಅರ್ಚಕರು ಇರಲಿದ್ದು ಸ್ವತಃ ಅವರೇ ಪೂಜೆ ನೆರವೇರಿಸಲಿದ್ದಾರೆ ಎಂದು ಕುಮಾರಸ್ವಾಮಿ ಮಾಹಿತಿ ನೀಡಿದರು.

ಕಾರ್ಯಕ್ರಮದ ಬಗ್ಗೆ ಟ್ವೀಟ್ ಮಾಡಿದ ಕುಮಾರಸ್ವಾಮಿ, ನಾಡಿನ ಸುಖ ಶಾಂತಿ, ಸಮೃದ್ಧಿಗಾಗಿ ಪ್ರಾರ್ಥಿಸಿ ರಾಮನಗರದಲ್ಲಿ ಇಂದು ಹಮ್ಮಿಕೊಳ್ಳಲಾಗಿರುವ ಶ್ರೀ ಶ್ರೀನಿವಾಸ ಕಲ್ಯಾಣ ಮಹೋತ್ಸವದಲ್ಲಿ ಸಕಲರೂ ಪಾಲ್ಗೊಳ್ಳಬೇಕೆಂದು ವಿನಂತಿ ಮಾಡುತ್ತೇನೆ ಎಂದರು.

ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮಕ್ಕೂ ಮುನ್ನ ರಾಮನಗರ ಪಟ್ಟಣದಲ್ಲಿ ಪಂಚರತ್ನ ರಥಯಾತ್ರೆ ನಡೆಯಲಿದ್ದು, ಟೆಂಪಲ್ ರನ್ ಕೂಡ ಮಾಡಲಿದ್ದಾರೆ. ಅಷ್ಟೇ ಅಲ್ಲದೆ ಇಂದು ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಿದ್ದು, ರಾಮನಗರದಿಂದ ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿಯನ್ನಾಗಿ ಘೋಷಣೆ ಸಾಧ್ಯತೆಯೂ ಇದೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:55 am, Fri, 16 December 22