AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ನವಜಾತ ಶಿಶುವನ್ನು ಟಾಯ್ಲೆಟ್​ಗೆ ಹಾಕಿ ಫ್ಲಶ್, ಹಾರೋಹಳ್ಳಿಯಲ್ಲಿ ಮನುಕುಲವೇ ಬೆಚ್ಚಿ ಬೀಳುವ ಘಟನೆ

ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಆಸ್ಪತ್ರೆಯೊಂದರಲ್ಲಿ ಇಡೀ ಮಾನವ ಕುಲವೇ ತಲೆತಗ್ಗಿಸುವಂಥ ಆಘಾತಕಾರಿ ಮತ್ತು ಅಮಾನವೀಯ ಘಟನೆಯೊಂದು ನಡೆದಿರುವುದು ತಿಳಿದುಬಂದಿದೆ. ನವಜಾತ ಶಿಶುವೊಂದನ್ನು ಟಾಯ್ಲೆಟ್​ಗೆ ಹಾಕಿ ಫ್ಲಶ್ ಮಾಡಿದ ವಿದ್ಯಮಾನ ಬೆಳಕಿಗೆ ಬಂದಿದ್ದು, ಘಟನೆ ಸಂಬಂಧ ಇದೀಗ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ರಾಮನಗರ: ನವಜಾತ ಶಿಶುವನ್ನು ಟಾಯ್ಲೆಟ್​ಗೆ ಹಾಕಿ ಫ್ಲಶ್, ಹಾರೋಹಳ್ಳಿಯಲ್ಲಿ ಮನುಕುಲವೇ ಬೆಚ್ಚಿ ಬೀಳುವ ಘಟನೆ
ಘಟನೆ ನಡೆದ ಹಾರೋಹಳ್ಳಿಯ ಆಸ್ಪತ್ರೆಯ ಆವರಣ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on: Nov 28, 2024 | 12:19 PM

Share

ರಾಮನಗರ, ನವೆಂಬರ್ 28: ಮಾನವ ಕುಲವೇ ಬೆಚ್ಚಿಬೀಳುವಂಥ ಆಘಾತಕಾರಿ ಕೃತ್ಯವೊಂದು ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಆಸ್ಪತ್ರೆಯೊಂದರಲ್ಲಿ ನಡೆದಿದೆ. ಆಗತಾನೆ ಜನಿಸಿರುವ ಶಿಶುವೊಂದನ್ನು ಶೌಚಾಲಯದ ಗುಂಡಿಗೆ ಹಾಕಿ ಫ್ಲಶ್ ಮಾಡಲಾಗಿದೆ. ಬುಧವಾರ ರಾತ್ರಿ ನಡೆದ ಈ ಅಮಾನವೀಯ ವಿದ್ಯಮಾನ ಇಂದು ಬೆಳಕಿಗೆ ಬಂದಿದ್ದು, ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾರೋಹಳ್ಳಿಯ ಆಸ್ಪತ್ರೆಯಲ್ಲಿ ನಡೆದಿದ್ದೇನು?

ಬುಧವಾರ ರಾತ್ರಿ 10:30 ರ‌ ಸಮಯದಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ. ಆಸ್ಪತ್ರೆಯ ನೆಲಮಹಡಿಯ ಟಾಯ್ಲೆಟ್​ಗೆ ತೆರಳಿದ್ದ ವೈದ್ಯಕೀಯ ಸಿಬ್ಬಂದಿಗೆ ಮಹಿಳೆಯರ ಟಾಯ್ಲೆಟ್​​ನಲ್ಲಿ‌ ನೀರು ನಿಂತಿರುವುದು ಗಮನಕ್ಕೆ ಬಂದಿದೆ. ನೀರು ಫ್ಲಶ್ ಆಗದ ಕಾರಣ‌ ವೈದ್ಯಕೀಯ ಸಿಬ್ಬಂದಿ ಟಾಯ್ಲೆಟ್ ಅನ್ನು ಸ್ವಚ್ಛಗೊಳಿಸಲು ಸಿಬ್ಬಂದಿಗೆ ಸೂಚನೆ ನೀಡಿದ್ದರು. ಅದರಂತೆ, ಸಿಬ್ಬಂದಿ ವ್ಯಾಕ್ಯೂಮ್‌ನಿಂದ ಕ್ಲೀನ್ ಮಾಡಿದ್ದಾರೆ. ಆಗ, ಏನೋ‌ ವಸ್ತು ಅಡ್ಡ ಇರುವುದು ಪತ್ತೆಯಾಗಿದೆ. ಆರಂಭದಲ್ಲಿ, ಬಟ್ಟೆ ಅಥವಾ ಏನಾದರು ಕೊಳೆ ಇರಬಹುದು ಎಂದು ಅವರು ಶಂಕಿಸಿದ್ದಾರೆ.

ಟಾಯ್ಲೆಟ್ ಗುಂಡಿಯಲ್ಲಿ ಸಿಕ್ಕಿಹಾಕಿಕೊಂಡಿತ್ತು ಶಿಶುವಿನ ದೇಹ!

ಟಾಯ್ಲೆಟ್ ಶುಚಿಗೊಳಿಸುವ, ಬ್ಲಾಕ್ ನಿರ್ಮೂಲನೆಗೊಳಿಸುವ ಪರಿಕರವನ್ನು ಬಳಸಿ ಒಳಗೆ ಸಿಕ್ಕಿಹಾಕಿಕೊಂಡಿದ್ದ ವಸ್ತುವನ್ನು ಹೊರ ತೆಗೆದಾಗ ಸಿಬ್ಬಂದಿ ಆಘಾತಕ್ಕೊಳಗಾಗಿದ್ದರು. ನವಜಾತ ಶಿಶುವಿನ ದೇಹ ಅವರಿಗೆ ಸಿಕ್ಕಿದೆ. ಶಿಶು ಜನಿಸಿ ಒಂದೆರಡು ದಿನ ಆಗಿರಬಹುದು ಎಂದು ಅಂದಾಜಿಸಲಾಗಿದೆ.

ಟಾಯ್ಲೆಟ್ ಒಳಗೆ ನವಜಾತ ಶಿಶು ಹೇಗೆ ಬಂದಿರಬಹುದು ಎಂದು ಆಸ್ಪತ್ರೆ ಸಿಬ್ಬಂದಿ ಶಾಕ್ ಆಗಿದ್ದಾರೆ. ಯಾವ ತಾಯಿ ಕೂಡ ಹೀಗೆ ಮಾಡಲು ಸಾಧ್ಯವೇ ಎಂದು ಸ್ಥಳದಲ್ಲಿದ್ದವರು ಕಳವಳ ವ್ಯಕ್ತಪಡಿಸಿದ್ದಾರೆ. ಅದೇ‌ ಆಸ್ಪತ್ರೆಯಲ್ಲಿ ಶಿಶುವಿನ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

ಇದನ್ನೂ ಓದಿ: ರಾಮನಗರ: ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇಯಲ್ಲಿ ಭೀಕರ ಅಪಘಾತ, ಮೂವರು ಸಾವು

ಆಸ್ಪತ್ರೆಗೆ ಬಂದು ಶಿಶುವಿಗೆ ಜನ್ಮ ಕೊಟ್ಟಿರುವುದೇ ಅಥವಾ ಮಗು ಜನಿಸಿದ್ದನ್ನು ಮುಚ್ಚಿಡಲು ಮಾಡಿದ ಕೃತ್ಯವೇ ಎಂಬ ಬಗ್ಗೆ ಸದ್ಯ ತನಿಖೆ ನಡೆಸಲಾಗುತ್ತಿದೆ. ಆಸ್ಪತ್ರೆಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆಗೆ ಒಳಪಡಿಸಲಾಗುತ್ತಿದೆ. ಇನ್ನಷ್ಟು ವಿಚಾರಗಳು ತನಿಖೆಯಿಂದ ತಿಳಿದುಬರಬೇಕಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ